--Ads--

ಮಲಯಾಳಿಗಳು ಕೊಡಗಿನ ಸಂಸ್ಕೃತಿ ಹಾಳು ಮಾಡುತ್ತಿದ್ದಾರೆ ಹೇಳಿಕೆ : ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲು

On: November 28, 2026 9:26 AM
Follow ಮಾಡಿ
--Ads--

Whatsapp Channel

Join Now

Telegram Group

Join Now

 

ವಿಜಯ ದರ್ಪಣ ನ್ಯೂಸ್……

ಮಲಯಾಳಿಗಳು ಕೊಡಗಿನ ಸಂಸ್ಕೃತಿ ಹಾಳು ಮಾಡುತ್ತಿದ್ದಾರೆ ಹೇಳಿಕೆ : ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲು

ಮಡಿಕೇರಿ: ಮಲಯಾಳಿಗಳು ಕರ್ನಾಟಕವನ್ನು ಅತಿಕ್ರಮಿಸುತ್ತಿದ್ದು, ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಹಾಗೂ ಕೊಡಗಿನ ಸಂಸ್ಕೃತಿಯನ್ನು ಹಾಳು ಮಾಡುತ್ತಿದ್ದಾರೆ ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದ  ಮೈಸೂರು-ಕೊಡಗು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಕೊಡಗು ಹಿಂದೂ ಮಲಯಾಳಿ ಸಂಘದ ಸದಸ್ಯರು ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ಸಂಘದ ಅಧ್ಯಕ್ಷ ಕೆ.ಪಿ. ಪ್ರಶಾಂತ್ ಖಂಡಿಸಿದ್ದು, ಸಮುದಾಯದ ಬುದ್ಧಿವಂತಿಕೆಯ ಬಗ್ಗೆಯೂ ಅವರು ಪ್ರಶ್ನೆ ಎತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಭಾಷೆ ಅಥವಾ ಪ್ರಾದೇಶಿಕ ಹಿನ್ನೆಲೆಯ ಆಧಾರದಲ್ಲಿ ಸಮುದಾಯವೊಂದನ್ನು ಅವಮಾನಿಸುವುದು ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾಗಿದೆ. ಇಂತಹ ಹೇಳಿಕೆಗಳು ಕೋಮು ದ್ವೇಷ ಮತ್ತು ಅಶಾಂತಿಗೆ ಪ್ರಚೋದನೆ ನೀಡುವ ಅಪಾಯವಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಂಘದ ಸ್ಥಾಪಕ ಅಧ್ಯಕ್ಷ ಶರತ್ ಕಾಂತ್ ಮಾತನಾಡಿ, ಪ್ರತಾಪ್ ಸಿಂಹ ಅವರ ಹೇಳಿಕೆಗಳು ಸ್ಥಳೀಯ ಮಲಯಾಳಿಗಳ ಗೌರವಕ್ಕೆ ಧಕ್ಕೆ ತಂದಿವೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಸಂಸದರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಹಾಗೂ ಪ್ರಕರಣದ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 196 ಸೇರಿದಂತೆ ಸೂಕ್ತ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಸಮುದಾಯದ ಮುಖಂಡರು ಪೊಲೀಸರನ್ನು ಆಗ್ರಹಿಸಿದ್ದಾರೆ

 

WhatsApp

Join Now

Telegram

Join Now

Instagram

Join Now