ವಿಜಯ ದರ್ಪಣ ನ್ಯೂಸ್…….
ಬಸವಣ್ಣನವರಿಗೆ ಅಪಮಾನವಾಗುವ ಕಾರ್ಯಕ್ರಮದಲ್ಲಿ ಭಾಗಿಯಾದ ಶಂಕರ್ ಬಿದರಿ ರಾಜೀನಾಮೆ ನೀಡಲಿ : ವರುಣಾಮಹೇಶ್

ತಾಂಡವಪುರ ನವಂಬರ್ 28 ಸಾಹಿತಿ ರವಿ ಹಂಜೆ ಅವರ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸುವ ಮೂಲಕ ವಿಶ್ವಗುರು ಬಸವಣ್ಣನವರಿಗೆ ಅಪಮಾನವಾಗುವಂತಹ ಬೆಳವಣಿಗೆಗೆ ಪರೋಕ್ಷವಾಗಿ ಬೆಂಬಲ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷರಾದ ಶಂಕರ್ ಬಿದರಿ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಬೇಕು ಎಂದು ಮಹಾಸಭಾದ ಮಾಜಿ ಕೋಶಾಧ್ಯಕ್ಷ ವರುಣಾಮಹೇಶ್ ಅವರು ಒತ್ತಾಯಿಸಿದ್ದಾರೆ.
ಅವರು ಈ ಕುರಿತು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡುತ್ತಾ
12ನೇ ಶತಮಾನದಲ್ಲಿಯೇ ಸಮಾನತೆ, ಕಾಯಕ, ದಾಸೋಹ ಹಾಗೂ ಮಾನವೀಯ ಮೌಲ್ಯಗಳ ಸಂದೇಶ ಸಾರಿದ ಮಹಾನ್ ದಾರ್ಶನಿಕರಾದ ವಿಶ್ವಗುರು ಬಸವಣ್ಣನವರ ವಿಚಾರಧಾರೆಗಳಿಗೆ ಅಪಮಾನವಾಗುವಂತಹ ಯಾವುದೇ ಚಟುವಟಿಕೆಗಳನ್ನು ಸಹಿಸಲು ಸಾಧ್ಯವಿಲ್ಲ. ಬಸವಣ್ಣನವರ ತತ್ವ, ಆದರ್ಶ ಮತ್ತು ಗೌರವವನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಎಂದು ಹೇಳಿದ ಮಹೇಶ್ ರವರು
ವೀರಶೈವ ಲಿಂಗಾಯತ ಸಮಾಜದ ಪ್ರಮುಖ ಸಂಘಟನೆಯಾದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷರಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಶಂಕರ್ ಬಿದರಿ ಅವರು ಈ ವಿಚಾರದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು. ಸಮಾಜದ ಭಾವನೆಗಳಿಗೆ ಧಕ್ಕೆ ಉಂಟಾಗಿರುವ ಹಿನ್ನೆಲೆಯಲ್ಲಿ ಅವರು ನೈತಿಕ ಹೊಣೆ ಹೊತ್ತು ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ವರುಣಾಮಹೇಶ್ ಆಗ್ರಹಿಸಿದ್ದಾರೆ.











