ವಿಶ್ವಕರ್ಮ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ : ಅಪರ ಜಿಲ್ಲಾಧಿಕಾರಿ ಅಮರೇಶ್

ವಿಜಯ ದರ್ಪಣ ನ್ಯೂಸ್

ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು  ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 12

ಸೆಪ್ಟೆಂಬರ್ 17 ರಂದು ಜಿಲ್ಲಾಮಟ್ಟದ ವಿಶ್ವಕರ್ಮ ಜಯಂತಿಯನ್ನು ದೇವನಹಳ್ಳಿ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಆಚರಿಸಲು ನಿರ್ಣಯಿಸಲಾಗಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಅಮರೇಶ್‌.ಹೆಚ್ ಅವರು ಅಧಿಕಾರಿಗಳಿಗೆ ಸೂಚಿಸಿದರು‌.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ವಿಶ್ವಕರ್ಮ ಜಯಂತಿ ಆಚರಿಸುವ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಯಂತಿಯನ್ನು ಆಚರಿಸುವ ನಿಟ್ಟಿನಲ್ಲಿ ಶೀಘ್ರವೇ ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಿ ಶಿಷ್ಟಾಚಾರದಂತೆ ಎಲ್ಲರಿಗೂ ತಲುಪಿಸಿ, ವೇದಿಕೆ ಕಾರ್ಯಕ್ರಮಕ್ಕೆ ಸೂಕ್ತ ಸಿದ್ಧತೆ ಮಾಡಿಕೊಳ್ಳಿ, ಗಣ್ಯರಿಗೆ ಸನ್ಮಾನ, ಸಂಪನ್ಮೂಲ ವ್ಯಕ್ತಿಗಳಿಗೆ ಆಹ್ವಾನ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವುದು ಸೇರಿದಂತೆ ಎಲ್ಲವನ್ನೂ ಮುಂಚಿತವಾಗಿ ವ್ಯವಸ್ಥೆ ಮಾಡಿಕೊಂಡು ಕಾರ್ಯಕ್ರಮ ಯಶಸ್ವಿಯಾಗಲು ಕ್ರಮ ವಹಿಸಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ರವಿಕುಮಾರ್ ಡಿ.ಎಂ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಸಮುದಾಯ ಮುಖಂಡರು ಉಪಸ್ಥಿತರಿದ್ದರು.

 

ಲಿಡ್ ಕರ್ ನಿಗಮದಿಂದ ರಿಯಾಯಿತಿ ದರದಲ್ಲಿ ಚರ್ಮ ವಸ್ತುಗಳ ಮಾರಾಟ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 12

ಲಿಡ್ ಕರ್ ನಿಗಮದ ವತಿಯಿಂದ ಬೆಂಗಳೂರಿನ ರಾಜಾಜಿನಗರ ಮಾರಾಟ ಮಳಿಗೆಯಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ದಿನಾಂಕ: 05.09.2023 ರಿಂದ 20.09.2023 ರವರೆಗೆ ಅಪ್ಪಟ ಚರ್ಮದ ಪಾದರಕ್ಷೆ, ಶೂ, ಬೆಲ್ಟ್, ಪರ್ಸ್, ಮಹಿಳೆಯರ ಪರ್ಸ್‌, ವ್ಯಾನಿಟಿ ಬ್ಯಾಗ್‌ಗಳು ಹೊಸ ಮಾದರಿಯಲ್ಲಿ ಲಭ್ಯವಿದ್ದು ಸದರಿ ದಾಸ್ತಾನುಗಳ ಮೇಲೆ ಶೇಕಡ 20 ರಷ್ಟು ರಿಯಾಯಿತಿ ದರದಲ್ಲಿ ಮಾರಾಟವಿರುತ್ತದೆ. ‌ಆಸಕ್ತರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.