ವಿಜಯ ದರ್ಪಣ ನ್ಯೂಸ್………
ಬುಡಕಟ್ಟು ಸಮುದಾಯದ ಹಕ್ಕು, ಅಸ್ಮಿತೆಗೆ ಹೋರಾಡಿದ ನಾಯಕ ಭಗವಾನ್ ಬಿರ್ಸಾ ಮುಂಡಾ : ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

ತಾಂಡವಪುರ ನವಂಬರ್ 15 : ಬ್ರಿಟಿಷರ ವಸಾಹತುಶಾಹಿ ಆಡಳಿತದ ವಿರುದ್ಧ ಹೋರಾಡಿ, ಬುಡಕಟ್ಟು ಸಮುದಾಯಗಳ ಹಕ್ಕು, ಅಸ್ಮಿತೆ ಮತ್ತು ಸ್ವಾಭಿಮಾನಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಭಗವಾನ್ ಬಿರ್ಸಾ ಮುಂಡಾಭಗವಾನ್ ಶ್ರೀ ಬಿರ್ಸಾ ಮುಂಡಾ (ಜನಜಾತಿಯ ಗೌರವ ದಿವಸ್) ಅವರ 151ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ರವರು ಅಭಿಪ್ರಾಯ ವ್ಯಕ್ತಪಡಿಸಿದರು
ಅವರು ಇಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಭಗವಾನ್ ಶ್ರೀ ಬಿರ್ಸಾ ಮುಂಡಾ (ಜನಜಾತಿಯ ಗೌರವ ದಿವಸ್) ಅವರ 151ನೇ ಜಯಂತಿ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿ ಮಾತನಾಡುತ್ತಾ ಬ್ರಿಟಿಷರ ವಸಾಹತುಶಾಹಿ ಆಡಳಿತದ ವಿರುದ್ಧ ಹೋರಾಡಿ, ಬುಡಕಟ್ಟು ಸಮುದಾಯಗಳ ಹಕ್ಕು, ಅಸ್ಮಿತೆ ಮತ್ತು ಸ್ವಾಭಿಮಾನಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಭಗವಾನ್ ಬಿರ್ಸಾ ಮುಂಡಾ ಅವರ ಹೋರಾಟ ಮತ್ತು ತ್ಯಾಗ ಸದಾ ಸ್ಮರಣೀಯ. ಅವರ ಆದರ್ಶಗಳು ಇಂದಿನ ಪೀಳಿಗೆಗೂ ಸ್ಫೂರ್ತಿಯಾಗಿವೆ ಎಂದು ಹೇಳುವ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು
ಬುಡಕಟ್ಟು ಸಮುದಾಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಶಿಕ್ಷಣವೇ ಅವರ ಹಕ್ಕುಗಳ ಅರಿವು ಮೂಡಿಸಿ, ತಮ್ಮ ಹಕ್ಕು ಮತ್ತು ಸ್ವಾಭಿಮಾನಕ್ಕಾಗಿ ಧ್ವನಿ ಎತ್ತುವ ಶಕ್ತಿಯನ್ನು ನೀಡುತ್ತದೆ. ಆದ್ದರಿಂದ ಪ್ರತಿಯೊಬ್ಬ ಪೋಷಕರೂ ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದ ಸಚಿವರು
ಸಾಮಾಜಿಕ ನ್ಯಾಯ, ಸಮಾನ ಅವಕಾಶ ಮತ್ತು ಸರ್ವರನ್ನೂ ಒಳಗೊಂಡ ಅಭಿವೃದ್ಧಿಯ ಆಶಯದೊಂದಿಗೆ ನಮ್ಮ ಸರ್ಕಾರ ಆದಿವಾಸಿ ಹಾಗೂ ಬುಡಕಟ್ಟು ಸಮುದಾಯಗಳ ಏಳಿಗೆಗೆ ಸದಾ ಬದ್ಧವಾಗಿದೆ ಎಂದು ಸಚಿವರು ತಿಳಿಸಿದರು
ಇದೇ ಸಂದರ್ಭದಲ್ಲಿ ಶೈಕ್ಷಣಿಕವಾಗಿ ಅತ್ಯಧಿಕ ಅಂಕ ಗಳಿಸಿದ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳನ್ನು ಗೌರವಿಸಿ, ಅಭಿನಂದಿಸಿದ ಸಚಿವರು ವಿದ್ಯಾರ್ಥಿಗಳ ಈ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು
ಬುಡಕಟ್ಟು ಸಮುದಾಯದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ವಿಶೇಷ ಆದ್ಯತೆ ನೀಡುವ ನಿಟ್ಟಿನಲ್ಲಿ ಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ಹಾಗೂ ಭಗವಾನ್ ಶ್ರೀ ಬಿರ್ಸಾ ಮುಂಡಾ ಅವರ ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದಲೂ ಆಚರಿಸುವಂತೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದೆ.
ಈ ಹಿಂದೆ ವರ್ಷಪೂರ್ತಿ ಆಹಾರ ಕಿಟ್ ವಿತರಣೆ ಸೇರಿದಂತೆ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದ ಹೆಚ್.ಡಿ. ಕೋಟೆ ಕ್ಷೇತ್ರದ ಶಾಸಕ ಶ್ರೀ ಅನಿಲ್ ಚಿಕ್ಕಮಾದು ಅವರಿಗೆ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಸಲ್ಲಿಸಿದೆ. ಬುಡಕಟ್ಟು ಸಮುದಾಯದ ಮುಖಂಡರು ನೀಡಿದ ವಿವಿಧ ಬೇಡಿಕೆಗಳ ಮನವಿಯನ್ನು ಸ್ವೀಕರಿಸಿ, ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು
ಈ ಸಂದರ್ಭದಲ್ಲಿ ಹೆಚ್.ಡಿ. ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ನ ನಿಕಟಪೂರ್ವ ಅಧ್ಯಕ್ಷ ಡಾ. ಬಿ.ಜೆ. ವಿಜಯ್ ಕುಮಾರ್, ಕರ್ನಾಟಕ ಸರ್ಕಾರದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಡಾ. ಅಶೋಕ್ ಡಿ. ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪನಿರ್ದೇಶಕಿ ಆರ್. ಗಿರಿಜಾಂಬ ಹೆಚ್.ಎಸ್ ಮತ್ತಿತರರು ಹಾಗೂ ವಿದ್ಯಾರ್ಥಿಗಳು ಮುಂತಾದವರು ಹಾಜರಿದ್ದರು










