--Ads--

ಶಿಕ್ಷಣವು ವಿದ್ಯಾರ್ಥಿಗಳಿಗೆ ಹಾಗೂ ಸಮಾಜಕ್ಕೆ ಜೀವನ ಮೌಲ್ಯ, ಸಂಸ್ಕೃತಿ, ಸಂಸ್ಕಾರ ಕಲಿಸಬೇಕು : ಡಾ.ಗುರುರಾಜ ಕರ್ಜಗಿ ಅಭಿಪ್ರಾಯ

On: November 27, 2026 5:15 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್………

ಶಿಕ್ಷಣವು ವಿದ್ಯಾರ್ಥಿಗಳಿಗೆ ಹಾಗೂ ಸಮಾಜಕ್ಕೆ ಜೀವನ ಮೌಲ್ಯ, ಸಂಸ್ಕೃತಿ, ಸಂಸ್ಕಾರ ಕಲಿಸಬೇಕು : ಡಾ.ಗುರುರಾಜ ಕರ್ಜಗಿ ಅಭಿಪ್ರಾಯ

ಬೆಂಗಳೂರು : ಶೇಷಾದ್ರಿಪುರಂ ಅಕಾಡೆಮಿ ಆಫ್ ಬಿಸಿನೆಸ್ ಸ್ಟಡೀಸ್‌ನಲ್ಲಿ ‘ಜೀವನದ ಯಶಸ್ಸಿಗೆ ಶಿಕ್ಷಣ ಮತ್ತು ಮೌಲ್ಯಗಳು’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಪಿಯುಸಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಏರ್ಪಡಿಸಲಾಗಿತ್ತು.

ಶಿಕ್ಷಣವು ಕೇವಲ ಅಂಕಗಳನ್ನು ಗಳಿಸುವುದಕ್ಕೆ ಸೀಮಿತವಾಗಬಾರದು. ಮನುಷ್ಯನಿಗೆ ಜೀವನದ ಬೆಲೆ ಮತ್ತು ಮಾನವೀಯ ಮೌಲ್ಯಗಳನ್ನು ತಿಳಿಸುವ ಸಾಧನವಾಗಬೇಕು ಎಂದು ಖ್ಯಾತ ಶಿಕ್ಷಣ ತಜ್ಞರಾದ ಡಾ.ಗುರುರಾಜ ಕರ್ಜಗಿ ಅವರು ಅಭಿಪ್ರಾಯಪಟ್ಟರು.

ಬುದ್ಧಿವಂತಿಕೆಯ ಜೊತೆಗೆ ಉತ್ತಮ ಸಂಸ್ಕಾರ, ನೈತಿಕತೆ ಮತ್ತು ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯ. ಎಷ್ಟೇ ಉನ್ನತ ಹುದ್ದೆಯನ್ನು ಅಲಂಕರಿಸಿದರೂ ಮಾನವೀಯ ಮೌಲ್ಯಗಳಿಲ್ಲದಿದ್ದರೆ ಜೀವನಕ್ಕೆ ಅರ್ಥವಿರುವುದಿಲ್ಲ. ಜ್ಞಾನ, ಸಂಸ್ಕೃತಿ, ಸಂಸ್ಕಾರ ಹಾಗೂ ವ್ಯಕ್ತಿತ್ವ ವಿಕಸನವೇ ಶಿಕ್ಷಣದ ಮೂಲ ಉದ್ದೇಶವಾಗಬೇಕು ಎಂದು ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು ಎಂದು ಕರೆ ನೀಡಿದರು. ಪದವಿ. ಕಾಲೇಜಿನ ಪ್ರಾಂಶುಪಾಲ ಡಾ. ಜಯರಾಮ ಅವರು ಅತಿಥಿಗಳನ್ನು ಸ್ವಾಗತಿಸಿದರು.

ವೇದಿಕೆಯಲ್ಲಿ ಪಿ.ಯು.ಸಿ.ಕಾಲೇಜಿನ ಪ್ರಾಂಶುಪಾಲ ಡಾ.ಮಂಜುನಾಥ್ , ಕಾರ್ಯಕ್ರಮ ಸಂಯೋಜಕರಾದ ಡಾ.ಪೂರ್ಣೀಮ, ಹರೀಶ್ ಸಮಾರಂಭದಲ್ಲಿ ಕಾಲೇಜಿನ ಉಪನ್ಯಾಸಕರು , ಸಿಬ್ಬಂದಿ ವರ್ಗ ಹಾಜರಿದ್ದರು.

WhatsApp

Join Now

Telegram

Join Now

Instagram

Join Now