--Ads--

ಅಂತರಾಷ್ಟ್ರೀಯ ಯೋಗ ದಿನಾಚರಣೆ :ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ‌.ಎನ್ ಶಿವಶಂಕರ ಸೂಚನೆ

On: June 14, 2024 11:48 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್… 

ಅಂತರಾಷ್ಟ್ರೀಯ ಯೋಗ ದಿನಾಚರಣೆ:ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ‌.ಎನ್ ಶಿವಶಂಕರ ಸೂಚನೆ


ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 14  : 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದ ಕಾರ್ಯಕ್ರಮವು ದೇವನಹಳ್ಳಿ ಟೌನ್ ನ ಕ್ರೀಡಾಂಗಣದಲ್ಲಿ ಜೂನ್ 21 ರಂದು ನಡೆಯಲಿದ್ದು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವ ಸಂಬಂಧ ಪೂರ್ವಭಾವಿ ಸಭೆ” ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾಮಟ್ಟದ ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಬೆಳಿಗ್ಗೆ 6:00 ಗಂಟೆಯಿಂದ 8:30 ಗಂಟೆಯವರೆಗೆ ನಡೆಯಲಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ಅಧಿಕಾರಿಗಳು, ಸಿಬ್ಬಂದಿ, ಸಂಘಸಂಸ್ಥೆಗಳ ಪ್ರತಿನಿಧಿಗಳಿಂದ ಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ
ದೇವನಹಳ್ಳಿ ಕ್ರೀಡಾಂಗಣದ ಸ್ವಚ್ಛತೆ, ಕುಡಿಯುವ ನೀರು, ಲಘು ಉಪಹಾರದ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ ತುರ್ತು ಸಂದರ್ಭದಲ್ಲಿ ಆರೋಗ್ಯ ಇಲಾಖೆಯಿಂದ ತುರ್ತು ಚಿಕಿತ್ಸಾ ಅಂಬುಲೆನ್ಸ್ ವ್ಯವಸ್ಥೆ, ಸೇರಿದಂತೆ ಇನ್ನಿತರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಶಾಲಾ-ಕಾಲೇಜುಗಳು, ಹಾಸ್ಟೆಲ್ ಗಳಲ್ಲಿರುವ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಯಾ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕು. ಶಿಷ್ಟಾಚಾರದಂತೆ ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ, ಕಾರ್ಯಕ್ರಮ ಯಶಸ್ವಿಗೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

“ಮಹಿಳಾ ಸಬಲೀಕರಣಕ್ಕಾಗಿ ಯೋಗ ಎಂಬುದು 2024ರ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಘೋಷವಾಕ್ಯವಾಗಿದ್ದು, ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಸಂಘಸಂಸ್ಥೆಗಳ ಪ್ರತಿನಿಧಿಗಳು, ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯೋಗ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ಸಭೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.
ಈ ಸಂಧರ್ಬದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ. ಶುಹಬುದ್ದೀನ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುನೀಲ್ ಕುಮಾರ್, ಅಯುಷ್ ಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ.ಖುದ್ಸಿಯ ತಸ್‌ನೀಮ್.ಎಸ್.ಎ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ತಾವರೆಕೆರೆಯಲ್ಲಿ ಅದ್ಧೂರಿಯಾಗಿ ಜೈ ಭೀಮ್ ವಿನಾಯಕ ಗೆಳೆಯರ ಬಳಗದ 27ನೇ ವರ್ಷದ ಗಣೇಶೋತ್ಸವ

ನಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ: ಸಚಿವ ಕೆ.ಹೆಚ್ ಮುನಿಯಪ್ಪ

ಹೊಸಕೋಟೆಯಲ್ಲಿ ಮತದಾರರ ಜಾಗೃತಿ ಮ್ಯಾರಾಥಾನ್ ಹಾಗೂ SIR ವಿಶೇಷ ಆಂದೋಲನಕ್ಕೆ ಜಿ. ಪಂ. ಸಿಇಒ ಡಾ.ವಾಸಂತಿ ಅಮರ್ ಚಾಲನೆ

ದೇವನಹಳ್ಳಿ ತಾಲ್ಲೂಕು ಆಡಳಿತ ಸೌಧದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ

ತಾವರೆಕೆರೆಯಲ್ಲಿ ಅದ್ಧೂರಿ ಗಣೇಶೋತ್ಸವ ಜೈ ಭೀಮ್ ವಿನಾಯಕ ಗೆಳೆಯರ ಬಳಗದಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ : ರಸಮಂಜರಿ ಕಾರ್ಯಕ್ರಮಕ್ಕೆ ಮೆರುಗು

ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗುವುದನ್ನು ಖಚಿತಪಡಿಸಿಕೊಳ್ಳಲು ವ್ಯಾಪಕ ಕ್ರಮಗಳನ್ನು ಕೈಗೊಳ್ಳಲಾಗಿದೆ: ಮತದಾರರ ನೋಂದಣಾಧಿಕಾರಿ (ERO)