ಅಲ್ಲಮ ಪ್ರಭು ಮತ್ತು ಯುಗಾದಿ ಕವಿಗೋಷ್ಠಿ

ವಿಜಯ ದರ್ಪಣ ನ್ಯೂಸ್

 ಅಲ್ಲಮ ಪ್ರಭು ಮತ್ತು ಯುಗಾದಿ ಕವಿಗೋಷ್ಠಿ


ನಮ್ಮ ನಾಡಿನ ಅಧ್ಯಾತ್ಮಚೇತನದ ಜ್ಯೋತಿಯನ್ನು ಪ್ರಕಾಶಗೊಳಿಸಿದ ಅಲ್ಲಮಪ್ರಭುಗಳ ಬಗೆಗೆ ಹಾಗೂ ಆ ವಚನ ಕಾಲದ ನಮ್ಮ ಭವ್ಯ ಪರಂಪರೆಯನ್ನು ನೆನೆಯುತ್ತಿದ್ದರೆ ಮನಸ್ಸು ಪುಳಕಿಸುತ್ತದೆ ಎಂದು ಎನ್ ಜಯರಾಮ್ ತಿಳಿಸಿದರು 

12ನೇ ಶತಮಾನ ಭಾರತದ ಇತಿಹಾಸದಲ್ಲಿ ಧಾರ್ಮಿಕ ಸುವರ್ಣಕಾಲ. ಕರ್ನಾಟಕದ ಮಟ್ಟಿಗೆ ವಿಚಾರಕ್ರಾಂತಿಗೆ, ತನ್ಮೂಲಕ ಸಾಮಾಜಿಕ, ಸಾಹಿತ್ಯಿಕ ಕ್ರಾಂತಿ ವಿಜೃಂಭಿಸಿದ ಕಾಲ. ಕನ್ನಡನಾಡಿನ ಕೇಂದ್ರ ಕಲ್ಯಾಣದಲ್ಲಿ ರಾಜ್ಯವಾಳುತ್ತಿದ್ದ ಬಿಜ್ಜಳ ರಾಜನ ಮಂತ್ರಿಯಾಗಿ ದೇಶವನ್ನು ಸುಭಿಕ್ಷದೆಡೆಗೆ ಕೊಂಡೊಯ್ದ ಭಗವಾನ್ ಬಸವೇಶ್ವರರು ಕ್ರಾಂತಿಯ ಕೇಂದ್ರ ಬಿಂದು. ಈ ಕ್ರಾಂತಿ ದೀಪಕ್ಕೆ ತಾತ್ವಿಕ ನೆಲಗಟ್ಟನ್ನು ನೀಡಿ ಬೆಳಗಿಸಿದವರು ಅನುಪಮ ಚರಿತ ಅಲ್ಲಮಪ್ರಭುದೇವರು. ಬಸವಣ್ಣನವರು ಪ್ರತಿಪಾದಿಸಿದ ಸತ್ಯಶುದ್ಧ ಕಾಯಕ, ದಾಸೋಹಗಳು ಕಲ್ಯಾಣ ರಾಜ್ಯದ ಕೀರ್ತಿಯನ್ನು ನಾಡಿನಾದ್ಯಂತ ಬಿತ್ತರಿಸಿದವು. ಕಲ್ಯಾಣ ರಾಜ್ಯದಲ್ಲಿ ಆರ್ಥಿಕ ಕ್ರಾಂತಿಗೆ ಕಾರಣವಾಯಿತು. ಮೇಲುವರ್ಗದ, ಪುರೋಹಿತಶಾಹಿಗಳ ಸ್ವತ್ತಾಗಿದ್ದ ದೇವರು, ದೇವಾಲಯಗಳನ್ನು ಜನ ಸಾಮಾನ್ಯರ ಬಳಿಗೆ ತಂದು, ಇಷ್ಟ ಲಿಂಗಧಾರಣೆ ಮೂಲಕ ದೇಹವನ್ನೇ ದೇವಾಲಯವನ್ನಾಗಿಸಿದವರು ಭಗವಾನ್ ಬಸವೇಶ್ವರರು. ತಾವೇ ಏರಬಹುದಾಗಿದ್ದ ಶೂನ್ಯಪೀಠವನ್ನು, ಕೆಳವರ್ಗದಿಂದ ಬಂದ ಮದ್ದಳೆಕಾಯಕದ ಅಲ್ಲಮಪ್ರಭು ದೇವರನ್ನು ಪೀಠಾಧ್ಯಕ್ಷರನ್ನಾಗಿಸಿದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ ಎಂದು ತಿಳಿಸಿದರು 

ಯುಗಾದಿ ಕವಿಗೋಷ್ಠಿಯಲ್ಲಿ ಮ ಸುರೇಶ್ ಬಾಬು ಚಂದ್ರಶೇಖರ್ ಹಡಪದ್ ಎಸ್ ರಮೇಶ್ ಕೆಎನ್ ಜನಾರ್ಧನ್ ಕಾವ್ಯವಾಚನ ಮಾಡಿದರು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವಿಜಯಪುರ ಲೀಜನ್ ಅಧ್ಯಕ್ಷ ಕೆ ವೆಂಕಟೇಶ್  ವಹಿಸಿದ್ದರು 

ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಉಪಾಧ್ಯಕ್ಷ ಡಾ ಎಂ ಶಿವಕುಮಾರ್ ರಾಷ್ಟ್ರೀಯ ಸಂಯೋಜಕ ವಿ ವೆಂಕಟೇಶ್ ಎನ್ ಜಯರಾಮ್ ಜೇಸಿಐ ಆಧ್ಯಕ್ಷ ಬೈರೇಗೌಡ ಗೌರವ ಕಾರ್ಯದರ್ಶಿ ಚಿದಾನಂದ ಮೂರ್ತಿ ಸಂಘಟನಾ ಕಾರ್ಯದರ್ಶಿ ವಿ. ಆನಂದ್ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಆರ್ ಮುನಿರಾಜು ಪದಾಧಿಕಾರಿಗಳಾದ ಮಾರ್ಕೆಟ್ ವೆಂಕಟೇಶ್ ಬಲಮುರಿ ಶ್ರೀನಿವಾಸ್ ಮೂರ್ತಿ ಜನಾರ್ಧನ್ ಶ್ರೀಮತಿ ಶಿಲ್ಪ ಉಭಯ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು

&&&&&&&&&&&&&&&&&&&&&&&&&&&&&&&&&&&&&&&&&&&&&&&&&&

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ ಪಟ್ಟಣದಲ್ಲಿ ಅನಾದಿಕಾಲದಿಂದಲೂ ನೆಲೆಸಿರುವ ಶ್ರೀ ದಕ್ಷಿಣ ಕಾಶಿ ಎಂದು ಪ್ರಸಿದ್ಧಿ ಹೊಂದಿರುವ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದಲ್ಲಿ ಯುಗಾದಿ ಹಬ್ಬದ ಮಾರನೇ ದಿನ ಕೊಳಾಲಮ್ಮ ಪೂಜಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.