--Ads--

ಪೆನ್​ಡ್ರೈವ್​ ಪ್ರಕರಣ: ಕೊನೆಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ

On: May 28, 2024 5:17 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್  ..

ಪೆನ್​ಡ್ರೈವ್​ ಪ್ರಕರಣ: ಕೊನೆಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಹಾಸನ  ಸಂಸದ ಪ್ರಜ್ವಲ್ ರೇವಣ್ಣ  ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಬರೋಬ್ಬರಿ ಒಂದು ತಿಂಗಳ ಬಳಿಕ ವಿದೇಶದಲ್ಲಿದ್ದುಕೊಂಡು ಮೌನ ಮುರಿದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಇದೇ ಮೇ 31ರಂದು ಬೆಳಗ್ಗೆ 10.30ಕ್ಕೆ ಎಸ್​​ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾರೆ.

ವಿಡಿಯೋದಲ್ಲಿ ತಂದೆ ಹೆಡ್ ಡಿ ರೇವಣ್ಣ ತಾಯಿ ಭವಾನಿ ರೇವಣ್ಣ, ತಾತ ಹೆಡ್  ಡಿ ದೇವೇಗೌಡ ಅವರಲ್ಲಿ ಕ್ಷಮೆಯಾಚಿಸಿದ್ದಾರೆ. ಅಲ್ಲದೇ ಜನರು, ಜೆಡಿಎಸ್ ಪಕ್ಷದ ಕಾರ್ಯಕರ್ತರ ಬಳಿಯೂ ಕ್ಷಮೆ ಕೋರಿದ್ದಾರೆ. ಇನ್ನು ವಿದೇಶಕ್ಕೆ ತೆರಳಿರುವ ಬಗ್ಗೆ ಪ್ರತಿಕ್ರಿಯಿಸಿದ್ದು, ನನ್ನ ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು ಎಂದು ವಿಡಿಯೋದಲ್ಲಿ ಸ್ಪಷ್ಟಪಡಿಸಿದ್ದಾರೆ.

ನನ್ನ ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು. ವಿದೇಶಕ್ಕೆ ಹೋದ ಮೂರ್ನಾಲ್ಕು ದಿನದ ಬಳಿಕ ಪ್ರಕರಣದ ಬಗ್ಗೆ ಮಾಹಿತಿ ಗೊತ್ತಾಗಿದೆ. ಏಪ್ರಿಲ್ 26ರಂದು ಚುನಾವಣೆ ನಡೆಯಿತು. ಆಗ ಕೇಸ್​ ದಾಖಲಾಗಿರಲಿಲ್ಲ. ಎಸ್​​ಐಟಿ ಕೂಡ ರಚನೆ ಆಗಿರಲಿಲ್ಲ. ಆ ನಂತರ ಎಸ್​​ಐಟಿ ನೋಟಿಸ್​ ನೀಡಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಆದ್ರೆ, ನನ್ನ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು ಎಂದು ಪ್ರಜ್ವಲ್ ರೇವಣ್ಣ  ವಿದೇಶದಿಂದ ವಿಡಿಯೋ ರಿಲೀಸ್ ಮಾಡಿದ್ದಾರೆ.

ಪ್ರಜ್ವಲ್ ರೇವಣ್ಣ ವಿಡಿಯೋನಲ್ಲಿ ಹೇಳಿದ್ದೇನು?
ನಾನು ಎಲ್ಲಿದ್ದೇನೆ ಎಂಬ ಮಾಹಿತಿ ನೀಡಲು ಬಂದಿದ್ದೇನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ ಹೆಚ್ ಡಿ ದೇವೇಗೌಡ ರು, ಜೆಡಿಎಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ.  ಎಂಬುದಾಗಿ ಪ್ರಜ್ವಲ್‌ ರೇವಣ್ಣ ವಿಡಿಯೊದಲ್ಲಿ ತಿಳಿಸಿದ್ದಾರೆ.

ನಾನು ಇದೇ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಿ, ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ.  ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು.

ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಹಿರಿಯ ಕಾಂಗ್ರೆಸ್ ನಾಯಕರೆಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ ಎಂದಿದ್ದಾರೆ.

ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ಅನ್ನು ರದ್ದುಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ಬಾರಿ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ ರದ್ದುಗೊಳಿಸುವ ಪ್ರಕ್ರಿಯೆ ಆರಂಭಿಸಿದೆ. ಇನ್ನು, ಇದರ ಭಾಗವಾಗಿಯೇ ಕೇಂದ್ರ ಸರ್ಕಾರವು ಪ್ರತಿಕ್ರಿಯೆ ಕೋರಿ ಪ್ರಜ್ವಲ್‌ ರೇವಣ್ಣಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ.

ಶೋಕಾಸ್‌ ನೋಟಿಸ್‌ಗೂ ಉತ್ತರ ನೀಡದಿದ್ದರೆ, ಕೇಂದ್ರ ಸರ್ಕಾರವು ಪಾಸ್‌ಪೋರ್ಟ್‌ ರದ್ದುಗೊಳಿಸಲಿದೆ ಎಂದು ಹೇಳಲಾಗುತ್ತಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಅವರು ವಿಡಿಯೊ ಮೂಲಕ ಸ್ಪಷ್ಟನೆ ನೀಡಿದ್ದಾರೆ.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ವಿಕಾಸ ಸೌಧದಲ್ಲಿ  ನಡೆದ ಕೆ ಆರ್ ಎಸ್ ಜಲಾಶಯದ ನೀರಾವರಿ ಸಲಹಾ ಸಮಿತಿಯ ಸಭೆ 

ಅಪೋಲೋ ಹಾಸ್ಪಿಟಲ್ಸ್‌ ನಿಂದ ‘ಆಲ್ವೇಸ್ ಓಪನ್. ಆಲ್ವೇಸ್ ಹಿಯರ್’ ಭಾರತದಿಂದ ಜಾಗತಿಕ ಆರೋಗ್ಯಸೇವೆಯಲ್ಲಿ ಪ್ರಥಮ ಉಪಕ್ರಮ ಅಪೋಲೋ ಹಾಸ್ಪಿಟಲ್ಸ್‌ ಗಳಾದ್ಯಂತ ಭಾನುವಾರದಂದೂ ವೈದ್ಯಕೀಯ ಸಮಾಲೋಚನೆಗಳು, ರೋಗನಿರ್ಣಯ ಪರೀಕ್ಷೆಗಳು, ರೋಗತಡೆಯ ಆರೋಗ್ಯ ತಪಾಸಣೆಗಳು ಮತ್ತು ನಿಗದಿತ ಚಿಕಿತ್ಸಾ ಸೇವೆಗಳನ್ನು ವಿಸ್ತರಿಸುವ ತನ್ನ ಮೊದಲ ಉಪಕ್ರಮ ಪ್ರಾರಂಭಿಸಿದೆ

ನಂಜನಗೂಡು ವಿಧಾನಸಭಾ ಕ್ಷೇತ್ರದ  ಹುರ ಗ್ರಾಮದಲ್ಲಿ ಪೋಲಿಸ್ ಔಟ್ ಪೋಸ್ಟ್ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ

ಸದ್ಗುರು ಸನ್ನಿಧಿ ಬೆಂಗಳೂರಿನಲ್ಲಿ ವಿಜೃಂಭಣೆಯ ನಾಗರ ಪಂಚಮಿಯ ಆಚರಣೆ

ವಿಪ್ರೋ ಕನ್ಸ್ಯೂಮರ್ ಕೇರ್ ಡರ್ಮಟಚ್ ಅನ್ನು ಸ್ವಾಧೀನಪಡಿಸಿಕೊಳ್ಳುವ ಮೂಲಕ ಡಿಜಿಟಲ್ ಬ್ರಾಂಡ್ ಪ್ರವೇಶವನ್ನು ಆರಂಭಿಸಿದೆ

ಶ್ರೀ ಅಮ್ಮನಾಗಮ್ಮ ದೇವಾಲಯದಲ್ಲಿ ನಾಗರಪಂಚಮಿ ಹಬ್ಬ, ಭಕ್ತಾಧಿಗಳಿಂದ ಹಾಲಿನ ಅಭಿಷೇಕ