--Ads--

ಗೃಹಲಕ್ಷ್ಮಿ ಯೋಜನೆ ಅನುಷ್ಠಾನ: ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ. ಶಿವಶಂಕರ ಸೂಚನೆ.

On: August 25, 2023 6:24 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ .ಆಗಸ್ಟ್ 25

ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ವಿತರಣಾ ಕಾರ್ಯಕ್ರಮ ಆಗಸ್ಟ್ 30 ರಂದು ಮೈಸೂರಿನಲ್ಲಿ ವಿಧ್ಯುಕ್ತವಾಗಿ ಚಾಲನೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗ್ರಾಮ ಪಂಚಾಯಿತಿಗಳ 101 ಕೇಂದ್ರಗಳಲ್ಲಿ ಹಾಗೂ ನಗರ ವ್ಯಾಪ್ತಿಯ 42 ಸ್ಥಳಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಲು ಎಲ್ಲಾ ಸಿದ್ಧತೆಗಳನ್ನು ಜಿಲ್ಲೆಯ ನೋಡೆಲ್ ಅಧಿಕಾರಿಗಳು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು ಸೂಚಿಸಿದರು.

ಜಿಲ್ಲಾಡಳಿತ ಭವನದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿ ಕಾರ್ಯಕ್ರಮದ ಕರಪತ್ರ, ಆಹ್ವಾನ ಪತ್ರಿಕೆಯನ್ನು ಆಗಸ್ಟ್ 27 ರೊಳಗಾಗಿ ಮನೆ ಮನೆಗೆ ಹಂಚಬೇಕು, ಕಾರ್ಯಕ್ರಮದ ದಿನದಂದು ಫಲಾನುಭವಿಗಳಿಗೆ ಗಣ್ಯರಿಗೆ, ಬ್ಯಾಡ್ಜ್ಗಳನ್ನು ಮುದ್ರಿಸಿ ವಿತರಿಸಲು ಕ್ರಮ ವಹಿಸಿ, ಫಲಾನುಭವಿಗಳು ಹಾಜರಾಗುವಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದರು.
ಆಹ್ವಾನ ಪತ್ರಿಕೆ ಮನೆ ಮನೆಗೆ ವಿತರಿಸಲು ಹಾಗೂ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆ ತರಲು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ನೀರು ನಿರ್ವಾಹಕರು, ಸ್ವಸಹಾಯ ಗುಂಪುಗಳ ಸಹಕಾರ ತೆಗೆದುಕೊಳ್ಳಿ ಎಂದರು.

ಗೃಹಲಕ್ಷ್ಮಿ ಯೋಜನೆಯ ಕಾರ್ಯಕ್ರಮವನ್ನು ಸ್ಥಳೀಯ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡ, ಶಾಲಾ ಕಟ್ಟಡ ಹಾಗೂ ಸಮುದಾಯ ಭವನ,ಛತ್ರಗಳಲ್ಲಿ ಏರ್ಪಡಿಸಬಹುದಾಗಿದ್ದು ಕಾರ್ಯಕ್ರಮಕ್ಕೆ ಅಗತ್ಯವಾದ ಸ್ಥಳ, ಟಿವಿ, ಎಲ್.ಇ.ಡಿ ಪರದೆ, ಲ್ಯಾಪ್ ಟಾಪ್, ಇಂಟರ್ನೆಟ್ ವ್ಯವಸ್ಥೆಯನ್ನು ಸಿದ್ದಪಡಿಸಿ,ಪರಿಶೀಲಿಸಬೇಕು ಎಂದರು.

ನಗರ ವ್ಯಾಪ್ತಿಯ ಕಾರ್ಯಕ್ರಮವನ್ನು ಶಾಸಕರ ಅಧ್ಯಕ್ಷತೆಯಲ್ಲಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಂಚಾಯ್ತಿ ಅಧ್ಯಕ್ಷರ ನೇತೃತ್ವದಲ್ಲಿ ನಡೆಸಲು ಶಿಷ್ಟಾಚಾರದಂತೆ ಸ್ಥಳೀಯ ಜನಪ್ರತಿನಿಧಿಗಳು, ಪಂಚಾಯಿತಿ ಸದಸ್ಯರು, ಸಾರ್ವಜನಿಕರು ಭಾಗವಹಿಸಲು ಕ್ರಮ ಕೈಗೊಳ್ಳಿ ಎಂದು ಹೇಳಿದರು.

ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ಸಂಬಂಧಪಟ್ಟ ನೋಡಲ್ ಅಧಿಕಾರಿಗಳು ವಹಿಸಿ ಯಾವುದೇ ಲೋಪದೋಷಗಳು ಉಂಟಾಗದಂತೆ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು.

WhatsApp

Join Now

Telegram

Join Now

Instagram

Join Now