ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 68 ನೇ ಕನ್ನಡ ರಾಜ್ಯೋತ್ಸವ ಸಂಭ್ರಮ

ವಿಜಯ ದರ್ಪಣ ನ್ಯೂಸ್

68 ನೇ ಕನ್ನಡ ರಾಜ್ಯೋತ್ಸವ: “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ

ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 01 : ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನ, ಜಿಲ್ಲಾ ಪಂಚಾಯಿತಿ ವತಿಯಿಂದ ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ “68ನೇ ಕನ್ನಡ ರಾಜ್ಯೋತ್ಸವ” ಕಾರ್ಯಕ್ರಮದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ “ತ್ರಿವರ್ಣ ಧ್ವಜ”ಕ್ಕೆ ಗೌರವ ವಂದನೆ ಸಲ್ಲಿಸಿದರು.


ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ.

,ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಅಮರೇಶ್ .ಹೆಚ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೃಷ್ಣಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

&&&&&&&&&&&&&-&&&&&&&&&&&-

ಜಿಲ್ಲಾಡಳಿತ ಭವನದಲ್ಲಿ‌ 68ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ: ಜಿಲ್ಲಾಧಿಕಾರಿಯವರಿಂದ ಧ್ವಜಾರೋಹಣ.

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್01 : “68 ನೇ ಕನ್ನಡ ರಾಜ್ಯೋತ್ಸವ”ದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿಂದು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಕನ್ನಡಾಂಬೆ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, ತ್ರಿವರ್ಣ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು.


ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ‌.ಕೆ.ಎನ್.ಅನುರಾಧ, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಟಿ.ಕೆ.ರಮೇಶ್ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

#####₹#₹₹######₹₹₹₹₹₹₹₹₹₹#₹₹₹₹₹₹₹₹₹₹₹₹₹₹₹₹₹₹₹₹₹₹

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಸ್ತಬ್ಧ ಚಿತ್ರಕ್ಕೆ ಜಿಲ್ಲಾಧಿಕಾರಿಯವರಿಂದ ಚಾಲನೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 01:   “68ನೇ ಕನ್ನಡ ರಾಜ್ಯೋತ್ಸವ”ದ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳನ್ನು ಸಾರ್ವಜನಿಕರಿಗೆ ತಿಳಿಸುವ ಸ್ತಬ್ಧಚಿತ್ರದ ವಾಹನಕ್ಕೆ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್‌ ಹಾಗೂ ಡಾ.ಅನುರಾಧ ಕೆ.ಎನ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಟಿ.ಕೆ.ರಮೇಶ್ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.