ವಿಜಯ ದರ್ಪಣ ನ್ಯೂಸ್…..
ಸಮಾಜಸೇವಕ ಗುಳ್ಳು ನಾಗರಾಜ್ ಅವರಿಗೆ 60ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ

ತಾವರೆಕೆರೆ : ಹೊಸಕೋಟೆ ಪುರಸಭೆ ಹಾಗೂ ನಗರಸಭೆಯ ಸದಸ್ಯರಾಗಿ ಕಾರ್ಯನಿರ್ವಹಿಸುವ ಮೂಲಕ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹಾಗೂ ತಾಲೂಕಿನ ಒಬ್ಬ ಪ್ರಮುಖ ಸಮಾಜಸೇವಕರಾಗಿ ಗುರುತಿಸಿಕೊಂಡಿರುವ ಗುಳ್ಳು ನಾಗರಾಜ್ ಅವರ 60ನೇ ವರ್ಷದ ಹುಟ್ಟುಹಬ್ಬವನ್ನು ಕುಟುಂಬಸ್ಥರು ಹಾಗೂ ತಾಲೂಕಿನ ವಿವಿಧ ಮುಖಂಡರ ಸಮ್ಮುಖದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಸಾರ್ವಜನಿಕ ಜೀವನದಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಗುಳ್ಳು ನಾಗರಾಜ್ ಅವರು, ವಿವಿಧ ಸಮಾಜಮುಖಿ ಹಾಗೂ ಜನಪರ ಕಾರ್ಯಗಳ ಮೂಲಕ ತಾಲೂಕಿನ ಜನರೊಂದಿಗೆ ಉತ್ತಮ ಒಡನಾಟ ಹೊಂದಿದ್ದು, ತಮ್ಮದೇ ಆದ ಗೌರವ ಮತ್ತು ಸ್ಥಾನಮಾನವನ್ನು ಗಳಿಸಿಕೊಂಡಿದ್ದಾರೆ. ಬಡವರು, ನಿರ್ಗತಿಕರು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸಮಾಜಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಇದೇ ಸಂದರ್ಭದಲ್ಲಿ ತಾಲೂಕಿನ ಹಿರಿಯ ಮುಖಂಡರಾದ ಜಿಟಿ ಕೇಬಲ್ ಮೋಹನ್ ಅವರು ಮಾತನಾಡಿ, ಗುಳ್ಳು ನಾಗರಾಜ್ ಅವರ ಸುದೀರ್ಘ ರಾಜಕೀಯ ಜೀವನ, ಸಾರ್ವಜನಿಕರೊಂದಿಗೆ ಹೊಂದಿರುವ ಆತ್ಮೀಯ ಒಡನಾಟ ಹಾಗೂ ಸಮಾಜಮುಖಿ ಕಾರ್ಯಗಳನ್ನು ಸ್ಮರಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಸಾರ್ವಜನಿಕ ಜೀವನದಲ್ಲಿ ಅವರು ಸಲ್ಲಿಸಿರುವ ಸೇವೆ ಇತರರಿಗೆ ಮಾದರಿಯಾಗಿದ್ದು, ಮುಂದಿನ ದಿನಗಳಲ್ಲಿಯೂ ಇದೇ ರೀತಿಯಲ್ಲಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡು ಉತ್ತಮ ಆರೋಗ್ಯ, ಆಯುಷ್ಯ ಹಾಗೂ ಯಶಸ್ಸು ಹೊಂದಲಿ ಎಂದು ಹಾರೈಸಿ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕಿನ ಹಲವು ಗಣ್ಯರು, ರಾಜಕೀಯ ಮುಖಂಡರು, ಸ್ನೇಹಿತರು, ಹಿತೈಷಿಗಳು ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದು, ಗುಳ್ಳು ನಾಗರಾಜ್ ಅವರಿಗೆ 60ನೇ ವರ್ಷದ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು.








