--Ads--

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನಾಮಫಲಕ ಕೆಡಿಪಿ ಸಭೆಯಲ್ಲಿ ತೆರವು ಖಂಡನೀಯವಾದುದು ಹಾಗು ಆಶಾ ಕಾರ್ಯಕರ್ತರ ಬೇಡಿಕೆ ಈಡೇರಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ : ಶಾಸಕ ಬಿ.ಎನ್.ರವಿಕುಮಾ‌ರ್

On: November 26, 2026 3:22 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…….

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನಾಮಫಲಕ ಕೆಡಿಪಿ ಸಭೆಯಲ್ಲಿ ತೆರವು ಖಂಡನೀಯವಾದುದು ಹಾಗು ಆಶಾ ಕಾರ್ಯಕರ್ತರ ಬೇಡಿಕೆ ಈಡೇರಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ : ಶಾಸಕ ಬಿ.ಎನ್.ರವಿಕುಮಾ‌ರ್

ಶಿಡ್ಲಘಟ್ಟ : ಗ್ಯಾರಂಟಿಗಳಿಗೆ 52 ಸಾವಿರ ಕೋಟಿ ರೂ.ಗಳು ಮೀಸಲಿಟ್ಟಿರುವ ಸರ್ಕಾರ ಆಶಾ ಕಾರ್ಯಕರ್ತರ ಬೇಡಿಕೆಗೆ 3 ಸಾವಿರದ 200 ಕೋಟಿ ಇಲ್ಲವೆ.. ಇವರ ಬೇಡಿಕೆಗಳ ಈಡೇರಿಸುವಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್
ಆರೋಪಿಸಿದರು.

ತಾಲ್ಲೂಕಿನ ಮೇಲೂರಿನ ಅವರ ಗೃಹಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ರಾಜ್ಯದ 42 ಸಾವಿರ ಆಶಾ ಕಾರ್ಯಕರ್ತರು ತಿಂಗಳಿಗೆ 15 ಸಾವಿರ ರೂ.ಗಳು ಗೌರವಧನ ಹಾಗೂ ನಿವೃತ್ತಿಯ ವೇಳೆ 5 ಲಕ್ಷ ರೂ.ಗಳು ನೀಡಬೇಕೆಂದು ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಒಂಬತ್ತು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ ,ಕೋವಿಡ್ ಕಾಲದಲ್ಲಿ ಜೀವವನ್ನೇ ಪಣಕ್ಕಿಟ್ಟು ಸೇವೆ ಸಲ್ಲಿಸಿದ ಇವರ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷ ಮಾಡುತ್ತಿರುವುದು ಖಂಡನೀಯ ಎಂದು ಹೇಳಿದರು.

ಆಶಾ ಕಾರ್ಯಕರ್ತರಿಗೆ ಪಕ್ಕದ ರಾಜ್ಯಗಳಾದ
ಕೇರಳದಲ್ಲಿ 12 ಸಾವಿರ ರೂ.ಗಳು, ಮಹಾರಾಷ್ಟ್ರದಲ್ಲಿ 11 ಸಾವಿರದ 200 ರೂ.ಗಳು ಗೌರವಧನ ನೀಡಲಾಗುತ್ತಿದೆ ನಮ್ಮ ರಾಜ್ಯದಲ್ಲಿ ಏಕೆ ತಾರತಮ್ಯ ಎಂದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನಾಮಫಲಕ ತೆರವುಗೊಳಿಸಿರುವುದನ್ನು ಹಾಗೂ ಜೆಡಿಎಸ್ ನಾಯಕರ ವಿರುದ್ಧ ಕಾಂಗ್ರೆಸ್ ಶಾಸಕರು ಮಾಡುತ್ತಿರುವ ವೈಯಕ್ತಿಕ ಟೀಕೆಗಳನ್ನು ಖಂಡಿಸಿದ ಅವರು ಮದ್ದೂರು ಶಾಸಕ ಕದಲೂರು ಉದಯ್ ಅವರ ಹೇಳಿಕೆಗಳಿಗೂ ಆಕ್ಷೇಪ ವ್ಯಕ್ತಪಡಿಸಿದರು.
ಬೆಳಗಾವಿಯಲ್ಲಿ ನಡೆಯುವ ವಿಧಾನಮಂಡಲ ಅಧಿವೇಶನದಲ್ಲಿ ಜೆಡಿಎಸ್ ವತಿಯಿಂದ ಈ ವಿಷಯವನ್ನು ಪ್ರಸ್ತಾಪಿಸಿ ಹೋರಾಟ ನಡೆಸುವುದಾಗಿ ಹೇಳಿದರು.

ಮುಖ್ಯಮಂತ್ರಿ ವಿದೇಶ ಪ್ರವಾಸದಲ್ಲಿದ್ದರೂ ಉಪಮುಖ್ಯಮಂತ್ರಿ ಹಾಗೂ ಸಂಬಂಧಿಸಿದ ಸಚಿವರು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಬೇಕು ಎಂದು ಒತ್ತಾಯ ಮಾಡಿದರು.

ಆಶಾ ಕಾರ್ಯಕರ್ತರ ಹೋರಾಟ ಮತ್ತು ಬೇಡಿಕೆಗಳ ಕುರಿತು ಕೃಷಿ ಸಚಿವ ನರೇಂದ್ರಸ್ವಾಮಿ ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಿದ ಶಾಸಕರು, ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಬದಲು ಹೋರಾಟವನ್ನೇ ಟೀಕಿಸುವುದು ಸರಿಯಲ್ಲ ಎಂದ ಅವರು, 2028ರ ನಂತರ ರಾಜ್ಯದ ಜನ ಕಾಂಗ್ರೆಸ್ ನಾಯಕರಿಗೆ ಕಂಠಿಹಾರ ಹಾಕುತ್ತಾರೆ ಎಂದು ಲೇವಡಿ ಮಾಡಿದರು.

ಕಾಂಗ್ರೆಸ್ ಸಭೆ, ಸಮಾರಂಭಗಳಿಗೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರನ್ನು ಕಡ್ಡಾಯವಾಗಿ ಕರೆಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು ,ಪಕ್ಷದ ಸಂಘಟನೆಯ ಮೂಲಕ ಜನರನ್ನು ಸೇರಿಸುವ ಬದಲು, ಸರ್ಕಾರದಿಂದ ಗೌರವಧನ ಪಡೆಯುವವರನ್ನು ರಾಜಕೀಯ ಕಾರ್ಯಕ್ರಮಗಳಿಗೆ ಬಳಸಿಕೊಳ್ಳುವುದು ಸರಿಯಾದ ಕ್ರಮವಲ್ಲ ಎಂದರು.

ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಮತ್ತು ಬಿಸಿಊಟ ನೌಕರರಿಗೆ ಶ್ರಮಕ್ಕೆ ತಕ್ಕಂತೆ ಫಲ ನೀಡುವುದರಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು ಅವರ ಶಾಪ ಈ ಸರ್ಕಾರಕ್ಕೆ ತಟ್ಟುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರ ಬರಗಾಲದ ಸಂಕಷ್ಟ, ಬೆಲೆ ಏರಿಕೆ, ಅಬಕಾರಿ ಸುಂಕ ಹಾಗೂ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಹೆಚ್ಚಳದಿಂದ ಜನರಿಗೆ ಹೊರೆಯಾಗಿದೆ ಎಂದು ಹೇಳಿದರು.

ಬೆಳೆ ಪರಿಹಾರ ,ಕಬ್ಬು ಬೆಳೆಗಾರರ ಸಂಕಷ್ಟ ,ಗ್ರಾಮೀಣ ರಸ್ತೆಗಳ ದುಸ್ಥಿತಿ, ಶಾಲಾ ವಾಹನಗಳ ಸಂಚಾರ ಸಮಸ್ಯೆ ,
ಕುಡಿಯುವ ನೀರಿನ ಸಮಸ್ಯೆಗಳಿಗೆ ಮೂರೂವರೆ ವರ್ಷಗಳಿಂದ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಸಮರ್ಪಕ ಅನುದಾನ ದೊರೆತಿಲ್ಲ ಎಂದ ಅವರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರ ನ್ಯಾಯಯುತ ಬೇಡಿಕೆಗಳಿಗೂ ಸದನದಲ್ಲಿ ಧ್ವನಿಯಾಗುವುದಾಗಿ ಹೇಳಿದರು.

2028ರಲ್ಲಿ NDA ಅಧಿಕಾರಕ್ಕೆ ಬರಲಿದ್ದು, ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ವಿಶ್ವಾಸವಿದೆ

ಆಗ ಆಶಾ, ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತರಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿಯನ್ನು ಸಚಿವರು ತಮ್ಮ ರಾಜಕೀಯ ಅನುಕೂಲಕ್ಕೆ ತಕ್ಕಂತೆ ನಿಗದಿಪಡಿಸಿದ್ದಾರೆ ಎಂದು ಆರೋಪಿಸಿ, ಕ್ಷೇತ್ರದಲ್ಲಿ ಯಾವುದೇ ಮೀಸಲಾತಿ ಬಂದರೂ ಏಳೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ವಿಶ್ವಾಸವಿದೆ ಎಂದರು.

ಈ ಸಂದರ್ಭದಲ್ಲಿ ಚಿಮುಲ್ ನಿರ್ದೇಶಕರಾದ ಬಂಕ್ ಮುನಿಯಪ್ಪ, ಹುಜುಗೂರು ರಾಮಯ್ಯ, ತಾದೂರು ರಘು, ಮೇಲೂರು ಮಂಜುನಾಥ್ ಹಾಗೂ ಕುಂದಲಗುರ್ಕಿ ಚಂದ್ರು, ಬೈರಗಾನಹಳ್ಳಿ ಪ್ರಭಾಕರ್ (ಪ್ರಭು) ಮುಂತಾದವರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now