ವಿಜಯ ದರ್ಪಣ ನ್ಯೂಸ್…..
ಪೂಜಾನ ಅಗ್ರಹಾರದ ನಾರಾಯಣಸ್ವಾಮಿ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ತಾವರೆಕೆರೆ : ಹೊಸಕೋಟೆ ತಾಲೂಕಿನ ಪೂಜಾನ ಅಗ್ರಹಾರ ಗ್ರಾಮದ ನಾರಾಯಣಸ್ವಾಮಿ ಅವರಿಗೆ ಸಿರಿಗನ್ನಡ ಫೌಂಡೇಶನ್ ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ವೀರ ಕನ್ನಡಿಗ ರಕ್ಷಣಾ ವೇದಿಕೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ನಾರಾಯಣಸ್ವಾಮಿ ಅವರು ಹಲವು ವರ್ಷಗಳಿಂದ ಕನ್ನಡಪರ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಕನ್ನಡ ಭಾಷೆ, ನಾಡು-ನುಡಿಯ ಉಳಿವು ಮತ್ತು ಬೆಳವಣಿಗೆಗಾಗಿ ವಿವಿಧ ಕನ್ನಡಪರ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಮಾಜದಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿಕೊಂಡಿದ್ದಾರೆ.
ಅವರ ಕನ್ನಡಪರ ಸೇವೆ, ಹೋರಾಟ ಹಾಗೂ ಸಮಾಜಮುಖಿ ಕಾರ್ಯಗಳನ್ನು ಪರಿಗಣಿಸಿ ಸಿರಿಗನ್ನಡ ಫೌಂಡೇಶನ್ ಕರ್ನಾಟಕ ಸಂಸ್ಥೆಯು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.
ಈ ಸಂದರ್ಭದಲ್ಲಿ ಮಾತನಾಡಿದ ವೀರ ಕನ್ನಡಿಗ ರಕ್ಷಣಾ ವೇದಿಕೆಯ ರಾಜ್ಯ ಉಪಾಧ್ಯಕ್ಷ ಕಿಟ್ಟಿ ಅವರು, ನಾರಾಯಣಸ್ವಾಮಿ ಅವರ ಕನ್ನಡಪರ ಸೇವೆಯನ್ನು ಶ್ಲಾಘಿಸಿ ಅಭಿನಂದನೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿಯೂ ಹಲವು ಸಮಾಜಮುಖಿ ಕಾರ್ಯಗಳು ಹಾಗೂ ಕನ್ನಡಪರ ಹೋರಾಟಗಳಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಇತರರಿಗೆ ಮಾದರಿಯಾಗುವಂತಹ ಕೆಲಸಗಳನ್ನು ಮಾಡಬೇಕು ಎಂದು ಸಲಹೆ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬಾಣಮಾಕನಹಳ್ಳಿ ನಾರಾಯಣಸ್ವಾಮಿ, ಪೂಜಾನ ಅಗ್ರಹಾರದ ಅಶೋಕ್, ಎಸ್‌ಡಿಪಿ ಮುನಿರಾಜು ಹಾಗೂ ಹರೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದು ನಾರಾಯಣಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸಿದರು.










