ಗಿಡ ನೇಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ

ವಿಜಯ ದರ್ಪಣ ನ್ಯೂಸ್

 ಗಿಡ ನೇಡುವ ಮೂಲಕ ವಿಶ್ವ ಪರಿಸರ ದಿನಾಚರಣೆ 

 ಶ್ರೀ ಬಾಲಗಂಗಾಧರ ನಾಥ ಸ್ವಾಮೀಜಿ ನಗರ (ಬಿಜಿಎಸ್ ನಗರ) ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 05  : ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ದೇವನಹಳ್ಳಿ ಪ್ರಾದೇಶಿಕ ಅರಣ್ಯ ವಲಯದ ವತಿಯಿಂದ *ವಿಶ್ವ ಪರಿಸರ ದಿನಾಚರಣೆ* ಅಂಗವಾಗಿ “ನಮ್ಮ ಭೂಮಿ-ನಮ್ಮ ಭವಿಷ್ಯ, ನಮ್ಮ ಪೀಳಿಗೆಗೆ ಪುನಃಸ್ಥಾಪನೆ” ಎಂಬ ಘೋಷವಾಕ್ಯದೊಂದಿಗೆ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಆವರಣದಲ್ಲಿಂದು ಆಚರಿಸಲಾಯಿತು.


ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮ ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಬೆಂಗಳೂರು ಗ್ರಾಮಾಂತರ ಅರಣ್ಯ ಇಲಾಖೆಯ ಎ.ಸಿ.ಎಫ್ ಎಂ. ಶ್ರೀಧರ್, ದೇವನಹಳ್ಳಿ ವಲಯ ಅರಣ್ಯಾಧಿಕಾರಿ ಪವಿತ್ರ ವ್ಹಿ.ಜೆ ಸೇರಿ ಅರಣ್ಯ ಇಲಾಖೆಯ ಸಿಬ್ಬಂದಿ, ಇತರರು ಉಪಸ್ಥಿತರಿದ್ದರು.

&&&&&&&&&&&&&&&&&&&&&&&&&&

ಡೋಲು ಮತ್ತು ನಾದಸ್ವರ ಸಂಗೀತ ತರಬೇತಿಗಾಗಿ ಅರ್ಜಿ ಆಹ್ವಾನ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 05  : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೈಸೂರಿನ ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯದ ಮೂಲಕ ದೇವನಹಳ್ಳಿ ಟೌನ್/ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸವಿತಾ ಸಮಾಜದ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ತರಬೇತಿ ಕೇಂದ್ರಕ್ಕೆ 2024-25ನೇ ಸಾಲಿಗೆ ಡೋಲು-10 ಮತ್ತು ನಾದಸ್ವರ-03 ಒಟ್ಟು 13 ಖಾಲಿ ಸ್ಥಾನಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪ್ರವೇಶ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-2(ಎ)ರಲ್ಲಿ ಬರುವ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 13 ಸಂಜೆ 5.00 ಗಂಟೆಯವರೆಗೆ ಕಾಲಾವಕಾಶ ನಿಗಧಿಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಅರ್ಹತೆಗಳು
ಹಿಂದುಳಿದ ವರ್ಗಗಳ ಪ್ರವರ್ಗ-2(ಎ)ರಲ್ಲಿ ಬರುವ ಸವಿತಾ ಸಮಾಜ ಅಥವಾ ಅದರ ಉಪಜಾತಿಗಳಿಗೆ ಸೇರಿರಬೇಕು. ಕನಿಷ್ಠ ವಯೋಮಿತಿ 10 ವರ್ಷ ಹಾಗೂ ಗರಿಷ್ಠ ವಯೋಮಿತಿ 15 ವರ್ಷ (ಒಂದು ವೇಳೆ ಅಧ್ಯಯನ ಮಾಡುತ್ತಿರುವ 15 ವರ್ಷ ವಯೋಮಿತಿಯೊಳಗಿನ ವಿದ್ಯಾರ್ಥಿಗಳು ದೊರೆಯದ ಪಕ್ಷದಲ್ಲಿ ಮಾತ್ರ 18 ವರ್ಷದವರೆಗಿನ ಮಕ್ಕಳನ್ನು ಸ್ವಲ್ಪಮಟ್ಟಿಗೆ ಸೇರಿಸಲು ಅವಕಾಶ ನೀಡುವುದು). ಕುಟುಂಬದ ವಾರ್ಷಿಕ ಆದಾಯ ಮಿತಿ ರೂ. 2.00 ಲಕ್ಷಗಳು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080 27682059 (ಸಮಯ ಬೆಳಿಗ್ಗೆ 10.00 ರಿಂದ ಸಂಜೆ 5.30ರವರೆಗೆ, ಸಾರ್ವಜನಿಕ ರಜಾ ದಿನಗಳನ್ನು ಹೊರತುಪಡಿಸಿ) ಸಂಪರ್ಕಿಸಬಹುದಾಗಿದೆ.

ಅರ್ಜಿ ಪಡೆಯಲು ಹಾಗೂ ಹೆಚ್ಚಿನ ವಿವರಗಳಿಗಾಗಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ, ಮಿನಿ ವಿಧಾನಸೌಧದ ಹಿಂಭಾಗ, ಡಿವಿಎಂ ಕಾಲೋನಿ, ದೇವನಹಳ್ಳಿ ಟೌನ್ / ತಾಲ್ಲೂಕು ಇಲ್ಲಿ ಸಂಪರ್ಕಿಸಬಹುದು‌ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.