--Ads--

ಸಂವಿಧಾನದ ಆಶಯಗಳಿಗೆ ನಾವೆಲ್ಲರೂ ಧ್ವನಿಯಾಗೋಣ : ಜಿಲ್ಲಾಧಿಕಾರಿ ಡಾ ಕೆ.ಎನ್ ಅನುರಾಧ

On: November 26, 2026 12:32 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ಜಿಲ್ಲಾಡಳಿತ ಭವನದಲ್ಲಿ ಸಂವಿಧಾನ ದಿನಾಚರಣೆ

ಸಂವಿಧಾನದ ಆಶಯಗಳಿಗೆ ನಾವೆಲ್ಲರೂ ಧ್ವನಿಯಾಗೋಣ : ಜಿಲ್ಲಾಧಿಕಾರಿ ಡಾ ಕೆ.ಎನ್ ಅನುರಾಧ

ಬೆಂಗಳೂರು ಗ್ರಾಮಾಂತರ  ಜಿಲ್ಲೆ, ನ.26:

ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿದ್ದು, ನಾವೆಲ್ಲರೂ ಸಂವಿಧಾನದ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುಂದೆ ಸಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ಎನ್ ಅನುರಾಧ ಅವರು ಹೇಳಿದರು.

ಸಂವಿಧಾನ ದಿನಾಚರಣೆಯ ಅಂಗವಾಗಿ ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಜಿಲ್ಲಾಧಿಕಾರಿ ಡಾ. ಕೆ. ಎನ್ ಅನುರಾಧ ಅವರು ಪುಷ್ಪ ನಮನ ಸಲ್ಲಿಸಿ, ಸಂವಿಧಾನ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು.

ಸಂವಿಧಾನ ದಿನಾಚರಣೆ ಕೇವಲ ಆಚರಣೆ, ಭಾಷಣ ಹಾಗೂ ಕಾರ್ಯಕ್ರಮಗಳಿಗೆ ಸೀಮಿತವಾಗಬಾರದು. ಸಂವಿಧಾನವು ವ್ಯಕ್ತಿ ಅಥವಾ ಪಕ್ಷಕ್ಕೆ ಅನ್ವಯಿಸುವುದಲ್ಲ, ಎಲ್ಲರ ಹಕ್ಕು, ಸಂವಿಧಾನದ ಆಶಯಗಳನ್ನು ಸರಿಯಾಗಿ ಅರ್ಥಮಾಡಿಕೊಂಡು ಅವುಗಳನ್ನು ನಮ್ಮ ಆಲೋಚನೆ, ನಡವಳಿಕೆ ಮತ್ತು ಕಾರ್ಯಗಳಲ್ಲಿ ಅಳವಡಿಸಿಕೊಳ್ಳಬೇಕು.

ಸಂವಿಧಾನವನ್ನು ಓದಿ ಅರ್ಥಮಾಡಿಕೊಳ್ಳುವ ಬದಲು ಅಪಾರ್ಥ ಮಾಡಿಕೊಳ್ಳುವ ಪ್ರವೃತ್ತಿ ಕಂಡುಬರುತ್ತಿರುವುದು ಕಳವಳಕಾರಿ ಸಂಗತಿ. ಆದ್ದರಿಂದ ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರೂ ಸಂವಿಧಾನವನ್ನು ಅಧ್ಯಯನ ಮಾಡಿ, ಅದರಲ್ಲಿನ ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಸಹೋದರತ್ವದ ಮೌಲ್ಯಗಳನ್ನು ಜೀವನದಲ್ಲಿ ಪಾಲಿಸಬೇಕು ಎಂದು ಹೇಳಿದರು.

ಭಾರತದಲ್ಲಿ ಪ್ರತಿ ವರ್ಷ ನವೆಂಬರ್ 26 ರಂದು ಸಂವಿಧಾನ ದಿನ (ಸಂವಿಧಾನ್ ದಿವಸ್) ಆಚರಿಸಲಾಗುತ್ತದೆ. 1949ರ ನವೆಂಬರ್ 26ರಂದು ಭಾರತದ ಸಂವಿಧಾನ ಸಭೆಯು ಸಂವಿಧಾನವನ್ನು ಅಂಗೀಕರಿಸಿದ ಸ್ಮರಣಾರ್ಥ ಈ ದಿನವನ್ನು ಆಚರಿಸಲಾಗುತ್ತದೆ ಎಂದರು.

ಡಾ. ಬಿ.ಆರ್. ಅಂಬೇಡ್ಕರ್ ಅವರ 125ನೇ ಜನ್ಮದಿನದ ಅಂಗವಾಗಿ 2015ರಲ್ಲಿ ಭಾರತ ಸರ್ಕಾರವು ಈ ದಿನವನ್ನು ಅಧಿಕೃತವಾಗಿ ಆಚರಿಸಲು ಪ್ರಾರಂಭಿಸಿತು.
ಸಂವಿಧಾನದ ಮೂಲ ಆಶಯಗಳಾದ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸ್ಮರಿಸುವುದು ಹಾಗೂ ನಾಗರಿಕರಲ್ಲಿ ಸಾಂವಿಧಾನಿಕ ಮೌಲ್ಯಗಳು ಮತ್ತು ಹಕ್ಕು-ಕರ್ತವ್ಯಗಳ ಬಗ್ಗೆ ಅರಿವು ಮೂಡಿಸುವುದು ಇದರ ಉದ್ದೇಶ ನಮ್ಮೆಲ್ಲರ ಉದ್ದೇಶವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರೀ ರಾಮಕೃಷ್ಣಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಪ್ರೇಮಾ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now