ಡಾ.ಬಾಬು ಜಗಜೀವನ ರಾಂ ರವರ 117 ನೇ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್

ಜಿಲ್ಲಾಡಳಿತ ಭವನದಲ್ಲಿ ಡಾ.ಬಾಬು ಜಗಜೀವನ ರಾಂ ರವರ 117 ನೇ ಜಯಂತಿ ಸರಳ ಆಚರಣೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 05  : ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿಗಳಾದ ಡಾ.ಬಾಬು ಜಗಜೀವನ ರಾಂ ರವರ 117 ನೇ ಜಯಂತಿ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿಂದು ಆಚರಿಸಲಾಯಿತು.

ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಡಾ.ಬಾಬು ಜಗಜೀವನ ರಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲಿಕಾರ್ಜುನ್ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೆ ರಮೇಶ್, ಡಿವೈಎಸ್ಪಿ ರವಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಟಿ.ಎಲ್.ಎಸ್ ಪ್ರೇಮಾ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

**************************************

ಸಾರ್ವತ್ರಿಕ ಲೋಕಸಭಾ ಚುನಾವಣೆ:ವಿಶೇಷ ಮತದಾನ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 05 : ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಸಂಬಂಧ ನೆಲಮಂಗಲ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ನೆಲಮಂಗಲ ತಾಲ್ಲೂಕಿನ ವಲಯ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಸ್ವೀಪ್(SVEEP) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಮತದಾನದ ಪ್ರತಿಜ್ಞಾವಿಧಿಯನ್ನು ಬೋಧಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.