--Ads--

05 ಬಾಲಕಾರ್ಮಿಕರ ರಕ್ಷಣೆ

On: March 20, 2024 9:04 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್

ಹೊಸಕೋಟೆ:05 ಬಾಲಕಾರ್ಮಿಕರ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾರ್ಚ್ 19 :- ಹೊಸಕೋಟೆ ತಾಲ್ಲೂಕಿನ ದೊಡ್ಡಗಟ್ಟಗನಬ್ಬೇ ಗ್ರಾಮ ಪಂಚಾಯ್ತಿಯ ಜಿನ್ನಾಗರ ಹೊರವಲಯದಲ್ಲಿನ ಪ್ಲಾಸ್ಟಿಕ್ ಸಂಗ್ರಹಣಾ ಕೇಂದ್ರದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ವಿಂಗಡಣೆಯಲ್ಲಿ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವುದಾಗಿ ಬಂದ ದೂರಿನ ಮೇರೆಗೆ ತಪಾಸಣೆಯನ್ನು ಕೈ ಗೊಂಡು 05 ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ.

ಕಾಮಿ೯ಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ , ಶಿಕ್ಷಣ ಇಲಾಖೆ, ಕಾರ್ಖಾನೆ ಮತ್ತು ಬಾಯ್ಲರ್ ಗಳ ಇಲಾಖೆ, ಪೊಲೀಸ್ ಇಲಾಖೆ ಮತ್ತು ಮಕ್ಕಳ ಸಹಾಯವಾಣಿ ಜಂಟಿಯಾಗಿ ದಾಳಿ ನಡೆಸಲಾಗಿದೆ.
ರಕ್ಷಿಸಲಾದ ಬಾಲ ಕಾರ್ಮಿಕರನ್ನು ತಾತ್ಕಾಲಿಕ ಪುನರ್ವಸತಿಗಾಗಿ ಸರ್ವೋದಯ ಸರ್ವೀಸ್ ಸೊಸೈಟಿ ಹಾಗೂ ಸ್ನೇಹ ಭಾರತಿ ಶಿಕ್ಷಣ ಸಂಸ್ಥೆಯ ತೆರೆದ ಮಕ್ಕಳ ತಂಗುದಾಣದಲ್ಲಿ ಪುನರ್ವಸತಿ ಗೊಳಿಸಲಾಗಿರುತ್ತದೆ.


ತನಿಖಾ ಕಾರ್ಯಾಚರಣೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ ಹೆಚ್.ಆರ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಸುಬ್ಬರಾವ್. ಎಸ್, ಕಾರ್ಮಿಕ ನಿರೀಕ್ಷಕ ಯತೀಶ ಕುಮಾರ್, ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆಯ ನಂಜಪ್ಪ, ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ಸಂಯೋಜಕಿ ವಿಜಯಲಕ್ಷ್ಮಿ, ಜಿನ್ನಾಗರ ಶಾಲೆಯ ಮುಖ್ಯೋಪಾಧ್ಯಾಯ ವಿಜಯ, ಅಂಗನವಾಡಿ ಶಿಕ್ಷಕಿ ರೇಣುಕಾ ಹಾಗೂ ಮಕ್ಕಳ ಸಹಾಯವಾಣಿಯ ಸಿಬ್ಬಂದಿಗಳಾದ ಶಶಿಕುಮಾರ್ ಹಾಗೂ ನರಸಿಂಹ ರಾಜು ಹಾಜರಿದ್ದರು.

€€€€€€€€€€€€€€€€€€€€€€€€€€$€$$€€$$$$$

ಲೋಕಸಭಾ ಚುನಾವಣೆ – 2024 ರ ಅಂಗವಾಗಿ ಇಂದು ವಾರ್ತಾ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಮುಖ್ಯ ಚುನಾವಣಾಧಿಕಾರಿಗಳ ಕಛೇರಿವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಚುನಾವಣಾ ಸಮಯದಲ್ಲಿ ಮಾಧ್ಯಮ” ಕಾರ್ಯಗಾರವನ್ನು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಹಾಗೂ ವಾರ್ತಾ ಇಲಾಖೆಯ ಆಯುಕ್ತ ಹೇಮಂತ್ ಎಂ ನಿಂಬಾಳ್ಕರ್ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಅಪರ ಮುಖ್ಯ ಚುನಾವಾಧಿಕಾರಿಗಳು ಆದ ವೆಂಕಟೇಶ್ ಕುಮಾರ್ ಹಾಗೂ ಕೂರ್ಮ ರಾವ್, ವಿಶೇಷ ಅಧಿಕಾರಿ IT & ಮಾಧ್ಯಮ ಎ ವಿ ಸೂರ್ಯ ಸೇನ್, ಹಿರಿಯ ಪತ್ರಕರ್ತ ಈಶ್ವರ್ ದೈತೋಟ ಅವರು ಉಪಸ್ಥಿತರಿದ್ದರು.

ಕಾರ್ಯಾಗಾರದಲ್ಲಿ ವಾರ್ತಾ ಇಲಾಖೆಯ ಜಿಲ್ಲಾ ವಾರ್ತಾಧಿಕಾರಿ ಗಳು ಹಾಗೂ ಮಾಧ್ಯಮ ಪ್ರತಿನಿಧಿಗಳು ಭಾಗವಹಿಸಿದ್ದರು.

WhatsApp

Join Now

Telegram

Join Now

Instagram

Join Now