--Ads--

ಮತದಾನದ ದಿನ ಕಾರ್ಮಿಕರಿಗೆ ವೇತನ ಸಹಿತ ರಜೆ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಆದೇಶ

On: April 25, 2024 12:48 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್ 

ಸಾರ್ವತ್ರಿಕ ಲೊಕಸಭಾ ಚುನಾವಣೆ-2024

ಮತದಾನದ ದಿನ ಕಾರ್ಮಿಕರಿಗೆ ವೇತನ ಸಹಿತ ರಜೆ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಆದೇಶ

 

 

 ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 25 : ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯನ್ನು ಮಾರ್ಚ್ 16 ರಂದು ಫೋಷಿಸಿದ್ದು, ಅದರಂತೆ, ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗಧಿಯಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಏಪ್ರಿಲ್ 26(ಶುಕ್ರವಾರ) ರಂದು ಮೊದಲನೇ ಹಂತದ ಲೋಕಸಭಾ ಚುನಾವಣೆ ನಿಗಧಿಯಾಗಿರುತ್ತದೆ.

ಈ ದಿನಾಂಕದಂದು ಮತದಾನ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೋಂದಾಯಿತರಾದ ಮತದಾರರಾಗಿರುವ ಎಲ್ಲಾ ಅರ್ಹ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳು 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾದಿನಗಳು) ಕಾಯ್ದೆಯ ಕಲಂ-03ಎ ಪ್ರಕಾರ ಮತ ಚಲಾಯಿಸಲು ಅವಕಾಶ ಮಾಡಿ ಕೊಡಬೇಕಾಗಿರುತ್ತದೆ, ಆದ್ದರಿಂದ ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಅರ್ಹರಿರುವ ಎಲ್ಲಾ ಕಾರ್ಮಿಕ ಮತದಾರರಿಗೆ ಏಪ್ರಿಲ್ 26 ರಂದು ವೇತನ ಸಹಿತ ರಜೆ ನೀಡಿ, ಎಲ್ಲಾ ಅರ್ಹ ಕಾರ್ಮಿಕರು ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುವು ಮಾಡಿಕೊಡಲು ಸೂಚಿಸಿದೆ.
ಈ ವಿಷಯದಲ್ಲಿ ಅರ್ಹ ಯಾವುದೇ ಕಾರ್ಮಿಕರಿಗೆ ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ರಜೆ ನೀಡದೆ ಹಾಗೂ ಮತದಾನಕ್ಕೆ ಅವಕಾಶ ಮಾಡಿಕೊಡದಿದ್ದಲ್ಲಿ ಅಂತಹ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳ ವಿರುದ್ಧ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ-03ಎ ಹಾಗೂ 1951ರ ಪ್ರಜಾಪ್ರತಿನಿಧಿ ಕಾಯ್ದೆಯ ಕಲಂ135(ಬಿ) ಉಲ್ಲಂಘನೆಗಳಿಗಾಗಿ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು.

ಆದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಏಪ್ರೀಲ್ 26 ರಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಪೋಷಿಸಬೇಕು ತಪ್ಪಿದಲ್ಲಿ, ಸಂಬಂಧಪಟ್ಟ ಸಂಸ್ಥೆ/ನಿಯೋಜಕರ ವಿರುದ್ದ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ, ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: 12 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ವಾಹನಗಳು ವಶ, ಓರ್ವ ಬಂಧನ

ಅಮಾವಾಸ್ಯೆ ಪ್ರಯುಕ್ತ ಶ್ರೀ ಭದ್ರಕಾಳಿ ಶಕ್ತಿ ಪೀಠದಲ್ಲಿ ವಿಶೇಷ ಪೂಜೆ ಹಾಗೂ ಮಹಾ ಪ್ರತ್ಯಂಗಿರಾ ಹೋಮ

ವಿಕಸಿತ ಭಾರತ ಯುವ ನಾಯಕತ್ವ ಸಂವಾದ-2027 ಭಾಗವಾಗಿ ಯುವಜನತೆಗೆ ಕ್ವಿಜ್ ಸ್ಪರ್ಧೆ ಆಯೋಜನೆ

ಶಾಸಕ ಶರತ್ ಬಚ್ಚೇಗೌಡರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಅಭಿವೃದ್ಧಿ: 3,78,00,000 ರೂಪಾಯಿ ವೆಚ್ಚದಲ್ಲಿ 12,000 ಅಜೋಲಾ ಘಟಕಗಳ ಸ್ಥಾಪನೆಗೆ ಚಾಲನೆ