--Ads--

ತಹಸೀಲ್ದಾರ್ ಅನಿಲ್ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

On: November 14, 2026 6:15 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಪ್ರಜಾ ಸೇವಾ ಆಂದೋಲನ
 ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಗ್ರಾಮದಲ್ಲಿ ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆ

ತಹಸೀಲ್ದಾರ್ ಅನಿಲ್ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆ.  ನ.14

ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಗ್ರಾಮದಲ್ಲಿ ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ ತಹಸೀಲ್ದಾರ್ ಅನಿಲ್ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ದೇವನಹಳ್ಳಿ ತಾಲೂಕು ಕುಂದಾಣ ಹೋಬಳಿಯ ವಿಶ್ವನಾಥಪುರ ಗ್ರಾಮ ಪಂಚಾಯಿತಿಯ ಕೆ ಪಿ ಎಸ್ ಶಾಲೆಯ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಸಾರ್ವಜನಿಕರ ಸಮಸ್ಯೆ ಆಲಿಸಿ ಬಳಿಕ ಮಾತನಾಡಿದ ಅವರು ಸಾರ್ವಜನಿಕರ ಅವಹಾಲುಗಳಿಗೆ ತ್ವರಿತ ಪರಿಹಾರ ಜೊತೆಗೆ ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, 30 ದಿನದೊಳಗೆ ಪರಿಹರಿಸಲಾಗುವುದು ಎಂದರು.

ಸರ್ಕಾರಿ ಸೇವೆಗಳು ಅರ್ಹರಿಗೂ ತಲುಪುವಂತೆ ಮಾಡುವುದು ಮತ್ತು ಸಮಸ್ಯೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದು ಇದರ ಸದುದ್ದೇಶ ಎಂದು ತಿಳಿಸಿದರು.

ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು ಮಾತನಾಡಿ ಭೂ ಗ್ಯಾರಂಟಿ ಯೋಜನೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ಈಗಾಗಲೇ ಜಾರಿಯಲ್ಲಿದೆ ತಾವುಗಳು ಈ ಸ್ವತ್ತುಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಗ್ರಾಮ ಪಂಚಾಯತ್ ಸಲ್ಲಿಸಿದರೆ ನಿಯಮನುಸಾರ ಶೀಘ್ರವಾಗಿ ವಿಲೇವಾರಿ ಮಾಡಲಾಗುವುದು ಹಾಗೂ ಈ ಸೌಲಭ್ಯವನ್ನು ಸಾರ್ವಜನಿಕರು ಪಡೆದು ಕೊಳ್ಳ ಬೇಕು ಎಂದು ತಿಳಿಸಿದರು.

ಪೋಡಿ, ಪಹಣಿ ತಿದ್ದುಪಡಿ, ಹಕ್ಕು ಪತ್ರ, ವಸತಿ, ನಿವೇಶನ, ಪಿಂಚಣಿ, ರೇಶನ್ ಕಾರ್ಡ್ ಸೇರಿದಂತೆ ಕಂದಾಯ, ಪಂಚಾಯತ್ ರಾಜ್ ಇಲಾಖೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಸಾರ್ವಜನಿಕರು ಸಲ್ಲಿಸಿದರು.

ಸಭೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now