ಬೆಳೆ ಕಟಾವು ತರಬೇತಿ

ವಿಜಯ ದರ್ಪಣ ನ್ಯೂಸ್ 

 ದೇವನಹಳ್ಳಿ ,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 04

ದೇವನಹಳ್ಳಿ ತಾಲ್ಲೂಕಿನ ತಾಲ್ಲೂಕು‌ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 04 ರ ಸೋಮವಾರದಂದು 2023-24 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲು ವಿಮಾ ಯೋಜನೆ ಅಡಿ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳುವ ಕುರಿತು ತರಬೇತಿಯನ್ನು ಹಮ್ಮಿಕೊಳ್ಳಲಾಗಿತ್ತು.

ಕಂದಾಯ ಇಲಾಖೆ, ತೋಟಗಾರಿಕೆ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಕೃಷಿ ಇಲಾಖೆ ಸಿಬ್ಬಂದಿಗೆ ತರಬೇತಿ ನೀಡಲಾಯಿತು.
ಇದೇ ಕಾರ್ಯಾಗಾರದಲ್ಲಿ ಜನನ ಮತ್ತು ಮರಣದ ನೋಂದಣಿ ಕುರಿತು ತರಬೇತಿಯನ್ನೂ ನೀಡಲಾಯಿತು.
ಕಾರ್ಯಕ್ರಮದಲ್ಲಿ ಸಹಾಯಕ‌ ನಿರ್ದೇಶಕರು (ಸಾಂಖ್ಯಿಕ ಇಲಾಖೆ), ಸಹಾಯಕ ಸಾಂಖ್ಯಿಕ ಅಧಿಕಾರಿಗಳು, ಸಾಂಖ್ಯಿಕ ನಿರೀಕ್ಷಕರು ಹಾಗೂ ವಿಮಾ ಪ್ರತಿ‌ನಿಧಿ ಸಿಬ್ಬಂದಿಗಳು ತಾಲ್ಲೂಕಿನ ಎಲ್ಲಾ ಮೂಲ ಕಾರ್ಯಕರ್ತರು ಉಪಸ್ಥಿತರಿದ್ದರು.

 

ದೊಡ್ಡಬಳ್ಳಾಪುರ: ಬೆಳೆ ಕಟಾವು ತರಬೇತಿ ಕಾರ್ಯಕ್ರಮ

ದೊಡ್ಡಬಳ್ಳಾಪುರ,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 05

 ದೊಡ್ಡಬಳ್ಳಾಪುರ ತಾಲ್ಲೂಕಿನ ತಾಲ್ಲೂಕು‌ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾ ಧಿಕಾರಿಗಳ ಅಧ್ಯಕ್ಷತೆಯಲ್ಲಿ ಇಂದು 2023-24 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲು ವಿಮಾ ಯೋಜನೆ ಅಡಿ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳುವ ಕುರಿತು ತರಬೇತಿಯನ್ನು ಹಮ್ಮಿಕೊಳ್ಳಲಾಗಿತ್ತು. ಕಂದಾಯ ಇಲಾಖೆ, ತೋಟಗಾರಿಕೆ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಕೃಷಿ ಇಲಾಖೆ ಸಿಬ್ಬಂದಿಗೆ ತರಬೇತಿ ನೀಡಲಾಯಿತು. ಇದೇ ಕಾರ್ಯಾಗಾರದಲ್ಲಿ ಜನನ ಮತ್ತು ಮರಣದ ನೋಂದಣಿ ಕುರಿತು ತರಬೇತಿಯನ್ನೂ ನೀಡಲಾಯಿತು.

ಕಾರ್ಯಕ್ರಮದಲ್ಲಿ ಸಹಾಯಕ‌ ನಿರ್ದೇಶಕರು(ಸಾಂಖ್ಯಿಕ ಇಲಾಖೆ), ಸಹಾಯಕ ಕೃಷಿ ನಿರ್ದೇಶಕರು, ಸಹಾಯಕ ಸಾಂಖ್ಯಿಕ ಅಧಿಕಾರಿಗಳು, ಸಾಂಖ್ಯಿಕ ನಿರೀಕ್ಷಕರು ಹಾಗೂ ಜಿಲ್ಲೆಯ ಮತ್ತು ತಾಲ್ಲೂಕಿನ ವಿಮಾ ಪ್ರತಿನಿಧಿಗಳು ಮತ್ತು ತಾಲ್ಲೂಕಿನ ಎಲ್ಲಾ ಮೂಲ ಕಾರ್ಯಕರ್ತರು ಉಪಸ್ಥಿತರಿದ್ದರು.