--Ads--

ವಿಕಲಚೇತನರಿಗೆ ದ್ವಿಚಕ್ರ ವಾಹನ ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ಟಾಪ್ ವಿತರಣೆ

On: March 2, 2024 11:32 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್

ವಿಕಲಚೇತನರಿಗೆ ದ್ವಿಚಕ್ರ ವಾಹನ ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ಟಾಪ್ ವಿತರಣೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಫೆಬ್ರವರಿ 02: ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು

ಇಂದು ಜಿಲ್ಲಾಡಳಿತ ಭವನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕಾರ್ಮಿಕ ಕಲ್ಯಾಣ ಇಲಾಖೆ, ಕರ್ನಾಟಕ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ದೇವನಹಳ್ಳಿ ತಾಲ್ಲೂಕಿನ ನೋಂದಾಯಿತ ಕಟ್ಟಡ ಕಾರ್ಮಿಕರ 31 ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ವತಿಯಿಂದ ದೇವನಹಳ್ಳಿ ಕ್ಷೇತ್ರದ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ದೈಹಿಕ ವಿಕಲಚೇತನ ಹೊಂದಿದ ಅರ್ಹ 09 ಫಲಾನುಭವಿಗಳಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿದರು.


ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ರವಿ, ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ, ಅಪರ ಪೋಲಿಸ್ ವರಿಷ್ಠಾಧಿಕಾರಿ ಪುರುಷೋತ್ತಮ್ ಕಾರ್ಮಿಕ ಅಧಿಕಾರಿ ನಾಗೇಂದ್ರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾಧಿಕಾರಿ ಜಗದೀಶ್, ಫಲಾನುಭವಿಗಳು ಉಪಸ್ಥಿತರಿದ್ದರು.

&&&&&&&&&&&&&&&&&&&&&&&&&&&&

ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳು ಕುರಿತು ತರಬೇತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾರ್ಚ್02  : ಬೆಂಗಳೂರು ಗ್ರಾಮಾಂತರ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ವತಿಯಿಂದ ದೇವನಹಳ್ಳಿ ತಾಲ್ಲೂಕಿನ ದುದ್ದನಹಳ್ಳಿ ಗ್ರಾಮಪಂಚಾಯತಿಯಲ್ಲಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳು ಕುರಿತು ಅರಿವು ಕಾರ್ಯಕ್ರಮ ನಡೆಯಿತು.


ಅರಿವು ಕಾರ್ಯಕ್ರಮದಲ್ಲಿ COTPA-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ಗ್ರಾಮಪಂಚಾಯತಿಯ ಅಧ್ಯಕ್ಷರು, ಪಿಡಿಒ ಹಾಗೂ ಗ್ರಾಮಪಂಚಾಯತಿಯ ಸದಸ್ಯರುಗಳಿಗೆ ಅರಿವು ಮೂಡಿಸಲಾಯಿತು.

ಈ ಸಂಧರ್ಭದಲ್ಲಿ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹಗಾರರಾದ ಡಾ.ವಿದ್ಯಾ ರಾಣಿ ಪಿ.ಎಸ್, ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ್, ಆರೋಗ್ಯ ಇಲಾಖೆಯ ಸಿಬ್ಬಂದಿ ನಂದಿನಿ,ಸಮುದಾಯ ಆರೋಗ್ಯಾಧಿಕಾರಿ ಶಿಲ್ಪ ಇದ್ದರು.

WhatsApp

Join Now

Telegram

Join Now

Instagram

Join Now