--Ads--

ಮೈಸೂರಿನಲ್ಲಿ ರಾಜ್ಯಮಟ್ಟದ ಅದ್ದೂರಿ ಸಂವಿಧಾನ ದಿನಾಚರಣೆ: ಒಂದು ಲಕ್ಷ ಜನರನ್ನು ಸೇರಿಸುವ ಗುರಿ : ಸಚಿವ ಯತೀಂದ್ರ ಸಿದ್ದರಾಮಯ್ಯ

On: November 22, 2026 12:34 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಮೈಸೂರಿನಲ್ಲಿ ರಾಜ್ಯಮಟ್ಟದ ಅದ್ದೂರಿ ಸಂವಿಧಾನ ದಿನಾಚರಣೆ: ಒಂದು ಲಕ್ಷ ಜನರನ್ನು ಸೇರಿಸುವ ಗುರಿ : ಸಚಿವ ಯತೀಂದ್ರ ಸಿದ್ದರಾಮಯ್ಯ

ತಾಂಡವಪುರ,ನವೆಂಬರ್.22 ಸಂವಿಧಾನದ ಆಶಯಗಳ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಮೂಲ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮೈಸೂರು ವಿಭಾಗದಲ್ಲಿ ರಾಜ್ಯಮಟ್ಟದ ಸಂವಿಧಾನ ದಿನಾಚರಣೆಯನ್ನು ಅತ್ಯಂತ ಅದ್ದೂರಿಯಾಗಿ ಒಂದು ಲಕ್ಷಕ್ಕೂ ಹೆಚ್ಚು ಜನರು ಬರುವ ನಿರೀಕ್ಷೆಯಿದ್ದು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಸ್ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ಟೌನ್ ಹಾಲ್ ನಲ್ಲಿ ಇರುವ ಡಾ. ಬಿಆರ್ ಅಂಬೇಡ್ಕರ್ ಅವರ ಪುತಳಿಗೆ ಮಾಲಾರ್ಪಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಹಾಗೂ ಕೃಷಿ ಸಚಿವ ನರೇಂದ್ರ ಸ್ವಾಮಿ ಅವರ ನೇತೃತ್ವದಲ್ಲಿ ಈ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಹೇಳಿದ ಸಚಿವರು
ಸಂವಿಧಾನ ದಿನಾಚರಣೆಯನ್ನು ರಾಜ್ಯಮಟ್ಟದಲ್ಲಿ ಮೈಸೂರು ವಿಭಾಗದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಮೈಸೂರು ವಿಭಾಗದ ಸಚಿವರು ಮತ್ತು ಶಾಸಕರೊಂದಿಗೆ ಸಭೆ ನಡೆಸಿ, ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚಿಸಲಾಗುವುದು ಹಾಗೂ ಎಲ್ಲರೂ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಹೇಳಿದರು.

ಟೌನ್ ಹಾಲ್ ಮುಂಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ಚರಿತ್ರೆ ಕುರಿತ ಎಲ್.ಇ.ಡಿ ಪ್ರದರ್ಶನ ವಾಹನಕ್ಕೆ ಹಸಿರು ನಿಸಾನೆ ತೋರಿಸಿ ಚಾಲನೆ ನೀಡಿದ ಸಚಿವರು ಈ ಸಂದರ್ಭದಲ್ಲಿ ಕೃಷಿ ಸಚಿವ ಪಿಎಂ ನರೇಂದ್ರ ಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ, ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಎಂ.ಕೆ ಸವಿತಾ, ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಹೆಚ್.ಎಸ್ ಬಿಂದ್ಯಾ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಮುದ್ದು ರಾಮೇಗೌಡ, ದಲಿತ ಮುಖಂಡ ಜವರಪ್ಪ ಸಹಾಯಕ ನಿರ್ದೇಶಕರಾದ ಜನಾರ್ದನ್ ಹಾಗೂ ಮತ್ತಿತರರು ಹಾಗೂ ಮುಖಂಡರುಗಳು ಇಲಾಖೆ ಅಧಿಕಾರಿಗಳು ಹಾಜರಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ