ವಿಜಯ ದರ್ಪಣ ನ್ಯೂಸ್……….
ಮೈಸೂರಿನಲ್ಲಿ ನವೆಂಬರ್ 26 ರಂದು ರಾಜ್ಯಮಟ್ಟದ ಸಂವಿಧಾನ ದಿನಾಚರಣೆ :ಒಂದು ಲಕ್ಷ ಜನ ಸೇರುವ ನಿರೀಕ್ಷೆ : ಸಚಿವ ಕೆ.ಹೆಚ್. ಮುನಿಯಪ್ಪ

ಮೈಸೂರು ನ. 25 : ನವೆಂಬರ್ 26ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ರಾಜ್ಯಮಟ್ಟದ ಸಂವಿಧಾನ ದಿನಾಚರಣೆಯನ್ನು ಅದ್ಧೂರಿಯಾಗಿ ಆಯೋಜಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಹೇಳಿದರು.
ಇಂದು ನಗರದ ಮುಕ್ತ ಗಂಗೋತ್ರಿಯ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮೈಸೂರು ವಿಭಾಗದ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಮತ್ತು ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಯುವಜನತೆ ಮತ್ತು ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನ, ಇತಿಹಾಸ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಅರಿವು ಮೂಡಿಸಲು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ‘ಯೂತ್ ಪಾರ್ಲಿಮೆಂಟ್’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇಂದು ಆಯ್ಕೆ ಪ್ರಕ್ರಿಯೆ ಮತ್ತು ನಾಳೆ ಬೃಹತ್ ಕಾರ್ಯಕ್ರಮ ನಡೆಯಲಿದೆ ಎಂದರು.
ಹಿಂದಿನ ಅವಧಿಯಲ್ಲಿ ಸಂವಿಧಾನ ಜಾತ್ರೆ ಸೇರಿದಂತೆ ಹಲವು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದ್ದು, ಈ ಬಾರಿ ಮೈಸೂರಿನಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಲು ಎಲ್ಲಾ ಸಚಿವರು ಹಾಗೂ ಮುಖಂಡರು ಕೈಜೋಡಿಸಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮಕ್ಕೆ ಒಂದು ಲಕ್ಷ ಜನರು ಸೇರುವ ನಿರೀಕ್ಷೆ ಇದೆ ಎಂದು ಸಚಿವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ,ವಿಧಾನ ಪರಿಷತ್ತಿನ ಸದಸ್ಯ ಡಾ. ಡಿ. ತಿಮ್ಮಯ್ಯ ಅವರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.










