--Ads--

ಸಂವಿಧಾನ ಜಾಗೃತಿ ಜಾಥಗೆ ಅಗತ್ಯ ಸಿದ್ಧತೆ ಕೈಗೊಳ್ಳಿ:ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

On: January 25, 2024 5:34 AM
Follow ಮಾಡಿ
--Ads--

Whatsapp Channel

Join Now

Telegram Group

Join Now

 ವಿಜಯ ದರ್ಪಣ ನ್ಯೂಸ್

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ  :- ಸಂವಿಧಾನ ಅಂಗೀಕಾರಗೊಂಡು 75 ವರ್ಷ ಪೂರೈಸುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥ ಹಮ್ಮಿಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ ಯಶಸ್ವಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು  ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.


ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದಲ್ಲಿ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮದ ಅನುಷ್ಠಾನ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

75ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಸಂವಿಧಾನದ ಆಶಯಗಳನ್ನು ಎಲ್ಲರಿಗೂ ತಲುಪಿಸುವ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥ ಹಮ್ಮಿಕೊಳ್ಳಲಾಗಿದೆ. ಸಂವಿಧಾನ ಜಾಗೃತಿ ಜಾಥದ ಸ್ಥಬ್ಧ ಚಿತ್ರ ವು ಜನವರಿ 26 ರಿಂದ ಫೆಬ್ರವರಿ 23 ರವರೆಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದೆ.
ಜಾಗೃತಿ ಜಾಥದ ಸ್ಥಬ್ಧ ಚಿತ್ರ ಮೆರವಣಿಗೆಯು ಸುಗಮವಾಗಿ ಸಂಚರಿಸಲು ಜಿಲ್ಲಾಮಟ್ಟದ, ತಾಲೂಕು ಮಟ್ಟದಲ್ಲಿ ಪ್ರಗತಿ ಚಿಂತಕರು, ಸಮುದಾಯ ಮುಖಂಡರು, ಸಾಮಾಜಿಕ ಕಾರ್ಯಕರ್ತರನ್ನೊಳಗೊಂಡ ಸಮಿತಿ ರಚಿಸಬೇಕು,

ಸಂವಿಧಾನ ಆಶಯಗಳನ್ನು ಒಳಗೊಂಡ ಸ್ಥಬ್ಧಚಿತ್ರ ಸಿದ್ದಪಡಿಸಬೇಕು. ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಸಂವಿಧಾನ ಜಾಗೃತಿ ಜಾಥ ನಡೆಯಬೇಕು. ಜಾಗೃತಿ ಜಾಥ ಸಂಚರಿಸಲಿರುವ ಆಯಾ ವ್ಯಾಪ್ತಿಯಲ್ಲಿ ಪಂಚಾಯಿತಿ ಅಧ್ಯಕ್ಷರು, ಮುಖಂಡರು, ಅಧಿಕಾರಿಗಳು ಶಿಷ್ಟಾಚಾರದಂತೆ ಸಂವಿಧಾನ ಜಾಗೃತಿ ಜಾಥವನ್ನು ಸ್ವಾಗತಿಸಬೇಕು, ಹೀಗಾಗಿ ಸಂಚರಿಸುವ ಮಾರ್ಗ ವಿವರಣೆಯನ್ನು ಮೊದಲೇ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಿರಬೇಕು. ಒಟ್ಟಾರೆಯಾಗಿ ಯಾವುದೇ ಗೊಂದಲಗಳಿಲ್ಲದೇ ಕಾರ್ಯಕ್ರಮ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್, ಉಪಕಾರ್ಯದರ್ಶಿ ಟಿ.ಕೆ ರಮೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಮುದಾಯ ಮುಖಂಡರು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now