ವಿಜಯ ದರ್ಪಣ ನ್ಯೂಸ್………
ಕೆ.ಆರ್. ಆಸ್ಪತ್ರೆಯಲ್ಲಿ ನೂತನ ಸುಸಜ್ಜಿತ ಐಸಿಯು ಘಟಕ ಉದ್ಘಾಟಿಸಿದ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ತಾಂಡವಪುರ ನವಂಬರ7: ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಮೈಸೂರಿನ ಜಿಲ್ಲಾ ಆಸ್ಪತ್ರೆ ಕೆ.ಆರ್. ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸುಸಜ್ಜಿತ ತೀವ್ರ ನಿಗಾ ಘಟಕ (ಐಸಿಯು)ವನ್ನು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಎಸ್. ಯತೀಂದ್ರ ಸಿದ್ದರಾಮಯ್ಯ ರವರು ಇಂದು ಉದ್ಘಾಟಿಸಿದರು.
ಬಳಿಕ ಮಾತಾಡಿದ ಸಚಿವರು ಬಡ ಮತ್ತು ಮಧ್ಯಮ ವರ್ಗದ ರೋಗಿಗಳಿಗೆ ತುರ್ತು ಸಂದರ್ಭಗಳಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳೊಂದಿಗೆ ಗುಣಮಟ್ಟದ ಚಿಕಿತ್ಸೆ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಈ ಘಟಕವನ್ನು ನಿರ್ಮಿಸಲಾಗಿದೆ. ನೂತನ ಐಸಿಯು ಘಟಕದಿಂದ ತುರ್ತು ಚಿಕಿತ್ಸೆಯ ಅಗತ್ಯವಿರುವ ರೋಗಿಗಳಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಮೈಸೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸುವಲ್ಲಿ ಸಹಕಾರಿಯಾಗಲಿದೆ. ಎಂದು ಹೇಳಿದರು
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಕೆ.ಆರ್. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಶೋಭಾ, ಡೀನ್ ಡಾ. ಮುದಸ್ಸಿರ್ ಸೇರಿದಂತೆ ಆಸ್ಪತ್ರೆಯ ಹಿರಿಯ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರು ಹಾಗೂ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು











