--Ads--

ತಡಿಯಂಡಮೋಳು ಬೆಟ್ಟಕ್ಕೆ ಪ್ರವಾಸಕ್ಕೆ ಬಂದ ಯುವಕ ಹೃದಯಘಾತದಿಂದ ನಿಧನ.

On: December 24, 2023 5:55 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್

ಮಡಿಕೇರಿ:ನಾಪೋಕ್ಲು ಬಳಿಯ ಕಕ್ಕಬ್ಬೆ ತಡಿಯಂಡಮೋಳು ಬೆಟ್ಟಕ್ಕೆ ಚಾರಣಕೆಂದು ತೆರಳಿದ ಯುವಕ ಹೃದಯಘಾತದಿಂದ ನಿಧನ ಹೊಂದಿದ ಘಟನೆ ಭಾನುವಾರ ನಡೆದಿದೆ.

ಹರಿಯಾಣ ಮೂಲದ ಜತಿನ್ ಕುಮಾರ್ (25) ಮೃತ ದುರ್ದೈವಿ.

ಬೆಂಗಳೂರಿನ ಜೆಪಿ ನಗರದ ಕಂಪನಿ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜತಿನ್ ಕುಮಾರ್ ತನ್ನ 5 ಜನ ಸಹಯೋದ್ಯೋಗಿಗಳೊಂದಿಗೆ ಭಾನುವಾರ ಬೆಳಗ್ಗೆ ತಡಿಯಂಡಮೋಳು ಬೆಟ್ಟ ವೀಕ್ಷಣೆಗೆ ತೆರಳಿದ್ದರು.

ಬೆಟ್ಟದ ಮೇಲೆ ತಲುಪಿದಾಗ ತೀವ್ರತರದ ಎದೆನೋವು ಕಾಣಿಸಿಕೊಂಡ ಬಳಿಕ ಜತಿನ್ ಕುಮಾರ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ಅರಣ್ಯ ಇಲಾಖೆಯ ಅಧಿಕಾರಿ ಸುರೇಶ್ ಹಾಗೂ ಸಿಬ್ಬಂದಿಗಳು ತೆರಳಿ ಕಾಡು ಮುಳ್ಳುಗಳಿಂದ ಕೂಡಿದ್ದ ಕಚ್ಚಾರಸ್ತೆಯಲ್ಲಿ ಹರಸಾಹಸಪಟ್ಟು ಬೆಟ್ಟದ ಮೇಲಿಂದ ಮೃತ ದೇಹವನ್ನು ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.

ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಮೃತ ದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಮೃತಯುವಕನ ಕುಟುಂಬಸ್ಥರು ಬಂದ ಬಳಿಕ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ. 

WhatsApp

Join Now

Telegram

Join Now

Instagram

Join Now