--Ads--

ಅಕ್ಷಯ ತೃತೀಯ ದಿನ ಬಾಲ್ಯವಿವಾಹ ನಡೆಯದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಿ

On: May 8, 2024 5:59 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್ 

ಅಕ್ಷಯ ತೃತೀಯ ದಿನ ಬಾಲ್ಯವಿವಾಹ ನಡೆಯದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 08 : ಮೇ 10 ರಂದು ಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ ವಿವಾಹಗಳು ನಡೆಯುವ ಸಾಧ್ಯತೆ ಹೆಚ್ಚಾಗಿದ್ದು, ಇಂತಹ ವಿವಾಹಗಳಲ್ಲಿ ಬಾಲ್ಯವಿವಾಹಗಳು ನಡೆಯುವ ಸಾಧ್ಯತೆಯೂ ಸಹ ಹೆಚ್ಚಿರುತ್ತದೆ. ಈಗಾಗಲೇ ಶಾಲೆ ಬಿಟ್ಟ ಮಕ್ಕಳ ಅನುಸರಣೆ ಮಾಡಿ ಬಾಲ್ಯವಿವಾಹಕ್ಕೆ ಒಳಗಾಗದಂತೆ ಸೂಕ್ತ ಕ್ರಮಕೈಗೊಳ್ಳುವುದು. ಈ ಸಮಯದಲ್ಲಿ ಯಾವುದೇ ಬಾಲ್ಯವಿವಾಹಗಳು ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮವಹಿಸಬೇಕು.

ಮದ್ದೂರಮ್ಮ ದೇವಸ್ಥಾನದ ಮುಖ್ಯಸ್ಥರಿಗೆ ಸಾಮೂಹಿಕ ವಿವಾಹಗಳಲ್ಲಿ ಹಾಗೂ ಕಲ್ಯಾಣ ಮಂಟಪಗಳಲ್ಲಿ ಯಾವುದೇ ಬಾಲ್ಯವಿವಾಹಗಳಿಗೆ ಅವಕಾಶ ಮಾಡಿಕೊಡಬಾರದೆಂದು ಬಾಲ್ಯವಿವಾಹ ಕಾಯ್ದೆಯ ಕುರಿತು ಅವರಿಗೆ ತಿಳಿಸಿ, ಅರಿವು ಮೂಡಿಸಬೇಕು.ಸಂಬಂಧಿತ ಎಲ್ಲಾ ವೃತ್ತದ ಮೇಲ್ವಿಚಾರಿಕಿಯವರಿಗೆ, ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ, ಆಯಾ ಗ್ರಾಮಗಳಲ್ಲಿ ಬಾಲ್ಯವಿವಾಹ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸಾಮೂಹಿಕ ವಿವಾಹಗಳು ನಡೆಯಲು ಸಾಧ್ಯತೆಗಳಿರುವಂತಹ ಪ್ರಸಿದ್ದ ದೇವಸ್ಥಾನಗಳಾದ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಮಣ್ಯ, ಮಧುರೆ ದೇವಸ್ಥಾನ, ನೆಲಮಂಗಲ ತಾಲ್ಲೂಕಿನ ಶಿವಗಂಗೆ, ದೇವಹಳ್ಳಿ ತಾಲ್ಲೂಕಿನ ತಿಮ್ಮರಾಯಸ್ವಾಮಿ ಬೆಟ್ಟ(ಅವತಿ) ಹಾಗೂ ಹೊಸಕೋಟೆ ತಾಲ್ಲೂಕಿನ ಶ್ರೀ ಕಾಳಬೈರವ ದೇವಸ್ಥಾನ ಜಡಿಗೇನಹಳ್ಳಿ, ಅನುಗೊಂಡನಹಳ್ಳಿಯ ಮದ್ದೂರಮ್ಮ ದೇವಸ್ಥಾನದ ಮುಖ್ಯಸ್ಥರಿಗೆ ಸಾಮೂಹಿಕ ವಿವಾಹಗಳಲ್ಲಿ ಹಾಗೂ ಕಲ್ಯಾಣ ಮಂಟಪಗಳಲ್ಲಿ ಯಾವುದೇ ಬಾಲ್ಯವಿವಾಹಗಳಿಗೆ ಅವಕಾಶ ಮಾಡಿಕೊಡಬಾರದೆಂದು ಬಾಲ್ಯವಿವಾಹ ಕಾಯ್ದೆಯ ಕುರಿತು ಅವರಿಗೆ ತಿಳಿಸಿ, ಅರಿವು ಮೂಡಿಸಬೇಕು.

ಸಂಬಂಧಿತ ಎಲ್ಲಾ ವೃತ್ತದ ಮೇಲ್ವಿಚಾರಿಕಿಯವರಿಗೆ, ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ, ಆಯಾ ಗ್ರಾಮಗಳಲ್ಲಿ ಬಾಲ್ಯವಿವಾಹ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

&&&&&&&&&&&&&&&&&&&&&&&&

ಪ್ರತಿಷ್ಠಿತ ಶಾಲೆಗಳ 6ನೇ ತರಗತಿಗೆ ಸೇರಲು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ


ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 08  : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 06ನೇ ತರಗತಿ(ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣವನ್ನು ಕೊಡಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಪ್ರತಿಷ್ಠಿತ ಶಾಲೆಗಳನ್ನು ಗುರುತಿಸಿ, ಅಂತಹ ವಸತಿ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ವಿದ್ಯಾರ್ಥಿಗಳನ್ನು ದಾಖಲು ಮಾಡಿಸಿ, ಆ ವಿದ್ಯಾಸಂಸ್ಥೆಗಳು/ಶಾಲೆಗಳಿಗೆ ಭರಿಸಬೇಕಾದ ಎಲ್ಲಾ ರೀತಿ ಶುಲ್ಕ, ಸಮವಸ್ತ್ರ, ಪಠ್ಯಪುಸ್ತಕ, ಪ್ರವಾಸ ಭತ್ಯೆ ಮತ್ತು ಇತರೆ ವೆಚ್ಚಗಳನ್ನು ಹಾಗೂ ವಸತಿ ಮತ್ತು ಭೋಜನಾ ವೆಚ್ಚವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಭರಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ.

ಷರತ್ತುಗಳು, ಅರ್ಜಿ ನಮೂನೆ ಮತ್ತು ವಿವರಗಳನ್ನು ಉಪ ನಿರ್ದೇಶಕ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಪಡೆದುಕೊಳ್ಳಬಹುದಾಗಿದ್ದು ,www.sw.kar.nic.in ಆನ್ಲೈನ್ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ 21 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂ.ಸಂ.: 080-29787447, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ದೂ.ಸಂ.: 080- 27681784, ದೊಡ್ಡಬಳ್ಳಾಪುರ ದೂ.ಸಂ.: 080- 27623681, ನೆಲಮಂಗಲ ದೂ.ಸಂ.: 080- 27723172 ಹಾಗೂ ಹೊಸಕೋಟೆ ದೂ.ಸಂ.: 080- 27931528 ಅನ್ನು ಸಂಪರ್ಕಿಸಬಹುದಾಗಿದೆ.

ವಿಶೇಷ ಸೂಚನೆ

ಪ್ರವೇಶ ಪರೀಕ್ಷೆಯನ್ನು ದಿನಾಂಕ 28.05.2024ರಂದು ಮಂಗಳವಾರ ಬೆಳಗ್ಗೆ 10.30 ಯಿಂದ 1:30 ಗಂಟೆಯವರೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಹೊಸ ಬಸ್ ನಿಲ್ದಾಣದ ಎದುರು ದೇವನಹಳ್ಳಿ ಟೌನ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp

Join Now

Telegram

Join Now

Instagram

Join Now