--Ads--
On: June 2, 2024 10:27 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್

ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಸಹಾಯವಾಣಿ ಸಂಖ್ಯೆ ಪ್ರಾರಂಭ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 01 : ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಜೂನ್ 3ರಂದು ಮತದಾನ ನಡೆಯಲಿದ್ದು, ಪದವೀಧರರು ಮತ ಚಲಾಯಿಸಲು ಅನುಕೂಲವಾಗುವಂತೆ ಸಹಾಯವಾಣಿ ಸಂಖ್ಯೆ 080-29902025 ಅನ್ನು ಆರಂಭಿಸಲಾಗಿದೆ.
ಪದವೀಧರ ಮತದಾರರು ಮತದಾನಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಂಂಂಂಂಂಂಂಂಂಂಂಂಂಂಂಂಂಂಂಂ

ಫೋಟೋಗ್ರಫಿ ಹಾಗೂ ವಿಡಿಯೋಗ್ರಫಿ ತರಬೇತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 01 (ಕರ್ನಾಟಕ ವಾರ್ತೆ): ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್ಸ್‌ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ 30 ದಿನಗಳ ಫೋಟೋಗ್ರಫಿ ಹಾಗೂ ವಿಡಿಯೋಗ್ರಫಿ ಉಚಿತ ತರಬೇತಿಯು 25 ಜುಲೈ 2024 ರಿಂದ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ ಯುವತಿಯರು ಅರ್ಜಿನ ಸಲ್ಲಿಸಬಹುದಾಗಿದೆ.

ಆಸಕ್ತ 18 ರಿಂದ 45 ರ್ಷಗ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಪ್ರದೇಶದ ಆಧಾರ್‌ ಕಾರ್ಡ್ ಹಾಗೂ ಬಿಪಿಎಲ್‌ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ತರಬೇತಿ ಪಡೆಯಲು DSLR Camara ಕಡ್ಡಾಯವಾಗಿ ಹೊಂದಿರತಕ್ಕದ್ದು.

ತರಬೇತಿಯು ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9241482541, 8884554510, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp

Join Now

Telegram

Join Now

Instagram

Join Now