--Ads--

ಎಚಗಳ್ಳಿ ಪ್ರಾಥಮಿಕ ಕೃಷಿ ಸಹಕಾರ ಪತ್ತಿನ ಸಂಘದ ಅಧ್ಯಕ್ಷರಾಗಿ ಗಾಯತ್ರಿ ಹಾಗೂ ಉಪಾಧ್ಯಕ್ಷರಾಗಿ ತಮ್ಮಣ್ಣ ಆಯ್ಕೆ

On: November 17, 2026 4:42 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಎಚಗಳ್ಳಿ ಪ್ರಾಥಮಿಕ ಕೃಷಿ ಸಹಕಾರ ಪತ್ತಿನ ಸಂಘದ ಅಧ್ಯಕ್ಷರಾಗಿ ಗಾಯತ್ರಿ ಹಾಗೂ ಉಪಾಧ್ಯಕ್ಷರಾಗಿ ತಮ್ಮಣ್ಣ  ಆಯ್ಕೆ

ತಾಂಡವಪುರ ನವೆಂಬರ್ 17: ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಎಚಗಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನಸಹಕಾರ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಒಪ್ಪಂದ ಪ್ರಕಾರ ಕೊನೆಯ ಅವಧಿಯ ಚುನಾವಣೆಯಲ್ಲಿ ಗೊದ್ದನಪುರ ಮರಳೂರು ಗ್ರಾಮದ ಗಾಯತ್ರಿ ಹಾಗೂ ಉಪಾಧ್ಯಕ್ಷರಾಗಿ ಎಚಗಳ್ಳಿ ಗ್ರಾಮದತಮ್ಮಣ್ಣ ರವರು ಅವಿರಧವಾಗಿ ಆಯ್ಕೆಯಾದರು.

ನೂತನವಾಗಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಗಾಯತ್ರಿ ಹಾಗೂ ತಮ್ಮಣ್ಣನವರನ್ನು ಗ್ರಾಮ ಪಂಚಾಯತಿಯ ಮಾಜಿ ಸದಸ್ಯ ಜಿಎಂ ಸೂರಿ ರವರು ಸನ್ಮಾನಿಸಿ ಗೌರವಿಸಿ ಅಭಿನಂದನೆ ಸಲ್ಲಿಸಿದರು ಹಾಗೂ ಸಂಘಕ್ಕೆ ಅಧ್ಯಕ್ಷರಾಗಿ ಉಪಾಧ್ಯಕ್ಷರಾಗಿ ಆಯ್ಕೆಯಾಗಲು ಕಾರಣಕರ್ತರಾದ ಸಂಘದ ಎಲ್ಲಾ ಸದಸ್ಯರಿಗೂ ಇದಕ್ಕೆ ಸಹಕರಿಸಿದ ಎಲ್ಲಾ ಸಂಘದ ನಿರ್ದೇಶಕರುಗಳಿಗೆ ಅಭಿನಂದನೆ ಸರಿಸುತ್ತೇನೆ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ನಿರ್ದೇಶಕರಾದ ಗುರು ಮಹದೇವು ರವಿ,  ಮಾದಪ್ಪ ,ಶಿವಕುಮಾರ್, ಮಹದೇವಸ್ವಾಮಿ ,ಮಹದೇವಸ್ವಾಮಿ ಕುಮಾರ್ ಗೋಪಾಲನಾಯಕ ರಾಜಮ್ಮ ಕಾಮರಾಜು ಮಾಲೆಗೌಡರು ಕೃಷ್ಣ ಶಿವಕುಮಾರ್ ಚಂದ್ರೇಗೌಡರು ಈ ಸಂದರ್ಭದಲ್ಲಿ ಹಾಜರಿದ್ದರು

#####@@@@@@@#########

ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನ.17 :

ಕೇಂದ್ರ ಪುರಸ್ಕೃತ ಆತ್ಮ (ATMA) ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೇರ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಮೂರು ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಹಾಗೂ 01 ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಸಂಬಂಧಿತ ವಲಯದಲ್ಲಿ ಪದವಿ ಸ್ನಾತಕೋತ್ತರ ಪದವಿ, ಕಂಪ್ಯೂಟರ್ ಪ್ರೊಗ್ರಾಮರ್ ಹುದ್ದೆಗೆ ಬಿ.ಟೆಕ್, ಎಂಸಿಎ, ಬಿಸಿಎ ಅಥವಾ ಕಂಪ್ಯೂಟರ್ ಕೌಶಲ್ಯ ಹೊಂದಿರುವ ಪದವೀಧರರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಬಯೋಡೇಟಾ (Resume/CV) ಹಾಗೂ ವಿದ್ಯಾರ್ಹತೆ ಮತ್ತು ಇತರೆ ಸಂಬಂಧಿತ ದಾಖಲೆಗಳೊಂದಿಗೆ ಡಿಸೆಂಬರ್ 02 ರೊಳಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಠಡಿ ಸಂಖ್ಯೆ 208 ಮತ್ತು 209, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ – ಇಲ್ಲಿ ಸಲ್ಲಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಬುಡಕಟ್ಟು ಸಮುದಾಯದ ಹಕ್ಕು, ಅಸ್ಮಿತೆಗೆ ಹೋರಾಡಿದ ನಾಯಕ ಭಗವಾನ್ ಬಿರ್ಸಾ ಮುಂಡಾ : ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ನೌಕರರ ಸಂಘದ ವತಿಯಿಂದ  ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜಯಂತಿ ಆಚರಣೆ

ಕಾಸ್ಮೋಸ್–ಮೈಸೂರು ತಾರಾಲಯ’ವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ರವರು ಬಟನ್ ಒತ್ತುವುದರ ಮೂಲಕ ಉದ್ಘಾಟನೆ

ಕ್ಯಾಚ್ ಫೌಂಡೇಶನ್,  ಎಸ್‌ಬಿಐ ಫೌಂಡೇಶನ್‌, ಸಿಎಸ್‌ಆರ್ ಸಂಸ್ಥೆಗಳ ಅನುದಾನದಿಂದ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಚಾಲನೆ 

ಬೆಳಕಿನ ಹಬ್ಬ. ದೀಪಾವಳಿ ಹಬ್ಬದ ಪ್ರಯುಕ್ತ ಹಸು ಎತ್ತುಗಳಿಗೆ ಕಿಚ್ಚು ಆಯಸಿ ಸಂಭ್ರಮಿಸಿದ ರೈತರು 

ಮೈಸೂರಿನಲ್ಲಿ ಭಾ.ಜ .ಪಾ ವತಿಯಿಂದ ಪ್ರಜಾಪ್ರಭುತ್ವ ಉಳಿಸಿ – ಅರಾಜಕತೆ ಅಳಿಸಿ ಪಾದಯಾತ್ರೆ