ಸೆಪ್ಟೆಂಬರ್ 27 ರಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ

ವಿಜಯ ದರ್ಪಣ ನ್ಯೂಸ್

ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 25 : ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಪ್ರವಾಸೋದ್ಯಮ ಇಲಾಖೆ ವತಿಯಿಂದ ಪ್ರವಾಸೋದ್ಯಮ ಮತ್ತು ಹಸಿರು ಹೂಡಿಕೆಗಳು ಎಂಬ ಸಂದೇಶದೊಂದಿಗೆ “ವಿಶ್ವ ಪ್ರವಾಸೋದ್ಯಮ ದಿನಾಚರಣೆ” ಅಂಗವಾಗಿ ಸೆಪ್ಟೆಂಬರ್ 27 ರಂದು ಆಚರಿಸಲಾಗುತ್ತದೆ.‌ ಅಂದು ಬೆಳಗ್ಗೆ 8:30 ಗಂಟೆಗೆ ತಾಲ್ಲೂಕು ಕಛೇರಿಯಿಂದ ದೇವನಹಳ್ಳಿ ಕೋಟೆಯವರೆಗೆ ಸೈಕ್ಲಿಂಗ್ ಮತ್ತು ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಉದ್ಘಾಟನೆ ಮಾಡಲಿದ್ದಾರೆ.

ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವ ಹೆಚ್.ಕೆ ಪಾಟೀಲ್ ಅವರ ಘನ ಉಪಸ್ಥಿತಿಯಲ್ಲಿ, ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯ ಬಿ.ಎನ್.ಬಚ್ಚೇಗೌಡ, ವಿಧಾನ ಪರಿಷತ್ ಶಾಸಕರಾದ ಎಸ್.ರವಿ, ಎನ್.ನಾಗರಾಜು, ಅ.ದೇವೇಗೌಡ, ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಶಾಸಕ ಧೀರಜ್ ಮುನಿರಾಜ್,
ನೆಲಮಂಗಲ, ವಿಧಾನಸಭಾ ಕ್ಷೇತ್ರ ಶಾಸಕ ಎನ್ ಶ್ರೀನಿವಾಸ, ಪಶುಸಂಗೋಪನೆ, ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ, ಜಿಲ್ಲಾ ಪಂಚಾಯಿತಿಯ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ.ಕೆ.ಫಾಹಿಂ, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾದ ಡಾ.ರಾಮ್ ಪ್ರಸಾತ್ ಮನೋಹರ್.ವಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ್.ಎನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ‌.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾದ ಚೆಲುವಾಂಬ.ಪಿ ಸೇರಿದಂತೆ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ನಾಮ ನಿರ್ದೇಶಿತ ಸದಸ್ಯರು ಹಾಗೂ ಪತ್ರಿಕಾ ಮತ್ತು ಮಾಧ್ಯಮ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

&&&&&&&&&&&&&&&&&&&&&&&&&

 ಸೆಪ್ಟೆಂಬರ್ 27 ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 25 : 2023-24ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ದಿನಾಂಕ 27.09.2023 ಮತ್ತು 28.09.2023 ರಂದು ಆಯೋಜಿಸಲಾಗಿದೆ .

ಈಗಾಗಲೇ ದಿನಾಂಕ 21 ಮತ್ತು 22 ಸೆಪ್ಟೆಂಬರ್ 2023 ರಂದು ನಡೆದ 4 ತಾಲ್ಲೂಕಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು/ ಕ್ರೀಡಾಪಟುಗಳು ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ.

ಆದ್ದರಿಂದ ದಿನಾಂಕ 27.09.2023 ರಂದು ಭಗತ್‌ಸಿಂಗ್ ಕ್ರೀಡಾಂಗಣ ದೊಡ್ಡಬಳ್ಳಾಪುರದಲ್ಲಿ ಬೆಳಿಗ್ಗೆ 9.00 ಗಂಟೆಗೆ ಆಧಾರ್ ಕಾರ್ಡ್ ಮತ್ತು ಪಾಸ್ ಪೋರ್ಟ್ ಅಳತೆಯ ಭಾವ ಚಿತ್ರದೊಂದಿಗೆ ಎಂ ಪ್ರಭು, ಅಥ್ಲೆಟಿಕ್ ತರಬೇತುದಾರರು 9945029942 ರವರಲ್ಲಿ ವರದಿ ಮಾಡಿಕೊಂಡು ನೋಂದಣಿ ಮಾಡಿಕೊಳ್ಳುವುದು.

ಆಯೋಜಿಸಲಾಗುವ ಕ್ರೀಡೆಗಳು

ಅಥ್ಲೆಟಿಕ್ಸ್ – ಪುರುಷ ಮತ್ತು ಮಹಿಳೆಯರಿಗೆ, ವಾಲಿಬಾಲ್ – ಪುರುಷ ಮತ್ತು ಮಹಿಳೆಯರಿಗೆ,

ಪುಟ್ಬಾಲ್ – ಪುರುಷರಿಗೆ, ಖೋ ಖೋ – ಪುರುಷ ಮತ್ತು ಮಹಿಳೆಯರಿಗೆ,

ಕಬಡ್ಡಿ – ಪುರುಷ ಮತ್ತು ಮಹಿಳೆಯರಿಗೆ,

ಥ್ರೋಬಾಲ್ – ಪುರುಷ ಮತ್ತು ಮಹಿಳೆಯರಿಗೆ,

ಬ್ಯಾಸ್ಕೆಟ್‌ಬಾಲ್ – ಪುರುಷ ಮತ್ತು ಮಹಿಳೆಯರಿಗೆ,

ಹಾಕಿ – ಪುರುಷ ಮತ್ತು ಮಹಿಳೆಯರಿಗೆ,

ಹ್ಯಾಂಡ್‌ಬಾಲ್ – ಪುರುಷ ಮತ್ತು ಮಹಿಳೆಯರಿಗೆ,

ಟೇಬಲ್ ಟೆನ್ನಿಸ್ – ಪುರುಷ ಮತ್ತು ಮಹಿಳೆಯರಿಗೆ,

ಬಾಲ್ ಬ್ಯಾಡ್ಮಿಂಟನ್ – ಪುರುಷ ಮತ್ತು ಮಹಿಳೆಯರಿಗೆ,

ಕುಸ್ತಿ – ಪುರುಷ ಮತ್ತು ಮಹಿಳೆಯರಿಗೆ, ಯೋಗ -‌ಪುರುಷ ಮತ್ತು ಮಹಿಳೆಯರಿಗೆ,

ಬ್ಯಾಡ್ಮಿಂಟನ್ – ಪುರುಷ ಮತ್ತು ಮಹಿಳೆಯರಿಗೆ,

ನೆಟ್‌ಬಾಲ್ – ಪುರುಷ ಮತ್ತು ಮಹಿಳೆಯರಿಗೆ.

1) ಟೆನ್ನಿಸ್ – ಪುರುಷ ಮತ್ತು ಮಹಿಳೆಯರಿಗೆ,

2) ಈಜು – ಪುರುಷ ಮತ್ತು ಮಹಿಳೆಯರಿಗೆ,

ಷರತ್ತು ಮತ್ತು ನಿಬಂಧನೆಗಳು

ಜಿಲ್ಲಾ ಮಟ್ಟದಲ್ಲಿ ನಡೆದ ಕ್ರೀಡೆಗಳಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಜಿಲ್ಲಾ ಮಟ್ಟದಲ್ಲಿ ನಡೆದ ಕ್ರೀಡೆಗಳಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ವಿಭಾಗ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಕ್ರೀಡಾಕೂಟದಲ್ಲಿ ರಕ್ಷಣಾಪಡೆ, ಅರೆರಕ್ಷಣಾಪಡೆ ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅವಕಾಶವಿರುವುದಿಲ್ಲ.
ಒಬ್ಬ ಕ್ರೀಡಾಪಟು ಅಥವಾ ತಂಡ ಯಾವುದೇ ಜಿಲ್ಲೆಯಲ್ಲಿ ಒಂದು ಬಾರಿ ತಾಲ್ಲೂಕು ಅಥವಾ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ನಂತರ ಬೇರೆ ಯಾವುದೇ ಜಿಲ್ಲೆಯ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ. ಅಂತಹ ಪ್ರಕರಣವೇನಾದರೂ ದಾಖಲಾದಲ್ಲಿ ಅಥವಾ ಗಮನಕ್ಕೆ ಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು.

ಒಬ್ಬ ಕ್ರೀಡಾಪಟು 3 ಸ್ಪರ್ಧೆಯಲ್ಲಿ ಮಾತ್ರ (ರಿಲೇ ಸಹಿತ) ಭಾಗವಹಿಸಲು ಅವಕಾಶವಿರುತ್ತದೆ. (ಒಂದು ಟ್ರಾಕ್ ಅಥವಾ 2 ಫೀಲ್ಡ್ / ಒಂದು ಫೀಲ್ಡ್ ಅಥವಾ 2 ಟ್ರಾಕ್ ಈವೆಂಟ್‌ಗಳಲ್ಲಿ ಭಾಗವಹಿಸಲು ಮಾತ್ರ ಅವಕಾಶವಿರುತ್ತದೆ)

ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ. ಅದಕ್ಕೆ ಕ್ರೀಡಾಪಟುಗಳು ಬದ್ಧರಾಗಿರುವುದು. ತೀರ್ಪುಗಾರರ ತೀರ್ಮಾನದ ವಿರುದ್ಧ ಯಾವುದೇ ಕ್ರೀಡಾಪಟುಗಳು ಅಶಿಸ್ತಿನಿಂದ ವರ್ತಿಸಿದಲ್ಲಿ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು.

ಕ್ರೀಡಾಕೂಟದ ಸಮಯದಲ್ಲಿ ಕ್ರೀಡಾಪಟುಗಳು ಶಿಸ್ತಿನಿಂದ ವರ್ತಿಸುವುದು. ಯಾವುದೇ ಕ್ರೀಡಾಪಟು ಅಶಿಸ್ತಿನಿಂದ ಅಥವಾ ಯಾವುದೇ ಅಹಿತಕರ ಘಟನೆಯಲ್ಲಿ ಭಾಗಿಯಾದಲ್ಲಿ ಅಂತಹವರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು.

ಭಾಗವಹಿಸುವ ಕ್ರೀಡಾಪಟುಗಳು ಕಡ್ಡಾಯವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯವರೇ ಆಗಿರಬೇಕು, ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸಂದರ್ಭದಲ್ಲಿ ಸ್ಥಳೀಯ ತಾಲ್ಲೂಕಿನ ಆಧಾರ್‌ಕಾರ್ಡ್ ಅನ್ನು ಹಾಜರು ಪಡಿಸಬೇಕು ಹಾಗೂ ವಿದ್ಯಾರ್ಥಿಯಾಗಿದ್ದಲ್ಲಿ ಶಾಲಾ/ ಕಾಲೇಜು ಗುರುತಿನ ಚೀಟಿಯನ್ನು ಹಾಜರು ಪಡಿಸಬೇಕು.
ಹೆಚ್ಚಿನ ಮಾಹಿತಿಗಾಗಿ 080-29787443 / 9980590960 ಸಂಪರ್ಕಿಸಬಹುದು ಎಂದು
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.