--Ads--

ಹೊಸಕೋಟೆ ತಾಲೂಕು ವಕೀಲರ ಸಂಘದ ವತಿಯಿಂದ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಜಾಥಾ

On: November 14, 2026 5:40 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ಹೊಸಕೋಟೆ ತಾಲೂಕು ವಕೀಲರ ಸಂಘದ ವತಿಯಿಂದ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಜಾಥಾ

ಮಕ್ಕಳ ದಿನಾಚರಣೆಯ ಅಂಗವಾಗಿ ಹೊಸಕೋಟೆ ತಾಲೂಕು ಕಾನೂನು ಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದ ವತಿಯಿಂದ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ತಾವರೆಕೆರೆ : ಹೊಸಕೋಟೆ ನಗರದ ಚನ್ನಬೈರೇಗೌಡ ಕ್ರೀಡಾಂಗಣದಿಂದ ಆರಂಭವಾದ ಜಾಗೃತಿ ಜಾಥಾವು ಹೂ ಮಂಡಿ ಸರ್ಕಲ್ ಹಾಗೂ ಕೆಇಬಿ ಸರ್ಕಲ್ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಮದ್ ರಫೀಕ್ ಉಲ್ಲಾ ಅವರು, ಮಾದಕ ವಸ್ತುಗಳ ವ್ಯಸನವು ವ್ಯಕ್ತಿಯ ಆರೋಗ್ಯ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ವಿಶೇಷವಾಗಿ ಯುವಜನತೆ ಮತ್ತು ವಿದ್ಯಾರ್ಥಿಗಳು ಇಂತಹ ದುಶ್ಚಟಗಳಿಂದ ದೂರವಿದ್ದು, ಶಿಕ್ಷಣ, ಕ್ರೀಡೆ ಹಾಗೂ ಉತ್ತಮ ಹವ್ಯಾಸಗಳತ್ತ ಗಮನಹರಿಸಬೇಕು. ಮಕ್ಕಳನ್ನು ಮಾದಕ ವಸ್ತುಗಳ ದುಷ್ಪರಿಣಾಮಗಳಿಂದ ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ವಕೀಲರ ಸಂಘದ ಅಧ್ಯಕ್ಷ ರಾಧಾಕೃಷ್ಣ ಅವರು ಮಾತನಾಡಿ, ಇಂದಿನ ಯುವಜನತೆ ಮಾದಕ ವಸ್ತುಗಳ ಆಕರ್ಷಣೆಗೆ ಒಳಗಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಮಾದಕ ವಸ್ತುಗಳ ಬಳಕೆ ಹಾಗೂ ಮಾರಾಟದ ವಿರುದ್ಧ ಸಾರ್ವಜನಿಕರು ಜಾಗೃತರಾಗಬೇಕು. ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮ ಸಂಸ್ಕಾರ, ಶಿಕ್ಷಣ ಮತ್ತು ಸಾಮಾಜಿಕ ಅರಿವು ಮೂಡಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಈ ಜಾಗೃತಿ ಜಾಥಾದ ಮೂಲಕ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವ ಪ್ರಯತ್ನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ರಾಜಪ್ಪ. ಹಿರಿಯ ವಕೀಲ ಹರೇಂದ್ರ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಪದ್ಮನಾಭ. ಮಹಿಳಾ ಮಕ್ಕಳ ಕಲ್ಯಾಣ ಅಧಿಕಾರಿ ಶಿವಮ್ಮ. ಇನ್ಸ್ಪೆಕ್ಟರ್ ವಸಂತ್ ಕುಮಾರ್. ಆರೋಗ್ಯ ಇಲಾಖೆಯ. ಡಾ.ಜುಲೇಖ. ವಕೀಲ ಪ್ರಕಾಶ್ ಮೂರ್ತಿ. ಹಾಗೂ ಸಾರ್ವಜನಿಕರು .ಮಕ್ಕಳು. ಶಿಕ್ಷಕರು ಹಾಜರಿದ್ದರು..

WhatsApp

Join Now

Telegram

Join Now

Instagram

Join Now