ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಗುರುತಿನ ಕಾರ್ಡ್ ಪಡೆದುಕೊಳ್ಳಲು ಜಿಲ್ಲಾಧಿಕಾರಿ ಕರೆ

ವಿಜಯ ದರ್ಪಣ ನ್ಯೂಸ್

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ 11 : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಕರ್ನಾಟಕ ರಾಜ್ಯದ ಪರಿಷ್ಕೃತ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ (AB- PMJAY-CMARK) ಗುರುತಿನ ಚೀಟಿಗಳನ್ನು ವಿತರಿಸಲಾಗುತ್ತಿದೆ.

 

ಈ ಯೋಜನೆಯಲ್ಲಿ ಬಿ.ಪಿ.ಎಲ್ ಫಲಾನುಭವಿಗಳ ಕುಟುಂಬಕ್ಕೆ ಒಂದು ವರ್ಷಕ್ಕೆ ಗರಿಷ್ಠ ರೂ.05 ಲಕ್ಷಗಳವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯವಿರುತ್ತದೆ. ಹಾಗೂ ಎ.ಪಿ.ಎಲ್ ಫಲಾನುಭವಿಗಳ ಕುಟುಂಬಕ್ಕೆ ಪಾವತಿ ಆಧಾರದ ಮೇಲೆ 30% ರಷ್ಟು ಚಿಕಿತ್ಸಾ ವೆಚ್ಚ ಸರ್ಕಾರದಿಂದ ಪಾವತಿ-ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ಗರಿಷ್ಠ ರೂ.1.50 ಲಕ್ಷಗಳವರೆಗೆ ಪ್ರಯೋಜನ ಪಡೆಯಬಹುದಾಗಿರುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಯ ಒಟ್ಟು 101 ಗ್ರಾಮ ಪಂಚಾಯತಿಗಳಲ್ಲಿ ಮತ್ತು ವಿವಿಧ ಇಲಾಖೆಗಳಾದ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಸಮಾಜಕಲ್ಯಾಣ ಇಲಾಖೆ, ನಗರ ಸಭೆ/ಪುರಸಭೆ/ಪಟ್ಟಣ ಸಭೆ ಇಲಾಖೆ, ಕಾರ್ಮಿಕ ಕಲ್ಯಾಣ ಇಲಾಖೆ, ಅಂಗವಿಕಲರ ಇಲಾಖೆ, ಆಹಾರ ಮತ್ತು ಸರಬರಾಜು ಇಲಾಖೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖಾ ವ್ಯಾಪ್ತಿಯ ಎಲ್ಲಾ ಎ.ಪಿ.ಎಲ್,ಬಿ.ಪಿ.ಎಲ್ ಫಲಾನುಭವಿಗಳು AB- PMJAY-CMARK ಕಾರ್ಡ್‌ ನ್ನು ಪಡೆಯಲು ತಮ್ಮ ಆಧಾರ್‌ಕಾರ್ಡ್, ರೇಷನ್‌ ಕಾರ್ಡ್ (ಪಡಿತರಚೀಟಿ), ಆಧಾರ್ ನೊಂದಾಯಿತ ಮೊಬೈಲ್‌ನೊಂದಿಗೆ ಆಂಡ್ರಾಯ್ಡ್ ಮೋಬೈಲ್ಸ್ ನ ಪ್ಲೇಸ್ಟೋರ್ ಅಥವಾ ಗೂಗಲ್ ನಲ್ಲಿ Ayushman App/BIS 2.0 ಲ್ಲಿ ಸ್ವ- ನೋಂದಣಿ ಮಾಡಿಕೊಂಡು ಕಾರ್ಡ್ ಡೌನ್ಲೋಡ್ ಮಾಡಿಕೊಳ್ಳಬಹುದು.

ಗ್ರಾಮಒನ್ ಕೇಂದ್ರದಲ್ಲಿ ಸಹ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ-ಮುಖ್ಯ ಮಂತ್ರಿ ಆರೋಗ್ಯ ಕರ್ನಾಟಕ (AB-PMAY- CMARK) ಕಾರ್ಡುಗಳನ್ನು ಪಡೆದುಕೊಳ್ಳಬಹುದು. ಈ ಮೂಲಕ ಫಲಾನುಭವಿಗಳು ಆರೋಗ್ಯ ಯೋಜನೆಯ ಸೌಲಭ್ಯಗಳನ್ನು ಪಡೆಯಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.