--Ads--

ಬಿ.ಎಡ್ ಹಾಗೂ ಡಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ.

On: August 22, 2023 3:45 PM
Follow ಮಾಡಿ
--Ads--

Whatsapp Channel

Join Now

Telegram Group

Join Now

 

ವಿಜಯ ದರ್ಪಣ ನ್ಯೂಸ್ 

ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 22

 2023-24ನೇ ಸಾಲಿನಲ್ಲಿ ಬಿ.ಎಡ್ & ಡಿ.ಎಡ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು (https://sevasindhu.karnataka.gov.in) ಪೋರ್ಟಲ್‌ನಲ್ಲಿ ಆನ್‌ಲೈನ್ ಮುಖಾಂತರ ದಿನಾಂಕ 2023 ರ ಆಗಸ್ಟ್ 21 ರಿಂದ ಅರ್ಜಿ ಆಹ್ವಾನಿಸಲಾಗಿದ್ದು. ಅರ್ಜಿ ಸಲ್ಲಿಸಲು 2023 ರ ಸೆಪ್ಟೆಂಬರ್ 21 ಕೊನೆಯ ದಿನವಾಗಿದೆ.

ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಪ್ರಾಂಶುಪಾಲರಿಂದ ಧೃಡೀಕರಿಸಿ, ಹಾರ್ಡ್ ಪ್ರತಿಯನ್ನು ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ:216, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಇಲ್ಲಿಗೆ ಸಲ್ಲಿಸತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‌ಸೈಟ್ https://dom.karnatak.gov.in ಜಿಲ್ಲಾ ಕಛೇರಿ, ಜಿಲ್ಲಾ ಮಾಹಿತಿ/ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವುದು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990,
ಬೆಂಗಳೂರು ಗ್ರಾಮಾಂತರ ಜಿಲ್ಲಾ ದೂರವಾಣಿ ಸಂಖ್ಯೆ:080-22866966,
ದೊಡ್ಡಬಳ್ಳಾಪುರ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ:080-27627444,
ನೆಲಮಂಗಲ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ:080-27725445,
ದೇವನಹಳ್ಳಿ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ:080-27682882,
ಹೊಸಕೋಟೆ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ:080-27931899 ಯನ್ನು ಸಂಪರ್ಕಿಸಬಹುದು.

ಬಿ.ಎಡ್ & ಡಿ.ಎಡ್ ನಲ್ಲಿ ಪ್ರಸ್ತುತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
ಗ್ರಾಮೀಣ ಮತ್ತು ನಗರ ವಿಭಾಗದಲ್ಲಿ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸವನ್ನು ಪ್ರೋತ್ಸಾಹಿಸಿ ಕಲಿಕಾ ಮತ್ತು ಬೋಧನಾ ಸಾಮಾಗ್ರಿಗಳನ್ನು ಖರೀದಿಸಲು ಆರ್ಥಿಕ ಸಹಾಯ ಮಾಡುವ ಹಿತ ದೃಷ್ಟಿಯಿಂದ National council for teacher education ನಿಂದ ಮಾನ್ಯತೆ ಪಡೆದಿರುವ ಬಿ.ಎಡ್ ಹಾಗೂ Department of state education research and training ನಿಂದ ಮಾನ್ಯತೆ ಪಡೆದಿರುವ ಡಿ.ಎಡ್ ಕೋರ್ಸುಗಳ ಸರ್ಕಾರಿ/ಅರೆ ಸರ್ಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್ & ಡಿ.ಎಡ್ ಕೋರ್ಸುಗಳಲ್ಲಿ ದಾಖಲಾತಿ ಹೊಂದಿ ವ್ಯಾಸಂಗ ಮಾಡುತ್ತಿರಬೇಕು. ಅಭ್ಯರ್ಥಿ ಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು.
ವಿದ್ಯಾರ್ಥಿಯು ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್,ಜೈನ್,ಸಿಖ್,ಬೌದ್ಧ ಮತ್ತು ಪಾರ್ಸಿ) ಸಮುದಾಯಕ್ಕೆ ಸೇರಿದವರಾಗಿರಬೇಕು. ಕೋರ್ಸುಗಳ ಅವಧಿಗೆ ತಕ್ಕಂತೆ ಪ್ರತಿ ವರ್ಷ ರೂ.25,000/- ಸಾವಿರದಂತೆ (ಗರಿಷ್ಠ 02 ವರ್ಷ) ಅನುದಾನವನ್ನು ನೀಡಲಾಗುವುದು.

ಅಲ್ಪಸಂಖ್ಯಾತರ ಅಭ್ಯರ್ಥಿಗಳ ಪೋಷಕರ ವಾರ್ಷಿಕ ಗರಿಷ್ಠ ವರಮಾನ ರೂ 6 ಲಕ್ಷಕ್ಕೆ ಮೀರಿರಬಾರದು. ಅಭ್ಯರ್ಥಿಗಳನ್ನು ಅರ್ಹತೆ, ಪರೀಕ್ಷೆ/ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಈ ಪ್ರೋತ್ಸಾಹಧನ ಪಡೆಯುವ ವಿದ್ಯಾರ್ಥಿಗಳು ಭಾರತ ಸರ್ಕಾರ ಅಥವಾ ಇತರೆ ವಿದ್ಯಾರ್ಥಿವೇತನ/ಶಿಷ್ಯವೇತನ ಪಡೆಯಲು ಅರ್ಹರಿರುತ್ತಾರೆ. ಈ ಸೌಲಭ್ಯ ಪಡೆಯುವ ವಿದ್ಯಾರ್ಥಿಗಳು ಸರ್ಕಾರಿ/ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ನಿಯಮಾನುಸಾರ ಪ್ರವೇಶ ಪಡೆಯಲು ಅರ್ಹರಿರುತ್ತಾರೆ.

ವಿದ್ಯಾರ್ಥಿಗಳು ಡಿ.ಎಡ್ ಮತ್ತು ಬಿ.ಎಡ್ ಕೋರ್ಸ್ ಗಳಲ್ಲಿ ದಾಖಲಾಗಿರುವ ಹಾಗೂ ಶುಲ್ಕವನ್ನು ಭರಿಸಿರುವ ಬಗ್ಗೆ ಎಲ್ಲಾ ಅಧಿಕೃತ ದಾಖಲಾತಿಗಳನ್ನು ಸಲ್ಲಿಸತಕ್ಕದ್ದು. ಈ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಅರ್ಹತೆ ಪರೀಕ್ಷೆ/ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಕನಿಷ್ಠ 50% ರಷ್ಟು ಅಂಕಗಳನ್ನು ಪಡೆದಿರತಕ್ಕದ್ದು. ಉತ್ತೀರ್ಣರಾಗದ ಅಭ್ಯರ್ಥಿಗಳು ಪ್ರೋತ್ಸಾಹಧನ ಪಡೆಯಲು ಅರ್ಹರಾಗಿರುವುದಿಲ್ಲ. ಮೊದಲನೇ ವರ್ಷದಲ್ಲಿ ಪ್ರೋತ್ಸಾಹಧನ ಪಡೆದಿರುವ ಅಭ್ಯರ್ಥಿಗಳು ಎರಡನೇ ವರ್ಷಕ್ಕೆ ಪ್ರೋತ್ಸಾಹ ಧನ ಪಡೆಯಲು ಪ್ರತ್ಯೇಕ ಅರ್ಜಿ ಸಲ್ಲಿಸತಕ್ಕದ್ದು. ಸುಳ್ಳು ಮಾಹಿತಿ, ದಾಖಲಾತಿ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಿ ಪ್ರೋತ್ಸಾಹಧನ ಪಡೆದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೀಡಲಾದ ಪ್ರೋತ್ಸಾಹಧನ ಮೊತ್ತವನ್ನು ವಸೂಲಿ ಮಾಡಿ ಸರ್ಕಾರಕ್ಕೆ ಹಿಂದಿರುಗಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ವತಿಯಿಂದ ವಿವಿಧ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ.

ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 22 

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2023-24ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ. ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲ್ಯೂ, ಬಿ.ಲಿಬ್.ಐ.ಎಸ್ಸಿ, ಎಂ.ಎ, ಎಂ.ಎಸ್ಸಿ, ಎಂ.ಬಿ.ಎ, ಎಂ.ಲಿಬ್.ಐ.ಎಸ್ಸಿ, ಎಂ.ಸಿ.ಎ, ಎಂ.ಎಸ್.ಡಬ್ಲ್ಯೂ, , ಪಿ.ಜಿ.ಸರ್ಟಿಫಿಕೇಟ್, ಡಿಪ್ಲೋಮಾ ಮತ್ತು ಯುಜಿ ಶಿಕ್ಷಣ ಕ್ರಮಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು 2023 ರ ಜೂನ್ 28 ರಿಂದ ಬೆಂಗಳೂರು ಪ್ರಾದೇಶಿಕ ಕೇಂದ್ರ ಬಾಪೂಜಿನಗರ-01 ಆನ್‌ಲೈನ್ ಮೂಲಕ ಪ್ರವೇಶಾತಿಯನ್ನು ಪ್ರಾರಂಭಿಸಿದ್ದು, ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ www.ksoumysuru.ac.in ನಲ್ಲಿ ಲಭ್ಯವಿರುವ ವಿವರಣಾ ಪುಸ್ತಕದಲ್ಲಿ ಎಲ್ಲಾ ವಿವರಗಳನ್ನು ನೀಡಲಾಗಿದೆ. ವಿದ್ಯಾರ್ಥಿಗಳು ಅದರ ಅನ್ವಯ ಅರ್ಹ ಶಿಕ್ಷಣ ಕ್ರಮಗಳಿಗೆ ವೆಬ್ ಸೈಟ್ ನಲ್ಲಿ ಲಭ್ಯವಿರುವ ಆನ್ ಲೈನ್ ಅಡ್ಮಿಶನ್ ಪೋರ್ಟಲ್ ಮೂಲಕ ಅಥವಾ ಖುದ್ದು ಅಗತ್ಯ ದಾಖಲಾತಿಗಳೊಂದಿಗೆ ಬಾಪೂಜಿನಗರ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿದರೆ ಪ್ರವೇಶಾತಿ ಪೂರ್ಣ ಪ್ರಕ್ರಿಯೆಯನ್ನು ಮಾಡಿಕೊಳ್ಳಬಹುದಾಗಿದೆ.

ಕೋರ್ಸ್ ಗಳ ಪ್ರವೇಶಾತಿ ಗಾಗಿ 2023ರ ಆಗಸ್ಟ್ 31 ಕೊನೆ ದಿನವಾಗಿದೆ.

ಈಗಾಗಲೇ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಆಗಸ್ಟ್ 31ರ ಒಳಗೆ ಪ್ರಾದೇಶಿಕ ಕೇಂದ್ರಕ್ಕೆ ದಾಖಲಾತಿಗಳೊಂದಿಗೆ ಭೇಟಿ ನೀಡಿ ಹಾಗೂ ಇನ್ನು ಅರ್ಜಿ ಹಾಕಿಲ್ಲದೆ ಇರುವಂತಹ ಆಸಕ್ತ ವಿದ್ಯಾರ್ಥಿಗಳು ಕಡೆ ದಿನಾಂಕ ದೊಳಗೆ ಅರ್ಜಿ ಸಲ್ಲಿಸಿ ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳುವುದು.

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್.

www.ksoumysuru.ac.in ಮತ್ತು ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ 01, ಮೊದಲನೇ ಮಹಡಿ, ಸ್ಯಾಟ್ ಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-28, ಕಚೇರಿ ದೂರವಾಣಿ ಸಂಖ್ಯೆ: 080-26603664 ಹಾಗೂ 98449-65515 ಅನ್ನು ಸಂಪರ್ಕಿಸಬಹುದಾಗಿದೆ.

 

WhatsApp

Join Now

Telegram

Join Now

Instagram

Join Now