ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ : ಬೆಂಗಳೂರು ಗ್ರಾ. ಜಿಲ್ಲೆಯಲ್ಲಿ ಶೇ81.90 ಮತದಾನ

ವಿಜಯ ದರ್ಪಣ ನ್ಯೂಸ್ 

ಸಾರ್ವತ್ರಿಕ ಲೋಕಸಭಾ ಚುನಾವಣೆ-2024

27-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ

ಬೆಂಗಳೂರು ಗ್ರಾ. ಜಿಲ್ಲೆಯಲ್ಲಿ ಶೇ81.90 ಮತದಾನ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 26 : ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ81.90ರಷ್ಟು ಮತದಾನವಾಗಿರುವುದಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಎನ್ ಶಿವಶಂಕರ ಅವರು ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಸುಗಮ ಹಾಗೂ ಶಾಂತಿಯುತವಾಗಿ ನಡೆದಿರುವುದಕ್ಕಾಗಿ ಅವರು ಧನ್ಯವಾದ ತಿಳಿಸಿದ್ದಾರೆ.

 

ನಾಲ್ಕು ವಿಧಾನಸಭಾ ಕ್ಷೇತ್ರಗಳ ಮತದಾನದ ಶೇಕಡಾವಾರು ವಿವರ

178-ಹೊಸಕೋಟೆ ವಿಧಾನಸಭಾ ಕ್ಷೇತ್ರ: 86.44%

179-ದೇವನಹಳ್ಳಿ ವಿಧಾನಸಭಾ ಕ್ಷೇತ್ರ: 82.69%

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ: 80.16%

181-ನೆಲಮಂಗಲ ವಿಧಾನಸಭಾ ಕ್ಷೇತ್ರ: 77.98%