ಆಸೆ ಆಮಿಷಗಳಿಗೆ ಒಳಗಾಗದೆ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತ ಚಲಾಯಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್

*ಸಾರ್ವತ್ರಿಕ ಲೋಕಸಭಾ ಚುನಾವಣೆ 2024*

*27-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ*

 

ಆಸೆ ಆಮಿಷಗಳಿಗೆ ಒಳಗಾಗದೆ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತ ಚಲಾಯಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 01  : ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಸಂಬಂಧ ಏಪ್ರಿಲ್ 26 ರಂದು ನಡೆಯುವ ಮತದಾನದ ದಿನದಂದು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಅವರು ಹೇಳಿದರು.

 

ಸಾರ್ವತ್ರಿಕ ಲೋಕಸಭಾ ಚುನಾವಣೆ 2024ರ ಅಂಗವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಿದ್ದ ಜಿಲ್ಲಾಡಳಿತ ಕಛೇರಿ ಮೇಲೆ ಮತದಾನ ಜಾಗೃತಿಗಾಗಿ ಹಾಟ್ ಏರ್ ಬಲೂನ್ ಅನಾವರಣ ಹಾಗೂ ಮತದಾನ ಜಾಗೃತಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಹಲವು ಮತದಾನ ಜಾಗೃತಿ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗಿದೆ. ಲೋಕಸಭಾ ಚುನಾವಣೆಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಸಧೃಡ ದೇಶ ನಿರ್ಮಾಣ ಮಾಡಲು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ತಪ್ಪದೇ ಪ್ರತಿಯೊಬ್ಬರು ಮತ ಚಲಾಯಿಸಿ ಎಂದು ಹೇಳಿದರು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ಎನ್ ಅನುರಾಧ ಅವರು ಮಾತನಾಡಿ ಈ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಬೇಕೆಂಬ ಆಶಯದೊಂದಿಗೆ ಜಿಲ್ಲೆಯಾದ್ಯಂತ ಸ್ವೀಪ್ ಸಮಿತಿ ವತಿಯಿಂದ ವಿಭಿನ್ನವಾಗಿ ಸಾಕಷ್ಟು ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ತಪ್ಪದೇ ನಿರ್ಭೀತಿಯಿಂದ ಮತ ಚಲಾಯಿಸಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಜಿಲ್ಲಾ ಐಕಾನ್ ಆಗಿ ಕಾಮಿಡಿ ಕಿಲಾಡಿ ನಟ ರಘು, ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಿಂದ ಅದ್ಯ ಮತ್ತು ವಿಕಲಚೇತನರ ಕ್ಷೇತ್ರದಿಂದ ಪ್ಯಾರ ಕ್ರೀಡಾ ಪಟು ಪ್ರಕಾಶ್ ಅವರು ಭಾಗವಹಿಸಿ ಎಲ್ಲರು ತಪ್ಪದೇ ಮತದಾನದ ಹಕ್ಕು ಚಲಾಯಿಸಿ ಎಂದು ಮತದಾನ ಜಾಗೃತಿ ಮೂಡಿಸಿದರು.

*ಮತದಾನ ಜಾಗೃತಿಗಾಗಿ ಜಿಲ್ಲಾಧಿಕಾರಿ ಹಾಟ್ ಏರ್ ಬಲೂನ್ ಹಾರಿಸುವ ಮೂಲಕ ಚಾಲನೆ ನೀಡಿದರು. ಮತದಾನ ಜಾಗೃತಿ ಸಹಿ ಸಂಗ್ರಹ ಅಭಿಯಾನದಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸುವ ಮೂಲಕ ಎಲ್ಲರೂ ಸಹಿ ಹಾಕಿ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಸಾಕ್ಷಿಯಾದರು*

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಟಿ.ಕೆ ರಮೇಶ್, ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ ಸೇರಿದಂತೆ ಜಿಲ್ಲಾಡಳಿತದ ಸಿಬ್ಬಂದಿ, ಇತರರು ಉಪಸ್ಥಿತರಿದ್ದರು.

::::::::::::::::::::::::::::::::::::::::::::::::::::::::::::::::::::

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಕಡ್ಡಾಯ:ಏಪ್ರಿಲ್ 30 ಕೊನೆಯ ದಿನ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ,ಏಪ್ರಿಲ್ 01 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಈಗಾಗಲೇ ಮಾಸಾಶನ ಮತ್ತು ವಿಧವಾ ಮಾಸಾಶನ ಪಡೆಯುತ್ತಿರುವ ಕಲಾವಿದರು/ಸಾಹಿತಿಗಳು 2024-25 ನೇ ಸಾಲಿನ ಜೀವಿತಾವಧಿ ಪ್ರಮಾಣ ಪತ್ರಗಳ ದಾಖಲೆಗಳನ್ನು ಸಲ್ಲಿಸಬೇಕು. ನಿಗಧಿತ ಅರ್ಜಿ ನಮೂನೆಯನ್ನು 2024ನೇ ಏಪ್ರಿಲ್-30ರೊಳಗಾಗಿ ತಪ್ಪದೇ ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:114 ಚಪ್ಪರದಕಲ್ಲು, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಜೀವಿತಾವಧಿ ಪ್ರಮಾಣ ಪತ್ರ ಹಾಗೂ ಮಾಸಾಶನಕ್ಕೆ ಸಂಬಂಧಿಸಿದ ಪಿಂಚಣಿ ಪಾವತಿ(P.P.O) ಆದೇಶದ ಜೆರಾಕ್ಸ್ ಪ್ರತಿ, ಆಧಾರ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಪ.ಜಾ/ಪ.ಪಂ ಕಲಾವಿದರು ಕಡ್ಡಾಯವಾಗಿ ಆರ್.ಡಿ ಸಂಖ್ಯೆ ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಲಗತ್ತಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಛೇರಿಗೆ ಸಲ್ಲಿಸಬೇಕಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.