--Ads--

ನೊಂದಾಯಿತ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮಕ್ಕೆ ಸಚಿವ ಕೆ.ಹೆಚ್ ಮುನಿಯಪ್ಪ ಚಾಲನೆ

On: November 27, 2026 10:40 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ನೊಂದಾಯಿತ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮಕ್ಕೆ ಸಚಿವ ಕೆ.ಹೆಚ್ ಮುನಿಯಪ್ಪ ಚಾಲನೆ

ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನ.27:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಒದಗಿಸುವ ಕಾರ್ಯಕ್ರಮಕ್ಕೆ ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಚಾಲನೆ ನೀಡಿದರು.

ದೇವನಹಳ್ಳಿ ಪಟ್ಟಣದ ಅಂಬೇಡ್ಕರ್ ಭವನದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕಾರ್ಮಿಕ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವರು ಚಾಲನೆ ನೀಡಿ ಬಳಿಕ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ನಡೆಸುವುದನ್ನು ಪರಿಶೀಲನೆ ನಡೆಸಿ ಆರೋಗ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಸುಮಾರು ಮೂರು ತಿಂಗಳು ಆರೋಗ್ಯ ತಪಾಸಣೆ ಶಿಬಿರ ನಡೆಯಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 30000 ಕ್ಕೂ ಅಧಿಕ ಕಾರ್ಮಿಕರಿದ್ದಾರೆ. ಕಟ್ಟಡ ಕಾರ್ಮಿಕರು ವಾಸವಿರುವ ಸ್ಥಳಗಳಲ್ಲಿ ಶಿಬಿರಗಳನ್ನು ಆಯೋಜಿಸಲಾಗುತ್ತದೆ. ಮಂಡಳಿಯಲ್ಲಿ ನೋಂದಾಯಿತರಾದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಅವರ ಅವಲಂಬಿತರು ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ರಂಗನಾಥ್, ಜಿಲ್ಲಾ ಕಾರ್ಮಿಕ ಅಧಿಕಾರಿ ಮುಕುಂದ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಂಜುನಾಥ್, ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now