ವಿಜಯ ದರ್ಪಣ ನ್ಯೂಸ್…..
ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಂಘದ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜಯಂತಿ ಆಚರಣೆ
ತಾಂಡವಪುರ ನವಂಬರ್ 15 : ಮೈಸೂರಿನ ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಮೈಸೂರು ವಿಭಾಗದ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಂಘದ ವತಿಯಿಂದ ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜಯಂತಿ ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು
ಜಯಂತಿಯ ಪ್ರಯುಕ್ತ ಆಯೋಜಿಸಲಾಗಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ದಲಿತ ಚಳುವಳಿ ಮತ್ತು ವಿಶೇಷ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ
ಮಹನೀಯರಿಗೆ ಅಭಿನಂದನಾ ಸಮಾರಂಭದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯನವರು ಭಾಗವಹಿಸಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಿ ಗೌರವಿಸಿ ಅಭಿನಂದನೆ ಸಲ್ಲಿಸಿ ಸಮಾರಂಭದಲ್ಲಿ ಮಾತನಾಡುತ್ತ ಶತಮಾನಗಳಿಂದ ಶೋಷಣೆ ಮತ್ತು ನೋವನ್ನು ಅನುಭವಿಸಿರುವ ಸಮುದಾಯದ ಯುವಜನರಲ್ಲಿ ಆತ್ಮವಿಶ್ವಾಸ, ಸ್ವಾಭಿಮಾನ ಹಾಗೂ ಸಾಧನೆಯ ಹಂಬಲವನ್ನು ಮೂಡಿಸುವ ಇಂತಹ ಕಾರ್ಯಕ್ರಮಗಳು ಅತ್ಯಂತ ಮಹತ್ವದ್ದಾಗಿವೆ ಎಂದು ತಿಳಿಸಿದರು
ದೇಶದಲ್ಲಿ ಜಾತೀಯತೆ ಇನ್ನೂ ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ. ಸಂವಿಧಾನಬದ್ಧ ಸಮಾನತೆಯ ಆಶಯ ಸಾಕಾರಗೊಳ್ಳಲು ಇನ್ನೂ ಸಾಕಷ್ಟು ದೂರ ಸಾಗಬೇಕಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಜನರು ಶಿಕ್ಷಣದಲ್ಲಿ ಉನ್ನತ ಸಾಧನೆ ಮಾಡುವುದರ ಜೊತೆಗೆ ಉನ್ನತ ಹುದ್ದೆಗಳನ್ನು ಅಲಂಕರಿಸುವ ಗುರಿ ಹೊಂದಬೇಕು ಎಂದು ಸಚಿವರು ತಿಳಿಸಿದರು
ಬಾಬಾಸಾಹೇಬರು ಪ್ರತಿಪಾದಿಸಿದ ‘ಶಿಕ್ಷಣ, ಸಂಘಟನೆ ಮತ್ತು ಹೋರಾಟ’ ಎಂಬ ತತ್ವವನ್ನು ಜೀವನದ ಮಾರ್ಗದರ್ಶಿಯಾಗಿ ಸ್ವೀಕರಿಸಿ, ನಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಹೋರಾಡಬೇಕು. ಹಿಂದುಳಿದ ಸಮುದಾಯಗಳಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮಾನತೆ ನೆಲೆಸಿದಾಗ ಮಾತ್ರ ನಿಜವಾದ ಅಭಿವೃದ್ಧಿ ಸಾಧ್ಯ ವೈಯಕ್ತಿಕವಾಗಿ ಸಾಧನೆ ಮಾಡಿದ ಪ್ರತಿಯೊಬ್ಬರೂ ತಮ್ಮ ಸಮುದಾಯದ ಏಳಿಗೆಗೂ ಕೈಜೋಡಿಸಬೇಕು ಎಂದು ಹೇಳಿದರು

ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಗಣನೀಯ ಸೇವೆ ಸಲ್ಲಿಸಿದ ಗಣ್ಯರು, ಸಂಘಟನೆಯ ಪದಾಧಿಕಾರಿಗಳು ಹಾಗೂ ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಿ ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ‘ಇವನಾರವ’ ಚಲನಚಿತ್ರದ ಪೋಸ್ಟರ್ ಹಾಗೂ ಟೀಸರ್ ಬಿಡುಗಡೆ ಮಾಡಿದ ಸಚಿವರು
ಈ ಸಂದರ್ಭದಲ್ಲಿ ಉರಿಲಿಂಗ ಪೆದ್ದಿ ಮಠದ ಆಯುಷ್ಮಾನ್ ಜ್ಞಾನಪ್ರಕಾಶ ಸ್ವಾಮೀಜಿ, ಜೇತವನ ಬುದ್ಧ ವಿಹಾರದ ಆಯುಷ್ಮಾನ್ ಮನೋರಖಿತ ಬಂತೇಜಿ, ವಿಶ್ವಮೈತ್ರಿ ಬುದ್ಧ ವಿಹಾರದ ಆಯುಷ್ಮಾನ್ ಡಾ. ಕಲ್ಯಾಣಸಿರಿ ಬಂತೇಜಿ, ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಂಘದ ರಾಜ್ಯಾಧ್ಯಕ್ಷ ಆಯುಷ್ಮಾನ್ ಡಾ. ಡಿ. ಚಂದ್ರಶೇಖರಯ್ಯ, ಮೈಸೂರು ಜಿಲ್ಲಾಧ್ಯಕ್ಷ ಆಯುಷ್ಮಾನ್ ಡಾ. ಎಂ.ಡಿ. ಶಿವರಾಮಕೃಷ್ಣ ಸೇರಿದಂತೆ ಹಲವು ಅಂಬೇಡ್ಕರ್ವಾದಿಗಳು, ಸಮುದಾಯದ ಮುಖಂಡರು ಹಾಗೂ ಗಣ್ಯರು ಹಾಗೂ ಮುಂತಾದವರು ಹಾಜರಿದ್ದರು











