--Ads--

ಹೊಸಕೋಟೆ ದೇವಸ್ಥಾನ ಸಮಿತಿಗೆ ಮುಸ್ಲಿಂ ವ್ಯಕ್ತಿ ಸದಸ್ಯ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

On: May 8, 2024 6:23 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್ 

ಹೊಸಕೋಟೆ ದೇವಸ್ಥಾನ ಸಮಿತಿಗೆ ಮುಸ್ಲಿಂ ವ್ಯಕ್ತಿ ಸದಸ್ಯ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಬೆಂಗಳೂರು : ಹೊಸಕೋಟೆ ದೇವಸ್ಥಾನ ಶ್ರೀ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಸಮಿತಿಗೆ ಮುಸ್ಲಿಂ ವ್ಯಕ್ತಿ ಸದಸ್ಯ ವಿವಾದ ಎಬ್ಬಿಸಿದ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.


ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ವೊಂದನ್ನು ಹಂಚಿಕೊಂಡಿರುವ ಅವರು, ಕಾಂಗ್ರೆಸ್ ಸರ್ಕಾರ ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಂ ಸಮುದಾಯದ ನವಾಝ್ ಅವರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಎದೆಬಡಿದುಕೊಳ್ಳೀರಲ್ಲಾ?. ನಿಮ್ಮದೇ ಪಕ್ಷದ ಸರ್ಕಾರ 2020 ಮತ್ತು 2022ರ ಸಾಲಿನಲ್ಲಿ ಇದೇ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಂ ಸಮುದಾಯ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಿದಾಗ ನಿಮ್ಮಲ್ಲಿ ಈಗ ಉಕ್ಕಿ ಹರಿಯುತ್ತಿರುವ ಹಿಂದುತ್ವದ ಅಭಿಮಾನ ಆಗ ಎಲ್ಲಿ ಅಡಗಿ ಕೂತಿತ್ತು?” ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

“ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನ ಸರ್ವಧರ್ಮಗಳನ್ನು ಸಮಭಾವದಿಂದ ಕಾಣುವ ಹಿಂದು ಧರ್ಮದ ಪರಂಪರೆಗೆ ಸಾಕ್ಷಿಯಾಗಿದೆ. ಅಲ್ಲಿನ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಎಲ್ಲ ಧರ್ಮಗಳ ಜನತೆ ಭಕ್ತಿ-ಗೌರವದಿಂದ ಭಾಗವಹಿಸುತ್ತಾರೆ. 2020ರಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಈ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಗೆ ಇಮ್ತಿಯಾಜ್ ಪಾಷಾ ಅವರನ್ನು ಸದಸ್ಯರನ್ನಾಗಿ ನೇಮಿಸಿತ್ತು. 2022ರಲ್ಲಿ ಬಿಜೆಪಿ ಸರ್ಕಾರ ಮತ್ತೆ ಈ ಸಮಿತಿಗೆ ಅಪ್ಸರ್ ಅವರನ್ನು ಸದಸ್ಯರನ್ನಾಗಿ ಮಾಡಿತ್ತು” ಎಂದು ತಿಳಿಸಿದ್ದಾರೆ.

“ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಸಂಪತ್ತು ಲೂಟಿ ಮಾಡುವ ದುರುದ್ದೇಶದಿಂದಲೇ ಬಿಜೆಪಿ ಸರ್ಕಾರ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಮರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಆರೋಪಿಸುವಷ್ಟು ಕೀಳು ಮಟ್ಟಕ್ಕೆ ನಾನಿಳಿಯಲಾರೆ. ಎಲ್ಲವನ್ನೂ ಕೇಸರಿ ಕಣ್ಣುಗಳಿಂದ ನೋಡುವ ರೋಗದಿಂದ ಶೀಘ್ರ ಗುಣಮುಖರಾಗಿ ಎಂದು ನಿಮಗೂ ನಿಮ್ಮ ಸರ್ವೋಚ್ಚ ನಾಯಕರಾದ ನರೇಂದ್ರ ಮೋದಿಗೆ ಅವರಿಗೆ ಹಾರೈಸುತ್ತೇನೆ”ಎಂದು ಲೇವಡಿ ಮಾಡಿದ್ದಾರೆ.

ರಾಜ್ಯದ ಬಿಜೆಪಿ ನಾಯಕರೇ, ನಿಮಗೆ ಮಾನ-ಮರ್ಯಾದೆ ಎನ್ನುವುದೇನಾದರೂ ಇದ್ದರೆ ಮೊದಲು ಜನರನ್ನು ತಪ್ಪುದಾರಿಗೆಳೆಯುವ ಈ ಹೇಳಿಕೆಯನ್ನು ವಾಪಸು ಪಡೆದು ರಾಜ್ಯದ ಜಾತ್ಯತೀತ ಕನ್ನಡಿಗರ ಕ್ಷಮೆ ಕೇಳಬೇಕು ಅವರು ಒತ್ತಾಯಿಸಿದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ದಿನಾಂಕ: 17-07-2026 ಶುಕ್ರವಾರ *ದಕ್ಷಿಣಾಯಣ ಪುಣ್ಯಕಾಲ* : ಸೂರ್ಯನು ನಾಳೆ ಬೆಳಗ್ಗೆ 11.45ಕ್ಕೆ ಮಘಾ ನಕ್ಷತ್ರದಲ್ಲಿ ಕರ್ಕಾಟಕರಾಶಿ ಪ್ರವೇಶ

ಛಲ ಬಿಡದ ಲಕ್ಷ್ಮವ್ವ: 116ರ ಹರೆಯದಲ್ಲೂ ಅಲಿಪಿರಿ ಮಾರ್ಗದ 3,550 ಮೆಟ್ಟಿಲು ಹತ್ತಿ ತಿರುಮಲ ತಲುಪಿದ ಕರ್ನಾಟಕದ ಶತಾಯುಷಿ!

ಚೌಡಪ್ಪನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಶ್ರೀ ಗಂಗಾದೇವಿ ದೇವಾಲಯದ ಅಭಿವೃದ್ಧಿಗೆ  ಧನಸಹಾಯ  ಮಾಡಿದ  ಶ್ರೀ ನಿಸರ್ಗ ನಾರಾಯಣಸ್ವಾಮಿ 

ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ  ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಎಬಿ ಬಸವರಾಜು 

ಶ್ರೀಸೋಮೇಶ್ವರಸ್ವಾಮಿ ಜೀರ್ಣೋದ್ದಾರ ಮತ್ತು ಪುನ‌ರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಸಕಲ ಸಿದ್ಧತೆ

ಶ್ರೀಉಮಾ ಮಹೇಶ್ವರಸ್ವಾಮಿ, ಭದ್ರಕಾಳಿ ಸಮೇತ ಶ್ರೀವೀರಭದ್ರಸ್ವಾಮಿ ದೇವಾಲಯ ಪುನರ್ ಪ್ರತಿಷ್ಠಾಪನೆ, ಮಂಡಲಪೂಜೆ