ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಕಾರ್ಯಕ್ರಮಗಳ ಅನುಷ್ಠಾನ

ವಿಜಯ ದರ್ಪಣ ನ್ಯೂಸ್

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಕಾರ್ಯಕ್ರಮಗಳ ಅನುಷ್ಠಾನ.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 27  : ತೋಟಗಾರಿಕೆ ಇಲಾಖೆ ವತಿಯಿಂದ 2024-25 ನೇ ಸಾಲಿನ ಸಮಗ್ರ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು,

ಈ ಯೋಜನೆಯಡಿ ಪ್ರದೇಶ ವಿಸ್ತರಣೆ ಕಾರ್ಯಕ್ರಮ ( ದ್ರಾಕ್ಷಿ, ಬಾಳೆ, ದಾಳಿಂಬೆ, ಸೀಬೆ, ಹೈಬ್ರಿಡ್ ತರಕಾರಿ, ಡ್ರ್ಯಾಗನ್ ಫ್ರೂಟ್ ಮತ್ತು ಹೂ ಬೆಳೆ) ರೋಗ ಮತ್ತು ಕೀಟ ನಿಯಂತ್ರಣ, ಪ್ಲಾಸ್ಟಿಕ್ ಹೊದಿಕೆ, ಹಣ್ಣು ಮಾಗಿಸುವ ಘಟಕ (Ripening Chamber), ಹಸಿರುಮನೆ ನಿರ್ಮಾಣ, ವೈಯಕ್ತಿಕ ಕೃಷಿಹೊಂಡ, ಪ್ಯಾಕ್ ಹೌಸ್,

ಹಾಗೂ ಅಣಬೆ ಉತ್ಪಾದನಾ ಘಟಕಗಳಿಗೆ ರಾಷ್ಟ್ರೀಯ ತೋಟಗಾರಿಕಾ ಮಿಷನ್ ಯೋಜನೆಯಡಿಯಲ್ಲಿ ಫಲಾನುಭವಿಗಳು ಸಹಾಯಧನವನ್ನು ಪಡೆಯಬಹುದಾಗಿರುತ್ತದೆ.
ಈ ಕಾರ್ಯಕ್ರಮದಡಿ ಘಟಕಗಳನ್ನು ಮಾರ್ಗಸೂಚಿಯನ್ವಯ ನಿರ್ಮಿಸಿಕೊಂಡು ಸಹಾಯಧನ ಪಡೆಯಲು ಇಚ್ಛಿಸುವ/ ಆಸಕ್ತಿಯುಳ್ಳ ರೈತರು ಅರ್ಜಿ ಸಮೇತ ಅಗತ್ಯವಾದ ದಾಖಲೆಗಳನ್ನು ಸಂಬಂಧಪಟ್ಟ ತಾಲ್ಲೂಕುಗಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯಲ್ಲಿ ಸಲ್ಲಿಸಬೇಕು.


ಸರ್ಕಾರ ನಿಗದಿಪಡಿಸಿದ ಮಾರ್ಗಸೂಚಿ ಹಾಗೂ ಲಭ್ಯವಿರುವ ಅನುದಾನದ ಮೇರೆಗೆ ಜೇಷ್ಠತಾವಾರು ಅರ್ಹ
ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಆದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಈ ಯೋಜನೆಯ ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದೆ.


ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಕೆಳಕಂಡ ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ತಾಂತ್ರಿಕ ಅಧಿಕಾರಿಗಳನ್ನು ಸಂಪರ್ಕಿಸುವುದು. ಮಲ್ಲಿಕಾರ್ಜುನ ಬಾಬು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ದೇವನಹಳ್ಳಿ- ಮೊ. 9480461234. ಎಂ.ಎಸ್.ದೀಪಾ. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ದೊಡ್ಡಬಳ್ಳಾಪುರ. ಮೊ. 9880210892. ರೇಖಾ ಬಿ.ಪಿ. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ಹೊಸಕೋಟೆ- ಮೊ. 8217210320. ಹರೀಶ್. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ನೆಲಮಂಗಲ-ಮೊ. 9880461607 ಗೆ ಸಂಪರ್ಕಿಸಬಹುದು ಎಂದು
ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಜೆ.ಗುಣವಂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

##################################

6ನೇ ತರಗತಿಯ ವಸತಿ ಶಾಲೆಗಳ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಫೆಬ್ರವರಿ 27  : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವನಾಯಕನಹಳ್ಳಿ, ದೇವನಹಳ್ಳಿ, ತಾಲ್ಲೂಕು, (ರಾಜ್ಯ ಪಠ್ಯಕ್ರಮ) ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು ಇಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 15 ಕೊನೆಯ ದಿನಾಂಕವಾಗಿರುತ್ತದೆ.

ವಿದ್ಯಾರ್ಥಿಗಳು https://sevasindhuservices.Karnataka.gov.in/ ಲಿಂಕ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಶಾಲೆಗಳಲ್ಲಿ ಶೇ.75ರಷ್ಟು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ (ಮುಸ್ಲಿಂ, ಕ್ರೈಸ್ತ, ಜೈನ್, ಸಿಖ್, ಪಾರ್ಸಿ, ಮತ್ತು ಬೌದ್ಧ) ಹಾಗೂ ಶೇ25 ರಷ್ಟು ಹಿಂದುಳಿದ ವರ್ಗ, ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳಿಗೆ ಅನುಗುಣವಾಗಿ ಹಾಗೂ ರೋಷ್ಟರ್ ನಿಯಮದಂತೆ ಪ್ರವೇಶ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು, ದೂರವಾಣಿ ಸಂಖ್ಯೆ 7338227541, ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು, ದೂರವಾಣಿ ಸಂಖ್ಯೆ 8660971267. ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ, ಹೊಸಕೋಟೆ, ಮತ್ತು ತಾಲ್ಲೂಕು ಮಾಹಿತಿ ಕೇಂದ್ರ, ವಿಜಯಪುರ, ದೇವನಹಳ್ಳಿ ತಾ ದೂರವಾಣಿ ಸಂಖ್ಯೆ- 080-27682882, 8310397004. 7676905779, 8861926851.

ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು (ಗ್ರಾ) ಜಿಲ್ಲೆ. ನಂ.216, 2ನೇ ಮಹಡಿ, ಜಿಲ್ಲಾಧಿಕಾರಿಗಳ ಹೊಸ ಸಂಕೀರ್ಣ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110. ದೂರವಾಣಿ ಸಂಖ್ಯೆ- 080-29787455 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.