ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಿಂದ ಬೆಂಗಳೂರು ಮಹಾನಗರಕ್ಕೆ ತಲುಪುಲು ವಾಯುವಜ್ರ ಸಾರಿಗೆ ವಿಭಾಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ವಿಜಯ ದರ್ಪಣ ನ್ಯೂಸ್

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಿಂದ ಬೆಂಗಳೂರು ಮಹಾನಗರಕ್ಕೆ ತಲುಪುಲು ವಾಯುವಜ್ರ ಸಾರಿಗೆ ವಿಭಾಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

 

ಬಸ್‌ಗಳ ಚಾಲನೆಗೆ ಹಸಿರು ನಿಶಾನೆ ತೋರಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿಸೆಂಬರ್ 29:ಸಾರಿಗೆ ಇಲಾಖೆಯ ವತಿಯಿಂದ ಸಾರ್ವಜನಿಕರ ಪ್ರಯಾಣಕ್ಕಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಕೆ.ಎಸ್.ಆರ್.ಟಿ.ಸಿ ಮತ್ತು ಬಿ.ಎಂ.ಟಿ.ಸಿ ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಿ, ಬಸ್ ಗಳಿಗೆ ಹಸಿರು ನಿಶಾನೆ ತೋರಿದರು.

 

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಎಲ್ಲಾ ಸೌಲಭ್ಯಗಳನ್ನು ಹೊಂದಿದ್ದು ಇದು ಎಲ್ಲಾ ವಿಮಾನ ನಿಲ್ದಾಣ ಗಳಿಗಿಂತ ವಿಭಿನ್ನವಾಗಿದೆ ಮತ್ತು ಅತಿ ದೊಡ್ದ ವಿಮಾನ ನಿಲ್ದಾಣ ವಾಗಿದೆ.

ವಿಮಾನ ನಿಲ್ದಾಣದಿಂದ ಬೆಂಗಳೂರು ನಗರಕ್ಕೆ ಸಂಚಾರ ಮಾಡಲು BMTC ಮತ್ತು ವಾಯುವಜ್ರದ ಎಲೆಕ್ಟ್ರಿಕ್ ಬಸ್ ಗಳ ಸೇವೆಯನ್ನು ಕಲ್ಪಿಸಿದ್ದು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬಸ್ ಗಳನ್ನು ನೀಡಲು ಸಚಿವರು ಒಪ್ಪಿಗೆ ಯನ್ನು ನೀಡಿದರು.

ದೇವನಹಳ್ಳಿ ತಾಲ್ಲೂಕಿನ ತೂಬಗೆರೆ ಪಂಚಾಯತಿಗೆ ಬಸ್ ಗಳು ಅನಾನುಕೂಲ ಇರುವುದರಿಂದ ಅಲ್ಲಿಗೆ ಸಂಪರ್ಕ ಕಲ್ಪಿಸಲು ಸಾರಿಗೆ ಸಚಿವರಿಗೆ ಮನವಿಯನ್ನು ನೀಡಲಾಯಿತು.

ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್ಎಸ್ ಘಾಟಿ ಸುಬ್ರಮಣ್ಯ ದೇವಸ್ಥಾನ ಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಭಕ್ತಾದಿಗಳು ಬರುವುದರಿಂದ ಬಸ್ ವ್ಯವಸ್ಥೆಗಳು ಹಾಗೂ ಅನ್ನ ದಾಸೋಹ ಭವನವನ್ನು ನಿರ್ಮಾಣ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವರಿಗೆ ಮನವಿಯನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ, ಮುಖ್ಯ ಕಾರ್ಯನಿರ್ವಾಹಕ ಸತ್ಯಕಿರಘುನಾಥ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ್.ಎನ್
ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿ, ಹಾಗೂ ಸಾರಿಗೆ ಇಲಾಖೆ ಸಿಬ್ಬಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.