ಡಿಸೆಂಬರ್ 17ರಂದು ಮೈಸೂರು ಉಪ್ಪಾರ ನೌಕರರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ

ವಿಜಯ ದರ್ಪಣ ನ್ಯೂಸ್ 

ಮೈಸೂರು :ಡಿಸೆಂಬರ್ 17ರಂದು ಭಾನುವಾರ ಕಲಾಮಂದಿರದಲ್ಲಿ ಪ್ರತಿಭಾ ಪುರಸ್ಕಾರ, ಬಡ್ತಿ ಹೊಂದಿದ ನೌಕರರಿಗೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮೈಸೂರು ಜಿಲ್ಲಾ ಉಪ್ಪಾರ ನೌಕರರ ಹಾಗೂ ವೃತ್ತಿಪರ ಸಂಘದ ಗೌರವ ಸಲಹೆಗಾರ ಜಗನ್ನಾಥ್ ಸಾಗರ್ ತಿಳಿಸಿದರು.

ಅವರು ಮೈಸೂರಿನ ಸರಸ್ವತಿಪುರಂನ ಉಪ್ಪಾರ ವಿದ್ಯಾರ್ಥಿ ನಿಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮಕ್ಕಳ ಪ್ರತಿಭೆ ಗುರುತಿಸಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹಾಗೂ ಬಡ್ತಿ ಹೊಂದಿದ ನೌಕರರನ್ನು ಹಾಗೂ ಸಮಾಜ ಸೇವಕರನ್ನು ಗುರುತಿಸಿ ಸನ್ಮಾನ ಸುತ್ತಿದ್ದೇವೆ.

ಈ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಭಗಿರಥ ಪೀಠದ ಡಾಕ್ಟರ್ ಪುರುಷೋತ್ತಮಾನಂದಪುರಿ ಮಹಾ ಸ್ವಾಮೀಜಿ, ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಅಯ್ಯನ ಸರಗೂರು ಮಠದ ಮಹದೇವಸ್ವಾಮೀಜಿ ದಿವ್ಯ ಸಾನಿಧ್ಯವನ್ನು ವಹಿಸಲಿದ್ದಾರೆ.ಮಾಜಿ ಸಚಿವ ಚಾಮರಾಜನಗರದ ಶಾಸಕ ಪುಟ್ಟರಂಗಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಗಿರೀಶ್ ಉಪ್ಪಾರ್ ಭಗಿರಥ ಮಹರ್ಷಿ ಭಾವಚಿತ್ರ ಅನಾವರಣ ಮಾಡಲಿದ್ದಾರೆ. ಮೈಸೂರು ಜಿಲ್ಲಾ ಉಪ್ಪಾರ ನೌಕರರ ಹಾಗೂ ವೃತ್ತಿಪರ ಸಂಘದ ಅಧ್ಯಕ್ಷ ಶಿವರಾಜ್ ಅಧ್ಯಕ್ಷತೆ ವಹಿಸಿದ್ದಾರೆ.ಪೊಲೀಸ್ ಇಲಾಖೆಯ ಮೈಸೂರು ಗ್ರಾಮೀಣ ವೃತ್ತದ ವೃತನಿರೀಕ್ಷಕ ಹಾಗೂ ಅಂತರಾಷ್ಟ್ರೀಯ ಕ್ರೀಡಾಪಟು ಶಿವನಂಜ ಶೆಟ್ಟಿ ರವರಿಗೆ ಭಗೀರಥ ವಿಶಿಷ್ಟ ಕ್ರೀಡಾ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.

ರಾಷ್ಟ್ರ ಮಟ್ಟದ ಸ್ನಾತಕೋತರ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ 373ನೇ ರಾಂಕ್ ಪಡೆದ ಡಾಕ್ಟರ್ ರಕ್ಷಿತ ಪಟೇಲ್ ರವರಿಗೆ ಭಗೀರಥ ವೈದ್ಯಶ್ರೀ ರತ್ನ ಪ್ರಶಸ್ತಿ ನೀಡಲಾಗುವುದು. 15 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಭಗಿರಥ ವಿದ್ಯಶ್ರೀ ಪ್ರಶಸ್ತಿ ನೀಡಲಾಗುವುದು ತಿಳಿಸಿದರು.

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಉಪ್ಪಾರ ನೌಕರ ಹಾಗೂ ವೃತ್ತಿಪರ ಸಂಘದ ಅಧ್ಯಕ್ಷ ಟಿ.ಆರ್.ಶಿವರಾಜ್, ಗೌರವಾಧ್ಯಕ್ಷ ಜವರಶೆಟ್ಟಿ, ಉಪಾಧ್ಯಕ್ಷರಾದ ಸೋಮಣ್ಣ, ಗೋವಿಂದರಾಜ್, ಮಹಾದೇವ್ , ಪ್ರಧಾನ ಕಾರ್ಯದರ್ಶಿ ಲಿಂಗಣ್ಣ, ಹಾಜರಿದ್ದರು.

@@@@@@@@@@@@@@@@@@@@@