ಕಾರ್ಮಿಕರ ಉಚಿತ ವೈದ್ಯಕೀಯ ತಪಾಸಣಾ ವಾಹನಕ್ಕೆ ಚಾಲನೆ ನೀಡಿದ ನ್ಯಾಯಮೂರ್ತಿ ಎಂ.ಎಲ್ ರಘನಾಥ್

ವಿಜಯ ದರ್ಪಣ ನ್ಯೂಸ್

ಕಾರ್ಮಿಕರ ಉಚಿತ ವೈದ್ಯಕೀಯ ತಪಾಸಣಾ ವಾಹನಕ್ಕೆ ಚಾಲನೆ ನೀಡಿದ ನ್ಯಾಯಮೂರ್ತಿ ಎಂ.ಎಲ್ ರಘನಾಥ್

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 5 :-ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮತ್ತು ಕಾರ್ಮಿಕ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಕರ್ನಾಟಕ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರಿಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿಯ ಇ-ಶ್ರಮ್, ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ, ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ, ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯ ಕುರಿತಾದ ಯೋಜನೆಗಳ ಅರಿವು ಮೂಡಿಸುವ ವಾಹನಕ್ಕೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಪ್ರಧಾನ ಜಿಲ್ಲಾ ಕಾನೂನು ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಎಂ ಎಲ್ ರಘನಾಥ್ ಅವರು ಚಾಲನೆ ನೀಡಿದರು.

 

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಸಂದೀಪ್ ಸಾಲಿಯಾನ, ಜಿಲ್ಲಾ ಕಾರ್ಮಿಕ ಅಧಿಕಾರಿ ಹೆಚ್ ಆರ್ ನಾಗೇಂದ್ರ, ವಕೀಲರ ಸಂಘದ ಪದಾಧಿಕಾರಿಗಳು, ಜಿಲ್ಲೆಯ ಕಾರ್ಮಿಕ ನೀರಿಕ್ಷಕರುಗಳು, ಬ್ಲಾಸಂ ಹಾಸ್ಪಿಟಲ್‌ನ ಸಿಬ್ಬಂದಿವರ್ದವರು, ಕಾನೂನು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.