--Ads--

ಮಹಿಳೆ ಮೇಲೆ ದೌರ್ಜನ್ಯ : ಎಸ್.ಐ ಸೇರಿ ಪೊಲೀಸ್ ಪೇದೆಗಳ ಅಮಾನತ್ತಿಗೆ ಆಗ್ರಹಿಸಿ ಪ್ರತಿಭಟನೆ

On: February 14, 2024 8:23 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್

ಮಂಡ್ಯ ಫೆಬ್ರವರಿ 14:- ಮಹಿಳೆ ಮೇಲೆ ದೌರ್ಜನ್ಯ ದೌರ್ಜನ್ಯ ಮಾಡಿರುವ ಪೂರ್ವ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಅಯ್ಯನ್ ಗೌಡ ಸೇರಿದಂತೆ ಠಾಣೆಯ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡುವಂತೆ ಒತ್ತಾಯಿಸಿ ಪ್ರಗತಿಪರ ಮಹಿಳಾ ಸಂಘಟನೆಗಳ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಪೂರ್ವ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಮಹಿಳೆ ಮೇಲೆ ದೌರ್ಜನ್ಯ ನಡೆಸಿರುವ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮಂಡ್ಯದ ಅಶೋಕನಗರದ ಒಂದನೇ ಕ್ರಾಸ್ ನಲ್ಲಿ ತಮ್ಮ ಮನೆ ಮುಂದೆ ಹಸು ಕಟ್ಟಿ ಹಾಕಿದ್ದ ಮಹಿಳೆ ರೂಪ ವಿರುದ್ಧ ಯಾವುದೇ ದೂರು ಇಲ್ಲದಿದ್ದರೂ ಅಮಾಯಕ ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬಲವಂತವಾಗಿ ಜಿಪ್ ಗೆ ಹತ್ತಿಸಿಕೊಂಡು ಠಾಣೆಗೆ ಕರೆತಂದು, ಕೋಣೆಯೊಂದರಲ್ಲಿ ಕೂಡಿ ಹಾಕಿ ಸಬ್ ಇನ್ ಸ್ಪೆಕ್ಟರ್ ಅಯ್ಯನ್ ಗೌಡ ಮತ್ತು ಮಹಿಳಾ ಸಿಬ್ಬಂದಿ ಸೇರಿ ಹಲವು ಪೊಲೀಸರು ಮನಸೋ ಇಚ್ಛೆ ಥಳಿಸಿ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎಂದು ಹೇಳಿದರು.

ಮಹಿಳೆ ಮೇಲೆ ಪೊಲೀಸರು ಗೂಂಡಾ ವರ್ತನೆ ತೋರಿರುವುದು ಸಂವಿಧಾನ ವಿರೋಧಿಯಾಗಿದ್ದು ಮಾನವ ಹಕ್ಕು ಹಾಗೂ ಮಹಿಳೆಯರ ಹಕ್ಕುಗಳನ್ನು ದಮನ ಮಾಡುವ ವರ್ತನೆ ಕಾನೂನು ಬಾಹಿರವಾಗಿದೆ, ರಕ್ಷಣೆ ನೀಡಬೇಕಾದ ಪೊಲೀಸರೇ ಭಕ್ಷಕರಾಗಿದ್ದಾರೆ, ಗೂಂಡಾ ವರ್ತನೆ ಅಕ್ಷಮ್ಯ ಅಪರಾಧವಾಗಿದ್ದು, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ತಲೆತಗ್ಗಿಸುವ ವಿಚಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೆಣ್ಣು ಭ್ರೂಣ ಹತ್ಯೆ,ಸಾಮೂಹಿಕ ಅತ್ಯಾಚಾರ, ಬಾಲ್ಯ ವಿವಾಹ, ಮಹಿಳಾ ವಿರೋಧಿ ವಿಚಾರದಲ್ಲಿ ಸುದ್ದಿ ಆಗುತ್ತಿರುವುದು ನಾಚಿಕೆಗೇಡಿನ ಸಂಗತಿ, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದ ಗೆಟ್ಟಿದೆ ಎಂಬುದಕ್ಕೆ ಅಮಾಯಕ ಮಹಿಳೆಯ ಮೇಲೆ ನಡೆದಿರುವ ಪೊಲೀಸರ ದೌರ್ಜನ್ಯ ಸಾಕ್ಷಿಯಾಗಿದೆ ಎಂದು ಹೇಳಿದರು.

ಮಹಿಳೆ ಮೇಲೆ ದೌರ್ಜನ್ಯ ಮಾಡಿರುವ ಸಬ್ ಇನ್ ಸ್ಪೆಕ್ಟರ್ ಅಯ್ಯನ್ ಗೌಡ ಮತ್ತು ಇತರೆ ಪೊಲೀಸ್ ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಬೇಕು, ಅಯ್ಯನ್ ಗೌಡ ವಿರುದ್ಧ ಹಲವು ಗಂಭೀರ ಆರೋಪಗಳು ಇರುವುದರಿಂದ,ಬೇರೆಡೆಗೆ ವರ್ಗಾವಣೆ ಮಾಡಿದರೂ ಅಮಾಯಕರ ಮೇಲೆ ದೌರ್ಜನ್ಯ ಮುಂದುವರೆಯುತ್ತದೆ ಆ ಹಿನ್ನಲೆಯಲ್ಲಿ ಅಯ್ಯನ್ ಗೌಡನನ್ನು ಸೇವೆಯಿಂದ ವಜಾ ಮಾಡಬೇಕು, ಜಿಲ್ಲೆಯ ಪೊಲೀಸ್ ಠಾಣೆಗಳು ಜನ ಸ್ನೇಹಿಯಾಗಿ ಮಹಿಳೆಯರ ವಿಚಾರದಲ್ಲಿ ಸಂವೇದನಶೀಲಾರಾಗಿ ಕೆಲಸ ನಿರ್ವಹಿಸಬೇಕು, ನೊಂದ ಮಹಿಳೆಗೆ ಸೂಕ್ತ ರಕ್ಷಣೆ ಹಾಗೂ ಪರಿಹಾರ ಒದಗಿಸಬೇಕು, ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣಗಳು ಮರುಕಳಿಸದಂತೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ಜನಶಕ್ತಿಯ ಪೂರ್ಣಿಮಾ.ಜಿ, ಸಿಐಟಿಯುನ ಸಿ.ಕುಮಾರಿ, ಸಿಪಿಐಎಂ ಪಕ್ಷದ ಟಿ.ಎಲ್ ಕೃಷ್ಣೇಗೌಡ, ರೈತ ಸಂಘದ ಲತಾ ಶಂಕರ್, ರಾಷ್ಟ್ರೀಯ ಭಾರತೀಯ ಮಾನವ ಹಕ್ಕುಗಳ ಸಂಘದ ರಾಧಾಮಣಿ ಬಿ.ಪಿ,ಎ.ಬಿ ಶಶಿಕಲಾ,ವಿಮೋಚನ ಮಹಿಳಾ ಸಂಘಟನೆಯ ಜನಾರ್ದನ, ಸಿದ್ದರಾಜು.ಎಂ ನೇತೃತ್ವ ವಹಿಸಿದ್ದರು.

WhatsApp

Join Now

Telegram

Join Now

Instagram

Join Now