--Ads--

ನಗರಾಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಹಾಗೂ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕ ಗೃಹಭಾಗ್ಯ ಯೋಜನೆಯಡಿ  ಪೌರಕಾರ್ಮಿಕರಿಗಾಗಿ ನಿರ್ಮಿಸಿರುವ ವಸತಿ ಸಮುಚ್ಚ ಉದ್ಘಾಟನೆ 

On: November 26, 2026 7:03 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ನಗರಾಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಹಾಗೂ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕ ಗೃಹಭಾಗ್ಯ ಯೋಜನೆಯಡಿ  ಪೌರಕಾರ್ಮಿಕರಿಗಾಗಿ ನಿರ್ಮಿಸಿರುವ ವಸತಿ ಸಮುಚ್ಚ ಉದ್ಘಾಟನೆ 

ತಾಂಡವಪುರ ನವಂಬರ್ 25ಮೈಸೂರಿನ ಹಳೆ ಕೆಸರೆಯಲ್ಲಿ ನಗರಾಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಹಾಗೂ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕ ಗೃಹಭಾಗ್ಯ ಯೋಜನೆಯಡಿ 158 ಪೌರಕಾರ್ಮಿಕರಿಗಾಗಿ ನಿರ್ಮಿಸಿರುವ ಜಿ+3 ಮಾದರಿಯ ವಸತಿ ಸಮುಚ್ಚಯವನ್ನು ಪೌರ ಕಾರ್ಮಿಕರಿಗೆ ಬೀಗದ ಕೀ ನೀಡುವ ಮೂಲಕ ಸಚಿವರು ಶಾಸಕರು ಸಂಸದರು ಉದ್ಘಾಟಿಸಿದರು

ಬಳಿಕ ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಾಭಿವೃದ್ಧಿ ಸಚಿವರು ಆದ ಡಾ ಯತೀಂದ್ರ ಸಿದ್ದರಾಮಯ್ಯ ರವರು ಮಾತನಾಡಿ
ಇದರಲ್ಲಿ 122 ಪೌರಕಾರ್ಮಿಕ ಕುಟುಂಬಗಳನ್ನು ಪಾರದರ್ಶಕವಾಗಿ ಲಾಟರಿ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿ ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಸಾಂಕೇತಿಕವಾಗಿ ಫಲಾನುಭವಿಗಳಿಗೆ ಮನೆ ಹಂಚಿಕೆ ಪತ್ರಗಳನ್ನು ವಿತರಿಸಲಾಗಿದೆ ಎಂದು ಹೇಳಿದ ಸಚಿವರು ಪೌರಕಾರ್ಮಿಕರು ನಗರದ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯ ಕಾಪಾಡುವ ಮೂಲಕ ಸಮಾಜದ ಆರೋಗ್ಯವನ್ನು ರಕ್ಷಿಸುವ ಮಹತ್ತರ ಕಾರ್ಯ ಮಾಡುತ್ತಿದ್ದಾರೆ. ಅವರ ಶ್ರಮ ಮತ್ತು ಸೇವೆಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ ಮತ್ತು ಜವಾಬ್ದಾರಿ. ಎಂದು ಸಚಿವರು ತಿಳಿಸಿದರು

ನನ್ನ ತಂದೆ ಸಿದ್ದರಾಮಯ್ಯ ರವರು 2014-15ರಲ್ಲಿ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಪೌರಕಾರ್ಮಿಕರಿಗಾಗಿ ಗೃಹಭಾಗ್ಯ ಯೋಜನೆಯನ್ನು ಜಾರಿಗೆ ತರುವ ಮೂಲಕ ಸ್ವಂತ ಮನೆಯ ಕನಸಿಗೆ ಭದ್ರ ಬುನಾದಿ ಹಾಕಿದ್ದರು. ಅಲ್ಲದೆ, ಸುಮಾರು 29 ಸಾವಿರ ಪೌರಕಾರ್ಮಿಕರನ್ನು ಖಾಯಂಗೊಳಿಸುವ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದರು ಎಂದು ಸಚಿವರು ತಿಳಿಸಿದರು

ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಪ್ರತಿ ವರ್ಷ ಪೌರಕಾರ್ಮಿಕರ ದಿನಾಚರಣೆ ಆಚರಿಸುವುದಾಗಿ ಘೋಷಿಸಿರುವುದರ ಜೊತೆಗೆ ಅವರ ಬೆಳಗಿನ ಉಪಾಹಾರದ ಅನುದಾನವನ್ನೂ ಹೆಚ್ಚಿಸಿದ್ದಾರೆ ಎಂದು ಸಚಿವರು ತಿಳಿಸಿದರು

ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರ ವಿಶೇಷ ಮುತುವರ್ಜಿಯಿಂದ ಹಳೆ ಕೆಸರೆಯಲ್ಲಿ ಪರ್ಯಾಯ ನಿವೇಶನ ಒದಗಿಸಲು ಸಾಧ್ಯವಾಗಿದೆ ಎಂದು ಅವರ ಸಾಮಾಜಿಕ ಕಳಕಳಿಗೆ ಧನ್ಯವಾದ ಮತ್ತು ಮೆಚ್ಚುಗೆ ವ್ಯಕ್ತಪಡಿಸಿದರು

ಕಾಂಗ್ರೆಸ್ ಪಕ್ಷವು ಸಾಮಾಜಿಕ ನ್ಯಾಯದ ಆಶಯದೊಂದಿಗೆ ಶೋಷಿತರು, ಹಿಂದುಳಿದವರು ಹಾಗೂ ಶ್ರಮಿಕ ವರ್ಗದವರ ಬದುಕಿನಲ್ಲಿ ಗೌರವ ಮತ್ತು ಸ್ವಾಭಿಮಾನವನ್ನು ಹೆಚ್ಚಿಸಲು ಸದಾ ಬದ್ಧವಾಗಿದೆ. ಪೌರಕಾರ್ಮಿಕರ ಬದುಕು ಸುಧಾರಿಸುವುದು ಕೇವಲ ಯೋಜನೆಯಲ್ಲ, ಅದು ನಮ್ಮ ಸರ್ಕಾರದ ಸಾಮಾಜಿಕ ಹೊಣೆಗಾರಿಕೆಯಾಗಿದೆ ಎಂದು ಹೇಳಿದರು

ಈ ಕಾರ್ಯಕ್ರಮದಲ್ಲಿ ಚಾಮರಾಜನಗರ ಕ್ಷೇತ್ರದ ಲೋಕಸಭಾ ಸದಸ್ಯ ಸುನೀಲ್ ಬೋಸ್ ನರಸಿಂಹರಾಜ ವಿಧಾನಾಸಭಾ ಕೇತ್ರದ ಶಾಸಕರಾದ ತನ್ವೀರ್ ಸೇಠ್, ಡಾ ಡಿ ತಿಮಯ್ಯ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯೂಬ್ ಖಾನ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ಮೈಸೂರು ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ್ ರೆಡ್ಡಿ ಕರ್ನಾಟಕ ಬೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರಾಮಪ್ಪ, ಮೈಸೂರು ಪೇಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್ ಸಂಸ್ಥೆಯ ಅಧ್ಯಕ್ಷರಾದ ಹೆಚ್.ಡಿ. ಗಣೇಶ್, ಮೈಸೂರು ಮಹಾನಗರ ಪಾಲಿಕೆ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಶ್ರೀಮತಿ ಪುಷ್ಪವಲ್ಲಿ, ರಾಜ್ಯ ಸಪಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಅಶೋಕ್ ಸಾಲಪ್ಪ, ಮೈಸೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರಾದ ನಿತೇಶ್ ಪಾಟೀಲ್, ಮಹಾನಗರ ಪಾಲಿಕೆ ಆಯುಕ್ತೆ ಎಂ.ಕೆ. ಸವಿತ ಸೇರದಂತೆ ಇಲಾಖೆಯ ಅಧಿಕಾರಿಗಳು ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು

WhatsApp

Join Now

Telegram

Join Now

Instagram

Join Now