ಮೋದಿ ಸರ್ಕಾರದ ನೀತಿಗಳಿಂದ ಯುವಕರು ಮತ್ತು ಮಹಿಳೆಯರಿಗೆ ಹೆಚ್ಚು ಲಾಭವಾಗುವಂತೆ PHDCCI ಗಮನಹರಿಸಬೇಕು: ಅಮಿತ್ ಶಾ

ವಿಜಯ ದರ್ಪಣ ನ್ಯೂಸ್,

ದೆಹಲಿ ಸೆಪ್ಟೆಂಬರ್ 29:

ನವದೆಹಲಿಯ ವಿಜ್ಞಾನ ಭವನದಲ್ಲಿ ಶುಕ್ರವಾರ ನಡೆದ ಪಿಹೆಚ್‌ಡಿ (ಪ್ರೊಗ್ರೆಸ್,ಹಾರ್ಮನಿ,ಡೆವಲಪಮೆಂಟ್) ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಯ 118 ನೇ ವಾರ್ಷಿಕ ಅಧಿವೇಶನದಲ್ಲಿ ಭಾಗವಹಿಸಿ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ತಮ್ಮ ಭಾಷಣದಲ್ಲಿ ದೇಶದ 75 ವರ್ಷಗಳ ಪ್ರಜಾಪ್ರಭುತ್ವದ ಪಯಣ ಮತ್ತು ಕಳೆದ 9 ವರ್ಷದ ಸಾಧನೆಗಳನ್ನು ಮೆಲುಕು ಹಾಕಿದರು. ಈ ಭಾಷಣದಲ್ಲಿ, ಪಿಎಚ್‌ಡಿ ವಾಣಿಜ್ಯ ಮತ್ತು ಉದ್ಯಮ ಮಂಡಳಿ, ಯುವಕರು ಮತ್ತು ಮಹಿಳೆಯರಿಗೆ ಮೋದಿ ಸರ್ಕಾರದ ನೀತಿಗಳ ಪ್ರಯೋಜನಗಳನ್ನು ಹೆಚ್ಚು ತಲುಪಿಸುವ ಕೆಲಸ ಮಾಡಬೇಕು ಎಂದು ಶಾ ಹೇಳಿದರು.

ಪ್ರಧಾನಿ ಮೋದಿಯವರ ದೂರದೃಷ್ಟಿ ಮತ್ತು ಕಳೆದ 9 ವರ್ಷಗಳಲ್ಲಿ ಕೈಗೊಂಡ ನೀತಿ ನಿರ್ಧಾರಗಳು ದೇಶವನ್ನು ಪ್ರತಿಯೊಂದು ಕ್ಷೇತ್ರದಲ್ಲಿಯು ಪರಿವರ್ತನೆ ತಂದಿದೆ ಎಂದು ಅಮಿತ್ ಶಾ ಶ್ಲಾಘಿಸಿದರು. ‘ರೈಸಿಂಗ್ ಇಂಡಿಯಾ: ಇದು ಸಮಯ, ಇದು ಸರಿಯಾದ ಸಮಯ’ ಎಂಬ ವಿಷಯದ ಮೇಲೆ ಬೆಳಕು ಚೆಲ್ಲುತ್ತಾ ಜಿ 20, ಚಂದ್ರಯಾನ -3 ಮಿಷನ್, ಆದಿತ್ಯ ಎಲ್ -1 ಮಿಷನ್ ಮತ್ತು ಮಹಿಳಾ ಮೀಸಲಾತಿ ಮಸೂದೆಯ ಅಂಗೀಕಾರದಂತಹ ವಿಷಯಗಳನ್ನು ಪ್ರಸ್ತಾಪಿಸಿ ಇವು ದೇಶವನ್ನು ಹೊಸ ಶಕ್ತಿಯಿಂದ ತುಂಬಿವೆ ಎಂದರು. ಭಾರತದಲ್ಲಿ ಪ್ರಜಾಪ್ರಭುತ್ವ ಈಗ ಭದ್ರವಾಗಿ ಬೇರೂರಿದೆ ಎಂದು ಪ್ರತಿಪಾದಿಸಿದರು.

ಈ ಯಶಸ್ಸಿನ ಸಂಕಲ್ಪದ ಪಯಣದಲ್ಲಿ, ದೇಶವು ತನ್ನ ಸ್ವಾತಂತ್ರ್ಯದ ಶತಮಾನೋತ್ಸವವನ್ನು ಆಚರಿಸುವಾಗ ಭಾರತವು ಎಲ್ಲ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಲಿದೆ ಎಂಬುದು ಶಾರವರ ಬಲವಾದ ನಂಬಿಕೆ. ಕಾರಣ ಭಾರತ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ, ಅತಿ ಹೆಚ್ಚು ಯುವ ಜನಸಂಖ್ಯೆ, , ಹೆಚ್ಚು ವೈದ್ಯರು, ಎಂಜಿನಿಯರ್‌ಗಳು ಮತ್ತು ತಂತ್ರಜ್ಞರನ್ನು ಹೊಂದಲಿದೆ. ಭಾರತವು 2014 ರಲ್ಲಿ ವಿಶ್ವದ 11 ನೇ ಅತಿದೊಡ್ಡ ಆರ್ಥಿಕತೆಯಿಂದ 2023 ರಲ್ಲಿ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಪ್ರಗತಿ ಸಾಧಿಸಿದೆ ಮತ್ತು 2027 ರ ವೇಳೆಗೆ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಹಾದಿಯಲ್ಲಿದೆ ಎಂದು ಅವರು ತಿಳಿಸಿದರು.

2013-14 ರಲ್ಲಿ, ಭಾರತವು 4 ಯುನಿಕಾರ್ನ್ ಸ್ಟಾರ್ಟ್‌ಅಪ್‌ಗಳು ಮತ್ತು 350 ಸ್ಟಾರ್ಟ್‌ಅಪ್‌ಗಳನ್ನು ಹೊಂದಿತ್ತು, ಆದರೆ ಇಂದು ಭಾರತ 115 ಯುನಿಕಾರ್ನ್‌ಗಳು ಮತ್ತು 1,00,000 ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳನ್ನು ಹೊಂದಿರುವ ಪ್ರಮುಖ ರಾಷ್ಟ್ರಗಳಲ್ಲಿ ಒಂದಾಗಿದೆ. ಒಂದು ಕಾಲದಲ್ಲಿ ಅಪಹಾಸ್ಯಕ್ಕೀಡಾಗಿದ್ದ ‘ಮೇಕ್ ಇನ್ ಇಂಡಿಯಾ’ ಕಾರ್ಯಕ್ರಮ ಈಗ ದೇಶದಲ್ಲಿ ನಿರ್ಮಾಣ ಕ್ಷೇತ್ರದಲ್ಲಿ ದಾಖಲೆಗಳನ್ನು ನಿರ್ಮಿಸುತ್ತಿದೆ. ಪಿಎಲ್ಐ ಯೋಜನೆಯು 14 ಕ್ಷೇತ್ರಗಳಲ್ಲಿ ‘ಮೇಕ್ ಇನ್ ಇಂಡಿಯಾ’ ಕನಸನ್ನು ನನಸಾಗಿಸಿದೆ. ಇಂದು ಭಾರತವು ವಿಶ್ವದಲ್ಲಿ ಅತಿ ಹೆಚ್ಚು ಚಟುವಟಿಕಾ ಕೇಂದ್ರವಾಗಿ ಗುರುತಿಸಿಕೊಂಡಿದೆ.

ಕಳೆದ 9 ವರ್ಷಗಳಲ್ಲಿ, ರಾಜಕೀಯ ಸ್ಥಿರತೆ ಮತ್ತು ನೀತಿ ನಿರ್ಧಾರಗಳ ಅಡಿಯಲ್ಲಿ, ದೇಶವು ಹಲವಾರು ಅಭೂತಪೂರ್ವ ಬದಲಾವಣೆಗಳು ಮತ್ತು ಪ್ರಗತಿಯನ್ನು ಕಂಡಿದೆ. ಕಳೆದ 9 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಸಮರ್ಥ ನಿರ್ವಹಣೆ ದೇಶದ ಪ್ರಗತಿಗೆ ಹೊಸ ವೇಗವನ್ನು ನೀಡಿದೆ. ಭಾರತೀಯ ಕೈಗಾರಿಕೆಗಳು ತಮ್ಮ ಗಾತ್ರ ಮತ್ತು ಪ್ರಮಾಣವನ್ನು ಹೆಚ್ಚಿಸಿಕೊಂಡು ಮುನ್ನಡೆಯಲು ಇದು ಸರಿಯಾದ ಸಮಯವಾಗಿದೆ.