75ನೇ ಗಣರಾಜ್ಯೋತ್ಸವದ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಶಿವಶಂಕರ ಸೂಚನೆ

ವಿಜಯ ದರ್ಪಣ ನ್ಯೂಸ್.
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ 03 :- 2024 ರ ಜನವರಿ 26 ರಂದು 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಅವರು ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “75ನೇ ಗಣರಾಜ್ಯೋತ್ಸವದ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

75ನೇ ಗಣರಾಜ್ಯೋತ್ಸವದ ದಿನಾಚರಣೆ ಅಂಗವಾಗಿ ಜನವರಿ 26 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಬೀರಸಂದ್ರ ಗ್ರಾಮದಲ್ಲಿರುವ ಜಿಲ್ಲಾಡಳಿತ ಭವನದಲ್ಲಿ ಬೆಳಗ್ಗೆ 07.30 ಗಂಟೆಗೆ ಧ್ವಜಾರೋಹಣ ನಡೆಸಲಾಗುವುದು. ನಂತರ ದೇವನಹಳ್ಳಿಯ ಕ್ರೀಡಾಂಗಣದಲ್ಲಿ ಬೆಳಗ್ಗೆ 9.00 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದು, ನಂತರ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಗಣರಾಜ್ಯೋತ್ಸವದ ದಿನದಂದು ಜಿಲ್ಲಾ, ತಾಲ್ಲೂಕು ಕಛೇರಿಗಳನ್ನು ದೀಪಾಲಂಕಾರದಿಂದ ಅಲಂಕೃತ ಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಶಿಷ್ಟಾಚಾರದಂತೆ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಆಹ್ವಾನ ಪತ್ರಿಕೆಗಳ ಮುದ್ರಣ, ಕಾರ್ಯಕ್ರಮದ ವೇದಿಕೆ ನಿರ್ಮಾಣ ವ್ಯವಸ್ಥೆ, ವೇದಿಕೆಗೆ ಅಗತ್ಯವಾದ ಅಲಂಕಾರಿಕ ಹೂ ಗಿಡಗಳ ವ್ಯವಸ್ಥೆ, ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ಸಾಧಕರಿಗೆ ಪ್ರಶಸ್ತಿ, ಪಥಸಂಚಲನ, ಉಪಾಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ಧತೆ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ, ಕೋವಿಡ್ -19 ಮಾರ್ಗಸೂಚಿಗಳನ್ನು ಪಾಲಿಸಿ ಗಣರಾಜ್ಯೋತ್ಸವ ಆಚರಣೆಯನ್ನು ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರೀನಾ, ಡಿವೈಎಸ್ಪಿ ರವಿ, ದೇವನಹಳ್ಳಿ ತಾಲ್ಲೂಕು ತಹಸೀಲ್ದಾರ್ ಶಿವರಾಜ್, ಹೊಸಕೋಟೆ ತಾಲ್ಲೂಕು ತಹಸೀಲ್ದಾರ್ ವಿಜಯ್ ಕುಮಾರ್, ದೊಡ್ಡಬಳ್ಳಾಪುರ ತಾಲ್ಲೂಕು ತಹಸೀಲ್ದಾರ್ ವಿದ್ಯಾ ವಿಭಾ ರಾಥೋಡ್, ನೆಲಮಂಗಲ ತಾಲ್ಲೂಕು ತಹಸೀಲ್ದಾರ್ ಅಮೃತ್ ಆತ್ರೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

&&&&&&&&&&&&&&&&&&&&&&&&

ನೀ ಬರೆದ ಕವಿತೆ.

ಹೃದಯದ ಮೇಲೆ ಬರೆದ ಪ್ರೀತಿ ಕವಿತೆ
ಮನದಲ್ಲಿ ಅರಳಿದ ಸ್ವರ್ಗದ ಕವಿತೆ

ನಿನ್ನ ಕಣ್ಣ ನೋಟದಲ್ಲಿ
ಕವಿತೆ ಒಂದು ಬರೆದೆನು….
ಬರೆದ ಕವಿತೆ ಓದಿ ಓದಿ
ಕಾಳಿದಾಸನಾದೆನು….

ಶಾಕುಂತಲೆ ನೀನಾಗಿ
ದಶರಥನ ಮರತೋದೆ
ಉಂಗುರವ ಕೈಗಿಟ್ಟು
ಶಾಕುಂತಲೆ ಮರೆತೋದೆ

ಕಾಳಿದಾಸ ಬರೆದ ಕವಿತೆ
ಮೋಹವಾಯ್ತು ನಿನ್ನ ಚಿಂತೆ
ಪ್ರೀತಿ ಎಂಬ ಹೂವು ಅರಳಿ
ಅರಳಲಿಲ್ಲ ಎದೆಯೊಳಗಿನ ಕವಿತೆ

ಜಿ ಟಿ ಆರ್ ದುರ್ಗ. ಜಿ ಹೆಚ್ ಎಲ್
ಬಂಗಾರಪೇಟೆ