ನಾಳೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಗ್ರಾಮಾಂತರ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಕ್ಷೇತ್ರ ವೀಕ್ಷಣೆ 

ವಿಜಯ ದರ್ಪಣ ನ್ಯೂಸ್

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 14 :- ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ ಹೆಚ್ ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ನಾಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬರ ಪರಿಸ್ಥಿತಿಯ ಕ್ಷೇತ್ರ ವೀಕ್ಷಣೆ ನಡೆಯಲಿದೆ.

ದೇವನಹಳ್ಳಿ ತಾಲೂಕಿನಿಂದ ಪ್ರಾರಂಭಿಸಿ ಹೊಸಕೋಟೆ ತಾಲೂಕಿನ ಸೂಲಿಬೆಲೆ ಹೋಬಳಿಯ ಗ್ರಾಮಗಳಲ್ಲಿನ ತಾಖುಗಳ ಪರಿವೀಕ್ಷಣೆ, ಚನ್ನರಾಯಪಟ್ಟಣ ಹೋಬಳಿಯ ಗ್ರಾಮಗಳಲ್ಲಿನ ತಾಖುಗಳ ಪರಿವೀಕ್ಷಣೆ, ಕುಂದಾಣ ಗ್ರಾಮ ನಂತರ ದೊಡ್ಡಬಳ್ಳಾಪುರ ತಾಲೂಕಿಗೆ ಸಚಿವರು ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಲಿದ್ದಾರೆ.

ತದನಂತರ ದೇವನಹಳ್ಳಿ ತಾಲ್ಲೂಕಿನ ಜಿಲ್ಲಾ ಸಂಕೀರ್ಣದಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬರ ಪರಿಸ್ಥಿತಿಯ ನಿರ್ವಹಣೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳ ಡಾ ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.