ವಿಜಯ ದರ್ಪಣ ನ್ಯೂಸ್…..
ತಾವರೆಕೆರೆ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಮಕ್ಕಳಿಗಾಗಿ ಮಕ್ಕಳ ದಿನಾಚರಣೆ ಸಂಭ್ರಮ

ತಾವರೆಕೆರೆ : ಹೊಸಕೋಟೆ ತಾಲೂಕಿನ ತಾವರೆಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಮಕ್ಕಳಿಗಾಗಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಮಕ್ಕಳನ್ನೇ ಮುಖ್ಯ ಅತಿಥಿಗಳನ್ನಾಗಿ ಮಾಡಿ, ಅವರಿಂದಲೇ ಕಾರ್ಯಕ್ರಮವನ್ನು ನಡೆಸಿಕೊಡಲಾಯಿತು. ಮಕ್ಕಳಿಗೆ ನಾಯಕತ್ವದ ಗುಣ, ಆತ್ಮವಿಶ್ವಾಸ ಹಾಗೂ ವೇದಿಕೆ ನಿರ್ವಹಣೆಯ ಅನುಭವ ನೀಡುವ ಉದ್ದೇಶದಿಂದ ಆಯೋಜಿಸಿದ ಈ ಕಾರ್ಯಕ್ರಮ ಗಮನ ಸೆಳೆಯಿತು.
ಇದೇ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಪ್ರವೀಣ್ ಕುಮಾರ್ ಮಾತನಾಡಿ, ಮಕ್ಕಳ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಇಂದಿನ ವಿದ್ಯಾರ್ಥಿಗಳು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಹೊಂದಿರಬೇಕು. ಇಂತಹ ದುಶ್ಚಟಗಳಿಂದ ದೂರವಿದ್ದು, ಪುಸ್ತಕಗಳ ಓದಿನ ಕಡೆಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು. ಉತ್ತಮ ಶಿಕ್ಷಣ ಪಡೆದು ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ ಪ್ರವೀಣ್ ಕುಮಾರ್, ಎಸ್ಡಿಎಂಸಿ ಸದಸ್ಯರಾದ ಮಮೃತ, ಮೋನಿಕಾ, ನಂದಿನಿ, ಶಾಲೆಯ ಸಹ ಶಿಕ್ಷಕರಾದ ಗೋವಿಂದಪ್ಪ, ಸ್ನೇಹ ಹೆಗ್ಡೆ, ಕನಕಮ್ಮ, ರಾಧಿಕಾ, ಪವಿತ್ರ, ಕವಿತಾ, ಮಂಜುಳಾ ಸೇರಿದಂತೆ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
@@@@@@@@@@@@@@@@
ಕ್ರಾಂತಿವೀರ ಸಂಗೂಳ್ಳಿ ರಾಯಣ್ಣ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿದ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಆಚರಣೆ

ಹಾಸನ ಜ : ಚನ್ನರಾಯಪಟ್ಟಣದ ರೈಲ್ವೆ ನಿಲ್ದಾಣದ ಹತ್ತಿರ ಕ್ರಾಂತಿವೀರ ಸಂಗೂಳ್ಳಿ ರಾಯಣ್ಣ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಶಾಸಕ ಸಿ ಎನ್ ಬಾಲಕೃಷ್ಣ, ಬಿಜೆಪಿ ಮುಖಂಡ ಚಿದಾನಂದಗೌಡ, ಮಾಜಿ ಶಾಸಕ ಎಂ.ಎ.ಗೋಪಾಲಸ್ವಾಮಿ, ಡಾ| ಮಹೇಶ್ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು ಸರ್ವ ಸದಸ್ಯರುಗಳು ಜೋತೆಗೆ ಸಾಹಿತಿಗಳು, ಶಿಕ್ಷಕರು, ಸಮಾಜ ಸೇವಕರು, ಪತ್ರಕತ೯ರಿಗೆ ಸನ್ಮಾನವನ್ನು ಮಾಡಿ ಸಂಗೊಳ್ಳಿ ರಾಯಣ್ಣ ಬಾವ ಚಿತ್ರಕ್ಕೆ ಶಾಸಕರು, ಬಿಜೆಪಿ ಮುಖಂಡ ಚಿದಾನಂದ ಸಂಘ ಸದಸ್ಯರಿಂದ ನಡೆಯಿತು. ಪಟ್ಟಣ ಮುಖ್ಯ ರಸ್ತೆಗಳಲ್ಲಿ ಕನ್ನಡಾಂಬೆ, ಸಂಗೋಳಿ ರಾಯಣ್ಣ, ಗಣ್ಯರ -ಹಿರಿಯ ಕವಿ, ಸಾಹಿತಿಗಳ ಬಾವ ಚಿತ್ರದೊಂದಿಗೆ ಮೆರವಣಿಗೆ ಮಾಡಲಾಯಿತು ಎಂದು ಸಂಘದ ಚಾಲಕರು, ಮತ್ತು ಮಾಲೀಕರುಗಳು ತಿಳಿಸಿದ್ದಾರೆ.










