--Ads--

ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ ಶೇಕಡ 100 ರಷ್ಟು ಪ್ರಗತಿ ಸಾಧಿಸಿ:ಜಿಲ್ಲಾಧಿಕಾರಿ ಡಾ.ಶಿವಶಂಕರ. 

On: September 22, 2023 6:04 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್

ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 19: ಜಿಲ್ಲೆಯಲ್ಲಿರುವ ಎಲ್ಲಾ ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಹಾಕಲು ಅಗತ್ಯ ಸಿದ್ದತೆ ಕೈಗೊಂಡು ಶೇಕಡ 100 ರಷ್ಟು ಪ್ರಗತಿ ಸಾಧಿಸಿ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಪಶು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 4 ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕೆ ಕಾರ್ಯಕ್ರಮದ ಪೂರ್ವ ತಯಾರಿ ಸಂಬಂಧ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು 1,62,980 ದನ ಮತ್ತು ಎಮ್ಮೆಗಳಿದ್ದು, ಈ ಎಲ್ಲಾ ಜಾನುವಾರುಗಳಿಗೆ ದಿನಾಂಕ 26.09.2023 ರಿಂದ 25.10.2023 ರವರೆಗೆ 4ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವನ್ನು ಬಮೂಲ್ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗುವುದು.
ಒಟ್ಟು 65 ತಂಡಗಳಲ್ಲಿ 276 ಲಸಿಕೆದಾರರು ಪ್ರತಿದಿನ ಬೆಳಿಗ್ಗೆ 06.00 ಗಂಟೆಯಿಂದ ಬೆಳಿಗ್ಗೆ 11.00 ಗಂಟೆಯವರೆಗೆ ನಿಗದಿತ ವೇಳಾಪಟ್ಟಿಯಂತೆ ಗ್ರಾಮಗಳಿಗೆ ಭೇಟಿ ನೀಡಿ, ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ನೀಡಲಿದ್ದಾರೆ. ಈಗಾಗಲೇ ಪ್ರತೀ ಗ್ರಾಮವಾರು ಮೈಕ್ರೋಪ್ಲಾನ್ ಮಾಡಲಾಗಿದ್ದು, ಅದರನ್ವಯ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಮತ್ತು ಈ ಲಸಿಕಾ ಕಾರ್ಯಕ್ರಮದ ಕುರಿತು ರೈತರಿಗೆ ಮನವರಿಕೆ ಮಾಡಿ ಕೊಡುವ ಸಲುವಾಗಿ ಫ್ಲೆಕ್ಸ್ ಬ್ಯಾನರ್, ಪೋಸ್ಟರ್ ಮತ್ತು ಕರಪತ್ರಗಳನ್ನು ಮುದ್ರಿಸಿ ಜಿಲ್ಲೆಯ ಪ್ರತಿ ಪಶುವೈದ್ಯಕೀಯ ಸಂಸ್ಥೆ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳ ಆವರಣದಲ್ಲಿ ಪ್ರದರ್ಶಿಸಿ ಎಂದರು.


ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 1,87,700 ಡೋಸಸ್‌ ಕಾಲುಬಾಯಿ ರೋಗ ಲಸಿಕೆ ಹಾಗೂ 1,67,000 ಸಿರಿಂಜ್‌ಗಳು ಸರಬರಾಜಾಗಿವೆ. ಬಮೂಲ್ ವತಿಯಿಂದ ಈ ಲಸಿಕಾ ಕಾರ್ಯಕ್ರಮಕ್ಕೆ ಒಟ್ಟು 36 ವಾಹನಗಳನ್ನು ಹಾಗೂ 51 ಲಸಿಕೆದಾರರನ್ನು ಒದಗಿಸಲಾಗುತ್ತಿದೆ. ಪ್ರತಿ ರಾಸಿಗೆ 01 ರಂತೆ ಸಿರಿಂಜ್ ಮತ್ತು ನೀಡಲ್‌ಗಳನ್ನು ಬಳಸಿ ಲಸಿಕೆ ಹಾಕಲಾಗುವುದು. ಆದ ಪ್ರಯುಕ್ತ ಎಲ್ಲಾ ರೈತ ಬಾಂಧವರು 03 ತಿಂಗಳ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ತಪ್ಪದೇ ಕಾಲುಬಾಯಿ ರೋಗ ಲಸಿಕೆ ಹಾಕಿಸಲು ಕ್ರಮ ವಹಿಸಿ ಎಂದು ಹೇಳಿದರು.

ಸಭೆಯಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರಾದ ಡಾ.ಜಗದೀಶ್ ಕುಮಾರ್ ಎನ್, ತಾಲ್ಲೂಕು ಸಹಾಯಕ ನಿರ್ದೇಶಕರು, ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿಗಳು, ಬಮುಲ್ ಉಪ ವ್ಯವಸ್ಥಾಪಕರು ಉಪಸ್ಥಿತರಿದ್ದರು.

ವಿಶ್ವ ರೇಬಿಸ್ ದಿನಾಚರಣೆಗೆ ಜಿಲ್ಲಾಧಿಕಾರಿ ಡಾ.ಶಿವಶಂಕರ ಚಾಲನೆ

ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಇಂದು ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಪಶು ವೈದ್ಯಾಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾಧಿಕಾರಿ ಡಾ. ಶಿವಶಂಕರ್. ಎನ್ ಅವರು ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ.ಕೆ.ಎನ್, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರಾದ ಡಾ.ಜಗದೀಶ್ ಕುಮಾರ್ ಎನ್, ಬೆಂಗಳೂರು ಗ್ರಾಮಾಂತರ ಕರ್ನಾಟಕ ಪಶು ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಶಿವಶರಣಪ್ಪ,ಉಪಾಧ್ಯಕ್ಷ ಶ್ರೀಧರ್ ಮೂರ್ತಿ, ಹಿರಿಯ ಪಶು ವಿಜ್ಞಾನಿ ಗಂಗಾಧರ ಸೇರಿದಂತೆ ಪಶುವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now