2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ:  ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 10ನೇ ಸ್ಥಾನ

2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ: 

ಬೆಂ.ಗ್ರಾ. ಜಿಲ್ಲೆ: ಶೇ. 87.55 ರಷ್ಟು ದ್ವಿತೀಯ ಪಿಯುಸಿ ಫಲಿತಾಂಶ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 10 : 2023-24ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಇಂದು(2024ರ ಏಪ್ರಿಲ್ 10 ರಂದು) ಪ್ರಕಟಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 87.55 ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ 10ನೇ ಸ್ಥಾನವನ್ನು ಪಡೆದಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾದ 10048 ವಿದ್ಯಾರ್ಥಿಗಳ ಪೈಕಿ 8488 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಜಿಲ್ಲೆಯು ಶೇ. 84.47 ರಷ್ಟು ಫಲಿತಾಂಶ ಪಡೆದಿದ್ದು, ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳಲ್ಲಿ 2023-24ನೇ ಸಾಲಿನ(ಪ್ರೆಶ್) 9371 ವಿದ್ಯಾರ್ಥಿಗಳು ಹಾಜರಾಗಿದ್ದು ಈ ಪೈಕಿ 8204 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 87.55 ರಷ್ಟು ಫಲಿತಾಂಶ ದೊರಕಿದೆ.

ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 4506 ಬಾಲಕರು ಹಾಜರಾಗಿದ್ದು, 3712 ಬಾಲಕರು ತೇರ್ಗಡೆಯಾಗುವ ಮೂಲಕ ಶೇ. 82.38 ರಷ್ಟು ಫಲಿತಾಂಶ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾದ ಒಟ್ಟು 5542 ಬಾಲಕಿಯರು ಪೈಕಿ 4776 ಬಾಲಕಿಯರು ತೇರ್ಗಡೆ ಹೊಂದುವ ಮೂಲಕ ಶೇ. 86.18 ರಷ್ಟು ಫಲಿತಾಂಶ ದೊರಕಿದೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ ಕಲಾ ವಿಭಾಗದಿಂದ ಹಾಜರಾದ ಒಟ್ಟು 1173 ವಿದ್ಯಾರ್ಥಿಗಳ ಪೈಕಿ 734 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 62.57 ರಷ್ಟು ಫಲಿತಾಂಶ ಪಡೆದಿದೆ.

ವಾಣಿಜ್ಯ ವಿಭಾಗದಿಂದ ಹಾಜರಾದ ಒಟ್ಟು 4978 ವಿದ್ಯಾರ್ಥಿಗಳ ಪೈಕಿ 4207 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 84.51 ರಷ್ಟು ಫಲಿತಾಂಶ ದೊರೆತಿದೆ.

ವಿಜ್ಞಾನ ವಿಭಾಗದಿಂದ ಹಾಜರಾದ ಒಟ್ಟು 3897 ವಿದ್ಯಾರ್ಥಿಗಳ ಪೈಕಿ 3547 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 91.02 ರಷ್ಟು ಫಲಿತಾಂಶ ಪಡೆದಿದೆ.

ನಗರ ಪ್ರದೇಶದ 7840 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 6591 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ.84.07 ರಷ್ಟು ಫಲಿತಾಂಶ ದೊರೆತರೆ, ಗ್ರಾಮೀಣ ಪ್ರದೇಶದ 2208 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 1897 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ.85.91 ರಷ್ಟು ಫಲಿತಾಂಶ ದೊರೆತಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಹೊಯ್ಸಳ ಪಿಯು ಕಾಲೇಜಿನ ವಿದ್ಯಾರ್ಥಿನಿ ಶಿಲ್ಪ ಶ್ರೀ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 5 ನೇ ಸ್ಥಾನ ಪಡೆದುಕೊಂಡಿದ್ದಾರೆ.